ಸಚಿವ Ashwath Narayan ವಿರುದ್ಧ FIR ದಾಖಲು
ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಸರ್ಕಾರಿ ಕಾಲೇಜುಗಳಲ್ಲಿ ಪ್ರಚಾರ ನಡೆಸಿದ ಆರೋಪದಡಿ ಉನ್ನತ ಸಚಿವ ಅಶ್ವಥ್ ನಾರಾಯಣ ವಿರುದ್ಧ FIR ದಾಖಲಾಗಿದೆ.
ವರದಿ : ನಂದನ್ ರಾಮಕೃಷ್ಣ, ಏಷ್ಯಾನೆಟ್ ಸುವರ್ಣ ನ್ಯೂಸ್
ಮಂಡ್ಯ (ಮೇ.28): ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ (Violation of Election Model Code ) ಸರ್ಕಾರಿ ಕಾಲೇಜುಗಳಲ್ಲಿ ಪ್ರಚಾರ ನಡೆಸಿದ ಆರೋಪದಡಿ ಉನ್ನತ ಸಚಿವ ಅಶ್ವಥ್ ನಾರಾಯಣ (Dr. Ashwath Narayan ) ವಿರುದ್ಧ FIR ದಾಖಲಾಗಿದೆ. 2ನೇ ACJ ಮತ್ತು JMFC ನ್ಯಾಯಾಲಯದ ಆದೇಶದಂತೆ ಮಂಡ್ಯದ (Mandya) ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. IPC ಸೆಕ್ಷನ್ 1860 (U/s-171C, 171F) ಮತ್ತು REPRESENTATION OF PEOPLE ACT(ಪ್ರಜಾಪ್ರತಿನಿಧಿ ಕಾಯ್ದೆ) 1950,1951,1989 (U/s-123) ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಪ್ರಕರಣದಲ್ಲಿ ಸಚಿವ ಅಶ್ವಥ್ ನಾರಾಯಣ A1 ಹಾಗೂ ದಕ್ಷಿಣ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ A2 ಆರೋಪಿಗಳಾಗಿದ್ದಾರೆ.
ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಚುನಾವಣಾ ಪ್ರಚಾರ ನಡೆಸಿದ ಆರೋಪ: ಮೇ 16 ರಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ್ದ ಉನ್ನತ ಶಿಕ್ಷಣ (education) ಸಚಿವರಾದ ಅಶ್ವಥ್ ನಾರಾಯಣ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆ ಮಹಿಳಾ ಕಾಲೇಜು ಹಾಗೂ ವೈದ್ಯಕೀಯ ಕಾಲೇಜಿನಲ್ಲಿ ಚುನಾವಣಾ ಪ್ರಚಾರ ನಡೆಸಿದ್ದರು ಎಂಬ ಆರೋಪ ಕೇಳಿಬಂದಿದೆ. ಅಂದು ಬಿಜೆಪಿ (BJP) ಅಭ್ಯರ್ಥಿ ಮೈ.ವಿ ರವಿಶಂಕರ್ ಹಾಗೂ ಸ್ಥಳೀಯ ಬಿಜೆಪಿ ನಾಯಕರ ಜೊತೆ ಕಾಲೇಜುಗಳಿಗೆ ಭೇಟಿ ನೀಡಿದ್ದ ಸಚಿವರು ವಿದ್ಯಾರ್ಥಿಗಳು, ಪ್ರಾಧ್ಯಾಪಕರಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
HIJAB BAN; ಹೈಕೋರ್ಟ್ ಆದೇಶದ ವಿರುದ್ಧದ ಮೇಲ್ಮನವಿ ಪರಿಶೀಲನೆಗೆ ಸುಪ್ರೀಂ ಒಪ್ಪಿಗೆ
ಸಚಿವರ ವಿರುದ್ಧ ದೂರು ನೀಡಿದ್ದ ಕಾಂಗ್ರೆಸ್: ಮೇ 16 ರಂದು ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿ ಸಚಿವ ಅಶ್ವಥ್ ನಾರಾಯಣ ವಿರುದ್ಧ ಮಂಡ್ಯ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್ ದೂರು ನೀಡಿದ್ದರು. ದೂರು ಆಧರಿಸಿ ತನಿಖೆ ನಡೆಸಿದ್ದ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ತಮ್ಮ ವರದಿಯಲ್ಲಿ ಸಚಿವರು ನೀತಿ ಸಂಹಿತೆ ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದು ಉಲ್ಲೇಖಿಸಿದ್ರು. ಈ ಕುರಿತು ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಾದ ಹಿನ್ನೆಲೆ, FIR ದಾಖಲಿಸಿ, ತನಿಖೆ ನಡೆಸುವಂತೆ ಕೋರ್ಟ್ ಸೂಚಿಸಿತ್ತು. ಇದೀಗ ಕೋರ್ಟ್ ಆದೇಶದಂತೆ ಪೂರ್ವ ಠಾಣೆ ಅಪರಾಧ ವಿಭಾಗದ PSI ಕೆ.ಎನ್. ಕೇಶವಮೂರ್ತಿ ಸಚಿವರ ವಿರುದ್ಧ FIR ದಾಖಲಿಸಿದ್ದಾರೆ.
ಸಚಿವರ ವಿರುದ್ಧ ಕಾಂಗ್ರೆಸ್ ದೂರು, ಸಿದ್ದು ವಿರುದ್ಧ ಬಿಜೆಪಿ ಪ್ರತಿ ದೂರು: ಸಚಿವ ಅಶ್ವಥ್ ನಾರಾಯಣ್ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದ ಬಗ್ಗೆ ಕಾಂಗ್ರೆಸ್ ದೂರು ದಾಖಲಿಸಿದ ಬೆನ್ನಲ್ಲೇ ಮಂಡ್ಯ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುರೇಶ್ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ರು. ಮೇ 24 ರಂದು ಕಾಂಗ್ರೆಸ್ ಅಭ್ಯರ್ಥಿ ಮಧು ಜಿ ಮಾದೇಗೌಡ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ.
ಕೆಳದಿ ಚೆನ್ನಮ್ಮನ ಏಟಿಗೆ ನುಚ್ಚುನೂರಾಗಿ ಓಡಿಹೋದ ಔರಂಗಜೇಬನ ಸೈನ್ಯ : BY RAGHAVENDRA
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರ್ಕಾರಿ ಕಾರು ಬಳಸದಂತೆ ನಿಯಮವಿದ್ದರು KA 01 GA 7002 ಸಂಖ್ಯೆಯ ಸರ್ಕಾರಿ ಕಾರಿನಲ್ಲಿ ಮಂಡ್ಯಕ್ಕೆ ಆಗಮಿಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಸರ್ಕಾರಿ ಕಾರು ದುರುಪಯೋಗ ಪಡಿಸಿಕೊಂಡ ಸಿದ್ದರಾಮಯ್ಯ ವಿರುದ್ಧ ಕಾನೂನು ರಿತ್ಯ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದರು.