Asianet Suvarna News Asianet Suvarna News
breaking news image

ರಾಹುಲ್‌ ಗಾಂಧಿ ನಿಂದನೆ ಆರೋಪ; ಬಿಜೆಪಿ ಶಾಸಕ ಡಾ ಭರತ್ ಶೆಟ್ಟಿ ವಿರುದ್ಧ ಎಫ್‌ಐಆರ್!

ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಕಪಾಳಮೋಕ್ಷ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಡಾ.ವೈ ಭರತ್ ಶೆಟ್ಟಿ ಅವರ ವಿರುದ್ಧ ಕಾವೂರು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

FIR filed agains bjp mla dr bharat Shetty for provocative remarks about Rahul Gandhi at mangaluru rav
Author
First Published Jul 11, 2024, 6:49 AM IST

ಮಂಗಳೂರು (ಜು.11): ಅವನೊಬ್ಬ ಹುಚ್ಚ, ಪಾರ್ಲಿಮೆಂಟ್‌ಗೆ ಹೋಗಿ ಕಪಾಳಕ್ಕೆ ಬಾರಿಸಬೇಕು ಅನಸ್ತಿದೆ ಎಂಬಂತೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ(Rahul gandhi) ಅವರಿಗೆ ಕಪಾಳಮೋಕ್ಷ ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಡಾ.ವೈ ಭರತ್ ಶೆಟ್ಟಿ(BJP MLA Dr Y Bharat shetty) ಅವರ ವಿರುದ್ಧ ಕಾವೂರು ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಕಾಂಗ್ರೆಸ್ ಕಾರ್ಪೊರೇಟರ್ ಅನಿಲ್ ಕುಮಾರ್(congress corporater Anilkumar) ನೀಡಿದ ದೂರಿನ ಆಧಾರದ ಮೇಲೆ ಭರತ್ ಶೆಟ್ಟಿ ವಿರುದ್ಧ ಬಿಎನ್‌ಎಸ್ ಸೆಕ್ಷನ್ 353 (2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದ್ದಾರೆ.

ಸಾಮಾನ್ಯ ಕಾರ್ಯಕರ್ತನ ಮೈಮುಟ್ಟಿ ನೋಡಲಿ: ಶಾಸಕ ಭರತ್‌ ಶೆಟ್ಟಿಗೆ ರಮಾನಾಥ ರೈ ಸವಾಲು

ಸಂಸತ್ತಿನಲ್ಲಿ ಹಿಂದೂಗಳ ಕುರಿತು ರಾಹುಲ್ ಗಾಂಧಿ ನೀಡಿದ ಹೇಳಿಕೆ ಖಂಡಿಸಿ ಸೋಮವಾರ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕರ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಶಾಸಕ, ಅವನು ಹಿಂದೂ ವಿರೋಧಿ ನೀತಿಯನ್ನ ಅನುಸರಿಸುತ್ತಿದ್ದಾನೆ. ನಾವು ಅವನಿಗೆ ಯಾವ ಶಬ್ದ ಪ್ರಯೋಗಿಸಬಹುದು ಅಂತಾ ನೋಡಿ. ಅವನ ಹೇಳಿಕೆಗಳನ್ನ ಗಮಿಸಿದರೆ ಅವನೊಬ್ಬ ದೊಡ್ಡ ಹುಚ್ಚ ಅನ್ನೋದು ಸ್ಪಷ್ಟ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಲೆತ್ನಿಸಿದ ಖತರ್ನಾಕ್‌ ಚಡ್ಡಿಗ್ಯಾಂಗ್ ಮೇಲೆ ಮಂಗಳೂರಿನಲ್ಲಿ ಶೂಟೌಟ್

ಹಿಂದೂಗಳನ್ನು ಹಿಂಸಾವಾದಿಗಳೆನ್ನುತ್ತಾನೆ. ಶಿವನ ಫೋಟೊ ಬೇರೆ ಹಿಡಿದು ನಿಂತಿದ್ದ. ಶಿವ ಮೂರನೇ ಕಣ್ಣು ಬಿಟ್ಟರೆ ಸುಟ್ಟು ಬೂದಿಯಾಗ್ತಾನೆ ಅಂತಾ ಈ ಹುಚ್ಚನಿಗೆ ಗೊತ್ತಿಲ್ಲ ಹಿಂದೂಗಳ ಬಗ್ಗೆ ಏನೂ ಮಾತಾಡಿದರೂ ಸುಮ್ಮನಿರ್ತಾರೆ ಅನ್ನೋ ಭಾವನೆ ರಾಹುಲ್ ಗಾಂಧಿಗೆ ಬಂದಿರಬಹುದು. ಅವನು ಪಾರ್ಲಿಮೆಂಟ್‌ನಲ್ಲಿ ಬೊಗಳುವ ಸಂದರ್ಭ ಇಲ್ಲಿನ ಸ್ಥಳೀಯ ಕಾಂಗ್ರೆಸ್ ನಾಯಕರು ಬಾಲ ಬಿಚ್ಚಲು ಶುರು ಮಾಡಿದ್ದಾರೆ ಎಂದು ಕಿಡಿಕಾರಿದ್ದರು.

Latest Videos
Follow Us:
Download App:
  • android
  • ios