Asianet Suvarna News Asianet Suvarna News

ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯನನ್ನು ಹೊಡೆದು ಹಾಕಿ ಎಂದಿದ್ದ ಅಶ್ವತ್ಥ್‌ ವಿರುದ್ಧ ಎಫ್‌ಐಆರ್‌

‘ಸಿದ್ದರಾಮಯ್ಯರನ್ನು ಹೊಡೆದು ಹಾಕಿ’ ಎಂಬ ಹೇಳಿಕೆಗೆ ಸಂಬಂಧಿಸಿ ಮಾಜಿ ಸಚಿವ ಡಾ.ಸಿ.ಎನ್‌.ಅಶ್ವತ್ಥ್‌ ನಾರಾಯಣ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ದೇವರಾಜ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

fir registered against former minister ashwath narayan in mysuru over hate speech against siddaramaiah gvd
Author
First Published May 25, 2023, 11:48 AM IST

ಮೈಸೂರು (ಮೇ.25): ‘ಸಿದ್ದರಾಮಯ್ಯರನ್ನು ಹೊಡೆದು ಹಾಕಿ’ ಎಂಬ ಹೇಳಿಕೆಗೆ ಸಂಬಂಧಿಸಿ ಮಾಜಿ ಸಚಿವ ಡಾ.ಸಿ.ಎನ್‌.ಅಶ್ವತ್ಥ್‌ ನಾರಾಯಣ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ದೇವರಾಜ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಡಾ.ಅಶ್ವತ್ಥ್‌ ನಾರಾಯಣ ಅವರು ಫೆ.15 ರಂದು ಸಾತನೂರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಟಿಪ್ಪು ಸುಲ್ತಾನ್‌ನನ್ನು ಮಂಡ್ಯದ ಉರಿಗೌಡ ಮತ್ತು ನಂಜೇಗೌಡರು ಹೇಗೆ ಕೊಂದು ಹಾಕಿದರೋ ಅದೇ ರೀತಿ ಸಿದ್ದರಾಮಯ್ಯರನ್ನು ಹೊಡೆದು ಹಾಕಿ ಎಂದು ಬಹಿರಂಗ ಹೇಳಿಕೆ ನೀಡಿದ್ದರು. 

ಈ ಬಗ್ಗೆ ಕಾಂಗ್ರೆಸ್‌ ಮುಖಂಡರು ಫೆ.17 ರಂದು ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿಂದೆ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದಾಗ ಒಂದು ವರ್ಗದವರು ಕೊಲೆಗೆ ಯತ್ನಿಸಿದ್ದರು.  ಈ ವಿಚಾರದಲ್ಲಿ ಮಡಿಕೇರಿಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಸಿದ್ದರಾಮಯ್ಯರ ಕೊಲೆಗೆ ಮತ್ತೊಮ್ಮೆ ಸಮಾಜ ದ್ರೋಹಿಗಳು ಯತ್ನಿಸುವ ಸಾಧ್ಯತೆ ಇದೆ. ಪ್ರಸ್ತುತ ಡಾ.ಅಶ್ವತ್ಥ್‌ ನಾರಾಯಣ ಅವರು ನೀಡಿದ ಹೇಳಿಕೆ ರಾಜ್ಯಾದ್ಯಂತ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಪಡೆದು ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಕುಂದುಂಟಾಗಿದೆ. 

ಸೋತಿದ್ದಕ್ಕೆ ಎದೆಗುಂದಬೇಕಿಲ್ಲ: ಶಾಸಕರಿಗೆ ಧೈರ್ಯ ತುಂಬಿದ ಎಚ್‌.ಡಿ.ದೇವೇಗೌಡ

ಡಾ.ಅಶ್ವತ್‌ ನಾರಾಯಣ್‌ ಅವರು ಸಿದ್ದರಾಮಯ್ಯರನ್ನು ಕೊಲೆ ಮಾಡಲು ಸುಫಾರಿ ನೀಡುವ ಸಂಶಯವಿದೆ. ಆದ್ದರಿಂದ ಕೂಡಲೇ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ, ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಕೋರಿದ್ದಾರೆ. ಈ ಸಂಬಂಧ ಹಿಂದೆಯೇ ದೂರು ನೀಡಲಾಗಿತ್ತು. ಆದರೂ ಪ್ರಕರಣ ದಾಖಲಿಸಿರಲಿಲ್ಲ. ಈಗ ಕಾಂಗ್ರೆಸ್‌ ನಿಯೋಗ ಬುಧವಾರ ದೇವರಾಜ ಠಾಣೆಗೆ ಭೇಟಿ ನೀಡಿ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಎಫ್‌ಐಆರ್‌ ದಾಖಲಾಗಿದೆ.

ಟಿಪ್ಪು ಜಯಂತಿ ಬಗ್ಗೆ ಕಾಂಗ್ರೆಸ್‌ ಕಾದು ನೋಡುವ ತಂತ್ರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಈ ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ಟಿಪ್ಪು ಜಯಂತಿ ಆಚರಣೆ ತೀವ್ರ ವಿವಾದಕ್ಕೀಡಾಗಿದ್ದ ಹಿನ್ನೆಲೆಯಲ್ಲಿ ಈಗ ಮತ್ತೆ ಈ ಜಯಂತಿ ಆಚರಣೆ ಬಗ್ಗೆ ಸರ್ಕಾರ ಯಾವುದೇ ನಿರ್ಧಾರ ಮಾಡಿಲ್ಲ. ಪ್ರಸ್ತುತ ಕನ್ನಡ ಸಂಸ್ಕೃತಿ ಇಲಾಖೆ ಪ್ರಕಟಿಸಿರುವ 31 ಮಹನೀಯರ ಜಯಂತಿ ಆಚರಣೆ ಪಟ್ಟಿಹಿಂದಿನ ಬಿಜೆಪಿ ಸರ್ಕಾರ ಏಪ್ರಿಲ್‌ನಲ್ಲೇ ಸಿದ್ದಪಡಿಸಿತ್ತಾದರೂ ಚುನಾವಣೆ ಹಿನ್ನೆಲೆಯಲ್ಲಿ ಹೊರಬಂದಿರಲಿಲ್ಲ. 

ಭರವಸೆ ನೀಡುವಾಗ ನಿಮಗೆ ತಲೆ ಇರಲಿಲ್ಲವೇ, ಕರೆಂಟ್‌ ಬಿಲ್‌ ಕಟ್ಟದಂತೆ ಕರೆ ನೀಡುವೆ: ಎಚ್‌ಡಿಕೆ

ಬಿಜೆಪಿ ಸಿದ್ದಪಡಿಸಿದ್ದ ಪಟ್ಟಿಯಲ್ಲಿ ಟಿಪ್ಪು ಜಯಂತಿ ಸೇರಿಸಿರಲಿಲ್ಲ ಎನ್ನಲಾಗುತ್ತಿದೆ. ಈಗ ಅದೇ ಪಟ್ಟಿಯನ್ನು ಚುನಾವಣಾ ಫಲಿತಾಂಶ ಬಂದ ಬಳಿಕ ಮೇ 16ರಂದು ಪ್ರಕಟವಾಗಿದ್ದು ತಡವಾಗಿ ಬಹಿರಂಗವಾಗಿದೆ. ಈ ಪಟ್ಟಿಯಲ್ಲಿ ಟಿಪ್ಪು ಜಯಂತಿ ಸೇರಿಸುವುದಾಗಲಿ ಅಥವಾ ಕೈಬಿಡಲಾಗಿದೆ ಎಂದಾಗಲಿ ಯಾವ ಹೇಳಿಕೆ, ನಿರ್ಧಾರ ತಿಳಿಸುವ ಗೋಜಿಗೆ ಸರ್ಕಾರ ಹೋಗಿಲ್ಲ. ಟಿಪ್ಪು ಜಯಂತ ನವೆಂಬರ್‌ ಮಾಸದಲ್ಲಿದ್ದು ಆ ವೇಳೆಗೆ ಈ ಬಗ್ಗೆ ತೀರ್ಮಾನ ಕೈಗೊಳ್ಳೋಣ ಎಂಬ ತೀರ್ಮಾನಕ್ಕೆ ಸರ್ಕಾರ ಬಂದಿದೆ ಎನ್ನಲಾಗಿದೆ.

Follow Us:
Download App:
  • android
  • ios