Asianet Suvarna News Asianet Suvarna News

ಶಾಸಕ ಜಮೀರ್‌ಗೆ ಕೊಲೆ ಬೆದರಿಕೆ: ಜೆಡಿಎಸ್‌ ವಕ್ತಾರನ ವಿರುದ್ಧ ಕೇಸ್ ಬುಕ್

* ಜೆಡಿಎಸ್ ವಕ್ತಾರ ನರಸಿಂಹಮೂರ್ತಿ ವಿರುದ್ಧ ಎಫ್ ಐ ಆರ್ ದಾಖಲು.
* ಶಾಸಕ ಜಮೀರ್ ಅಹಮದ್ ಗೆ ಕೊಲೆ ಬೆದರಿಕೆ ಹಾಕಿದ್ದರೆನ್ನಲಾದ ಪ್ರಕರಣದಲ್ಲಿ ಎಫ್ ಐ ಆರ್.
* ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

FIR Registered By Chamarajpet Police On JDS spokesperson Over life threatening to Zameer rbj
Author
Bengaluru, First Published Aug 25, 2021, 4:58 PM IST
  • Facebook
  • Twitter
  • Whatsapp

ಬೆಂಗಳೂರು, (ಆ.25): ನಗರದ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್​ಗೆ ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಜೆಡಿಎಸ್ ವಕ್ತಾರನ‌ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಜೆಡಿಎಸ್ ವಕ್ತಾರ ನರಸಿಂಹ ಮೂರ್ತಿ ವಿರುದ್ಧ ದೂರು ದಾಖಲಾಗಿದೆ.  ಹೆಚ್​ಡಿಕೆ ಗಜಪಡೆ ಎಂಬ ಫೇಸ್​ಬುಕ್​ ಅಕೌಂಟ್​ನಲ್ಲಿ ಭದ್ರತೆ ಇದ್ದರೂ ಹಲ್ಲೆ ಮಾಡಿ, ಹತ್ಯೆ ಮಾಡುತ್ತೇವೆ ಎಂದು ಜಮೀರ್ ಅಹ್ಮದ್ ಖಾನ್​ಗೆ ವಿಡಿಯೋ ಮೂಲಕ ಕೊಲೆ ಬೆದರಿಕೆ ಹಾಕಿದ್ದರು.

ಗೆಸ್ಟ್‌ಹೌಸ್‌ ವಿಷಯಕ್ಕೆ ಎಚ್‌ಡಿಕೆ - ಜಮೀರ್‌ ಗಲಾಟೆ

 ಜೊತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ನವೀನ್ ಗೌಡ ಎಂಬುವವರು ಜೆಡಿಎಸ್ ವಕ್ತಾರ ನರಸಿಂಹ ಮೂರ್ತಿ ವಿರುದ್ಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಗೆಸ್ಟ್ ಹೌಸ್ ಖಾಲಿ ಮಾಡಿಸುವ ವಿಚಾರದಲ್ಲಿ ಜಮೀರ್ ಮತ್ತು ಕುಮಾರಸ್ವಾಮಿ ನಡುವೆ ಮಾತಿಗೆ ಮಾತು ಬೆಳೆದಿತ್ತು. ಈ ಸಂಧರ್ಭದಲ್ಲಿ ಜಮೀರ್ ವಿರುದ್ದ ನರಸಿಂಹಮೂರ್ತಿ ವಿಡಿಯೋ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ .

ನವೀನ್ ಗೌಡ ದೂರಿನ ಮೇರೆಗೆ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಜೆಡಿಎಸ್ ವಕ್ತಾರ ನರಸಿಂಹ ಮೂರ್ತಿ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಮುಂದಿನ ವಿಚಾರಣೆ ಮಾಡಲಿದ್ದಾರೆ.

Follow Us:
Download App:
  • android
  • ios