ಶೀಘ್ರ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ: ಯಡಿಯೂರಪ್ಪ
ರಾಜ್ಯದಲ್ಲಿ ಐದಾರು ಹಾಲಿ ಶಾಸಕರಿಗೆ ಟಿಕೆಟ್ ಕಟ್ ಮಾಡಲಾಗುತ್ತದೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾಯಿತು. ಆದರೆ. ಈ ಬಗ್ಗೆ ತಾವು ಹೇಳಿಕೆ ನೀಡಿಲ್ಲ. ಸರ್ವೆ ಕಾರ್ಯವನ್ನು ನಡೆಸಲಾಗುತ್ತಿದೆ. ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ತೀರ್ಮಾನಿಸಲಾಗಿದೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿಗೆ ಉತ್ತಮ ವಾತಾವರಣವಿದೆ: ಬಿ.ಎಸ್.ಯಡಿಯೂರಪ್ಪ
ಸಿಂಧನೂರು(ಮಾ.12): ರಾಜ್ಯ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶೀಘ್ರದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹಸಚಿವ ಅಮಿತ್ ಶಾ ಸೇರಿದಂತೆ ಚುನಾವಣಾ ಸಮಿತಿಯವರು ಚರ್ಚಿಸಿ ಬಿಡುಗಡೆ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಐದಾರು ಹಾಲಿ ಶಾಸಕರಿಗೆ ಟಿಕೆಟ್ ಕಟ್ ಮಾಡಲಾಗುತ್ತದೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾಯಿತು. ಆದರೆ. ಈ ಬಗ್ಗೆ ತಾವು ಹೇಳಿಕೆ ನೀಡಿಲ್ಲ. ಸರ್ವೆ ಕಾರ್ಯವನ್ನು ನಡೆಸಲಾಗುತ್ತಿದೆ. ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ತೀರ್ಮಾನಿಸಲಾಗಿದೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿಗೆ ಉತ್ತಮ ವಾತಾವರಣವಿದೆ. ಬಜೆಟ್‌ನಲ್ಲಿ ಅನೇಕ ಅಭಿವೃದ್ಧಿಪರ ಯೋಜನೆಗಳನ್ನು ಪ್ರಕಟಿಸಿದ್ದು, ಇದು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪೂರಕವಾಗಲಿದೆ ಎಂದು ಹೇಳಿದರು.
ಸಿದ್ದರಾಮಯ್ಯ ಕಾಂಗ್ರೆಸ್‌ನ ಹರಕೆಯ ಕುರಿ: ಶ್ರೀರಾಮುಲು
ರಾಜ್ಯದಲ್ಲಿರುವ ಲಂಬಾಣಿ ತಾಂಡ, ಗೊಲ್ಲರ ಹಟ್ಟಿ, ಕುರುಬರ ಹಟ್ಟಿಗಳಲ್ಲಿ ವಾಸಿಸುವ ಕುಟುಂಬಗಳಿಗೆ ಈಗಾಗಲೇ 50 ಸಾವಿರ ಹಕ್ಕುಪತ್ರಗಳನ್ನು ಕಲಬುರಗಿಯಲ್ಲಿ ವಿತರಿಸಲಾಗಿದೆ. ದಾವಣಗೆರೆಯಲ್ಲಿ ಲಂಬಾಣಿ ತಾಂಡಾದ ಕುಟುಂಬಗಳಿಗೆ 12 ಸಾವಿರ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗುವುದು. ವಿಶೇಷವಾಗಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದವರಿಗೆ ಮೀಸಲಾತಿ ಹೆಚ್ಚಳ ಮಾಡಿ ಶಕ್ತಿ ತುಂಬಲಾಗಿದೆ. ರಾಯಚೂರಿನಲ್ಲಿ ಏಮ್ಸ್ ಮಾದರಿ ಆಸ್ಪತ್ರೆ, ವಿಮಾನ ನಿಲ್ದಾಣ, ಐಐಐಟಿ ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು.
ಸಂತಾಪ:
ಮಾಜಿ ಸಂಸದ ಧ್ರುವನಾರಾಯಣ ಹೃದಯಾಘಾತದಿಂದ ಅಕಾಲಿಕವಾಗಿ ನಿಧನರಾಗಿರುವುದು ನೋವು ತಂದಿದೆ. ಅವರು ಪ್ರಾಮಾಣಿಕ, ಕ್ರಿಯಾಶೀಲ ಮತ್ತು ಪಕ್ಷನಿಷ್ಠರಾಗಿದ್ದರು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ನೀಡಲಿ ಎಂದು ಭಾವುಕರಾಗಿ ಹೇಳಿದರು. ಕೊಪ್ಪಳ ಸಂಸದ ಸಂಗಣ್ಣ ಕರಡಿ, ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ ಅಧ್ಯಕ್ಷ ಕೆ.ವಿರೂಪಾಕ್ಷಪ್ಪ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಸೇರಿ ಮತ್ತಿತರರು ಇದ್ದರು.