ರಾಜ್ಯ ಬಿಜೆಪಿ ನಾಯಕತ್ವ ಸರಿಪಡಿಸಿ: ಅಮಿತ್ ಶಾಗೆ ಎಚ್‌ಡಿಕೆ ಮನವಿ
ರಾಜ್ಯದಲ್ಲಿನ ಬಿಜೆಪಿ ನಾಯಕತ್ವ ಸರಿಪಡಿಸಿ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ವರಿಷ್ಠರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು (ಸೆ.23): ರಾಜ್ಯದಲ್ಲಿನ ಬಿಜೆಪಿ ನಾಯಕತ್ವ ಸರಿಪಡಿಸಿ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ವರಿಷ್ಠರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಸಮಾಲೋಚನೆ ನಡೆಸುವ ವೇಳೆ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿಯ ಸಂಘಟನೆ ಬಗ್ಗೆಯೂ ಪ್ರಸ್ತಾಪಿಸಿದರು. ಪ್ರಸ್ತುತ ರಾಜ್ಯ ಬಿಜೆಪಿಯಲ್ಲಿ ಮೂರು ಬಣಗಳಿವೆ.
ಈ ಬಣಗಳ ನಡುವಿನ ಅಸಮಾಧಾನ ಸರಿಪಡಿಸಬೇಕು. ಅಂದಾಗ ಮಾತ್ರ ಲೋಕಸಭಾ ಚುನಾವಣೆಯಲ್ಲಿ ಉಭಯ ಪಕ್ಷಗಳ ಮೈತ್ರಿ ಯಶಸ್ವಿಯಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಇದೇ ವೇಳೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಒಂದಾಗುವ ರೀತಿ ಕಾರ್ಯಕ್ರಮಗಳು ರೂಪಿಸಬೇಕು. ಇಲ್ಲದಿದ್ದರೆ ಮೈತ್ರಿ ಕೇವಲ ಹೆಸರಿಗೆ ಮಾತ್ರ ಎಂಬಂತಾಗುತ್ತದೆ. ಈ ಮೈತ್ರಿ ದೀರ್ಘಕಾಲೀನವಾಗಿರಬೇಕು ಎಂದರೆ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಹೊಂದಾಣಿಕೆ ಮೂಡಬೇಕು ಎಂಬ ಅನಿಸಿಕೆಯನ್ನೂ ಹೊರಹಾಕಿದರು ಎಂದು ಮೂಲಗಳು ತಿಳಿಸಿವೆ.
ಚುನಾವಣೆಗೆ ಸಿದ್ದರಾಮಯ್ಯ ಕುಕ್ಕರ್ ಕೊಟ್ಟಿದ್ದಾರೆಂದು ನಾನು ಹೇಳಿಲ್ಲ: ಸಿಎಂ ಪುತ್ರ
ಸರ್ಕಾರಕ್ಕೆ ಜನಹಿತಕ್ಕಿಂತ ರಾಜಕೀಯವೇ ಮುಖ್ಯವಾಗಿದೆ: ಕಾಂಗ್ರೆಸ್ ಪಕ್ಷಕ್ಕೆ ತಮಿಳುನಾಡಿನ ಜತೆ ರಾಜಕೀಯ ಹಿತಾಸಕ್ತಿ ತಳುಕು ಹಾಕಿಕೊಂಡಿರುವುದರಿಂದಲೇ ರಾಜ್ಯಕ್ಕೆ ಕಾವೇರಿ ವಿಷಯದಲ್ಲಿ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರಕ್ಕೆ ಜನಹಿತಕ್ಕಿಂತ ರಾಜಕೀಯ ಹಿತವೇ ಮುಖ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಕಾವೇರಿ ವಿಚಾರವಾಗಿ ಸುಪ್ರೀಂಕೋರ್ಟ್ ತೀರ್ಪು ಪ್ರಕಟವಾದ ಬಳಿಕ ಟ್ವಿಟರ್‌ನಲ್ಲಿ ರಾಜ್ಯ ಸರ್ಕಾರ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.
ಡಿಎಂಕೆ ಅಂಗಪಕ್ಷವಾಗಿರುವ ಇಂಡಿಯಾ ಮೈತ್ರಿಕೂಟಕ್ಕೆ ಶಕ್ತಿ ತುಂಬುವ ಉದ್ದೇಶದಿಂದ ರಾಜ್ಯದ ಹಿತವನ್ನು ಬಲಿಗೊಟ್ಟಿದೆ. ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಕಾವೇರಿ ಬಿಕ್ಕಟ್ಟು ಸ್ಪಷ್ಟ ಉದಾಹರಣೆ. ಸುಪ್ರೀಂಕೋರ್ಟ್ ಆದೇಶ ನಿಜಕ್ಕೂ ದುರದೃಷ್ಟಕರ. ಆದರೆ, ಇಲ್ಲಿ ನ್ಯಾಯಾಲಯವನ್ನು ದೂರುವಂತಿಲ್ಲ. ಹೆಜ್ಜೆಹೆಜ್ಜೆಗೂ ರಾಜ್ಯ ಸರ್ಕಾರ ತಪ್ಪು ಮಾಡಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಆ.10ರಂದು ಕಾವೇರಿ ಜನ ನಿಯಂತ್ರಣ ಸಭೆ ನಡೆದಿದ್ದು, ಮರುದಿನ ಕಾವೇರಿ ಜಲನಿರ್ವಹಣಾ ಪ್ರಾಧಿಕಾರ ಸಭೆ ಜರುಗಿತು. ಪ್ರಾಧಿಕಾರವು ಐದು ಸಾವಿರ ಕ್ಯೂಸೆಕ್ ನೀರು ಬಿಡಿ ಎಂದು ಸೂಚಿಸಿದ ತಕ್ಷಣವೇ ಸುಪ್ರೀಂಕೋರ್ಟ್‌ಗೆ ತುರ್ತು ಅರ್ಜಿ ಸಲ್ಲಿಸಿ, ನ್ಯಾಯಾಲಯಕ್ಕೆ ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು. ನಿಯಂತ್ರಣ ಸಮಿತಿ, ಪ್ರಾಧಿಕಾರದ ಸಭೆಗಳನ್ನು ಬಹಳ ಲಘುವಾಗಿ ಪರಿಗಣಿಸಿತು. ಸರ್ವಪಕ್ಷ ಸಭೆಯಲ್ಲಿ ಪ್ರತಿಪಕ್ಷಗಳ ನಾಯಕರ ಸಲಹೆಗಳನ್ನು ಗಾಳಿಗೆ ತೂರಿತು ಎಂದು ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಈ ದೇಶದ ಬೆಸ್ಟ್ ಸಿಎಂ: ಶಾಸಕ ಬಸವರಾಜ ರಾಯರೆಡ್ಡಿ
ಕಾವೇರಿ ವಿಷಯ ಕೋರ್ಟಿನಲ್ಲಿ ಬಗೆಹರಿಯುವುದಿಲ್ಲ ಎಂದು ಹೇಳಿದ್ದೆ. ಈಗ ತಮಿಳುನಾಡಿಗೆ ಅನುಕೂಲವಾಗಿದ್ದು, ನಮಗೆ ಅನ್ಯಾಯವಾಗಿದೆ. ಈ ತಿಕ್ಕಾಟ ಸಾಗುತ್ತಿರುವ ದಿಕ್ಕು ನೋಡಿದರೆ ಒಕ್ಕೂಟ ವ್ಯವಸ್ಥೆಗೆ ಗೌರವ ಸಿಗುವಂತಿಲ್ಲ. ಪ್ರಾಧಿಕಾರದ ಆದೇಶವನ್ನು ಸುಪ್ರೀಂಕೋರ್ಟ್ ಹೇಳಿದೆ. ಮರು ಪರಿಶೀಲನಾ ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.