ಸರ್ಕಾರಕ್ಕೆ ರೈತರ ಜೀವಕ್ಕಿಂತ ರಾಜಕೀಯ ಮುಖ್ಯ: ಬೊಮ್ಮಾಯಿ

ರಾಜ್ಯದಲ್ಲಿ ಮುಂಗಾರು ಮಳೆ ವೈಫಲ್ಯವಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಹಾಗೂ ಅವರ ಸಚಿವ ಸಂಪುಟಕ್ಕೆ ರಾಜ್ಯ ರೈತರ ಜೀವಕ್ಕಿಂತ ರಾಜಕೀಯ ಮುಖ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. 

Former CM Basavaraj Bommai Slams On Congress Govt gvd

ಬೆಂಗಳೂರು (ಜು.18): ರಾಜ್ಯದಲ್ಲಿ ಮುಂಗಾರು ಮಳೆ ವೈಫಲ್ಯವಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಹಾಗೂ ಅವರ ಸಚಿವ ಸಂಪುಟಕ್ಕೆ ರಾಜ್ಯ ರೈತರ ಜೀವಕ್ಕಿಂತ ರಾಜಕೀಯ ಮುಖ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಮುಖ್ಯಮಂತ್ರಿ ಹಾಗೂ ಅವರ ಸಚಿವ ಸಂಪುಟ ವಿರೋಧ ಪಕ್ಷಗಳ ಸಭೆ ನಡೆಸುವುದರಲ್ಲಿ ಎಲ್ಲಾ ಸಮಯ ತೊಡಗಿಸಿದ್ದಾರೆ. ಇದೊಂದು ರೈತ ವಿರೋಧಿ ಸರ್ಕಾರವಾಗಿದೆ. 

ಮುಂಗಾರು ವಿಫಲವಾಗಿ ರೈತರು ಬಿತ್ತಿರುವ ಬೆಳೆ ಮೊಳಕೆಯೊಡೆಯದೇ ವಿಫಲವಾಗಿದೆ. ಹಲವಾರು ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ವರದಿಗಳು ಬರುತ್ತಿವೆ. ಇದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದೇ ಹಾಗೂ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದ್ದಾರೆ. ಇದನ್ನು ನೋಡಿದರೆ, ಈ ಹಿಂದೆ 2013-18ರ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಅತಿಹೆಚ್ಚು ರೈತರ ಆತ್ಮಹತ್ಯೆ ಪ್ರಕರಣಗಳು ಮರುಕಳಿಸುವಂತೆ ಕಾಣಿಸುತ್ತಿದೆ. ನಾನು ಇದನ್ನು ಖಂಡಿಸುತ್ತೇನೆ. ಸರ್ಕಾರ ಕೂಡಲೇ ಎಲ್ಲಾ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಶಿಗ್ಗಾಂವಿ ಕ್ಷೇತ್ರ ಶಿಕ್ಷಣ ಕಾಶಿಯಾಗಿಸುವೆ: ಮಾಜಿ ಸಿಎಂ ಬೊಮ್ಮಾಯಿ

ಮೋದಿ ಮಣಿಸಲು ಸಾಧ್ಯವಿಲ್ಲ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಣಿಸುವ ಒಂದೇ ಉದ್ದೇಶದಿಂದ ಪ್ರತಿಪಕ್ಷಗಳು ಒಂದಾಗುತ್ತಿವೆ. ಇದು ಅಸಾಧ್ಯವಾದ ಮಾತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷಗಳು ಭಾರತದಲ್ಲಿ ಶಕ್ತಿಯುತವಾಗಿಲ್ಲ. ಇವುಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಾಗಿವೆ. ಅವು ಆಯಾ ರಾಜ್ಯಗಳಲ್ಲಿ ಪ್ರತಿಪಕ್ಷಗಳಾಗಿ ಕೆಲಸ ಮಾಡುತ್ತಿವೆ ಅಷ್ಟೆ. ಜು. 17ರಂದು ನಡೆಯುವ ಪ್ರತಿಪಕ್ಷಗಳ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಬೇಕು ಎಂದು ಒಗ್ಗಟ್ಟಾಗುತ್ತಿದ್ದಾರೆ. ಅದು ಆಗುವುದಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಪ್ರತಿಪಕ್ಷಗಳಿಗೆ ಯಾವುದೇ ಸ್ವಂತ ಬಲವಿಲ್ಲ, ನಿರ್ದಿಷ್ಟವಾದ ಕಾರ್ಯಕ್ರಮವೂ ಇಲ್ಲ. ಭಾರತವು ಜಗತ್ತಿನಲ್ಲಿ ಆರ್ಥಿಕ, ಸಾಮಾಜಿಕವಾಗಿ ಸದೃಢವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ಅವರಿಗೆ ಜನಮನ್ನಣೆ, ಗೌರವ ದೊರೆಯುತ್ತಿದೆ ಎಂದರು.

ವರಿಷ್ಠರಿಗೆ ಬಿಟ್ಟ ವಿಷಯ: ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ವಿಷಯ ಕುರಿತು ಮಾತನಾಡಿದ ಬೊಮ್ಮಾಯಿ, ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಳ್ಳುವುದು ನಮ್ಮ ಹೈಕಮಾಂಡಿಗೆ ಬಿಟ್ಟವಿಷಯ. ಪಕ್ಷದ ವರಿಷ್ಠರು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ನಡುವೆ ಮಾತುಕತೆಯಾಗಿದೆ. ಈಗಾಗಲೇ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಕೆಲವೊಂದಿಷ್ಟುಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಮಾತುಕತೆ ಫಲಶ್ರುತಿ ಆಧಾರದ ಮೇಲೆ ಮುಂದಿನ ರಾಜಕೀಯ ಬೆಳವಣಿಗೆ ನಡೆಯುತ್ತದೆ. ವಿಪಕ್ಷ ಸ್ಥಾನ ಜು. 18ರ ನಂತರ ಘೋಷಣೆ ಆಗಬಹುದು ಎಂಬ ಮಾಹಿತಿ ಇದೆ. ಮಾಜಿ ಸಚಿವ ವಿ. ಸೋಮಣ್ಣ ಕಾಂಗ್ರೆಸ್‌ ಸೇರ್ಪಡೆ ಕೇವಲ ಉಹಾಪೋಹ. ಅವರು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದರು.

ಸಾವರ್ಕರ್‌ ಪಾಠ ಹೊರಕ್ಕೆ, ಕಾಂಗ್ರೆಸ್‌ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ: ಮುತಾಲಿಕ್‌

ಕಾಂಗ್ರೆಸ್‌ನ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೇ ಯೋಜನೆ ಜಾರಿಗೊಳಿಸಲು ಪದೇ ಪದೇ ವಿಳಂಬ ಮಾಡಲಾಗುತ್ತಿದೆ. ಈಗಾಗಲೇ ಹಲವು ಬಾರಿ ಮುಂದೂಡಿ ಯಡವಟ್ಟಾಗಿದೆ. ಆದರೂ ಪದೇ ಪದೇ ದಿನಾಂಕ ಮುಂದೂಡುತ್ತಿದ್ದಾರೆ. ಈ ಯೋಜನೆಗೆ ಯಾವುದೇ ನಿರ್ದಿಷ್ಟವಾದ ನಿಯಮಗಳನ್ನು ಮಾಡುತ್ತಿಲ್ಲ. ಇದನ್ನು ಸಂಪೂರ್ಣವಾಗಿ ಅನುಷ್ಠಾನ ಮಾಡುವ ಉದ್ದೇಶ ಕಾಂಗ್ರೆಸ್‌ ಸರ್ಕಾರಕ್ಕಿಲ್ಲ. ಈ ರೀತಿ ದಿನಾಂಕ ಮುಂದೂಡಿ ಕೆಲವೇ ಸಮಯದಲ್ಲಿ, ಕೆಲವರಿಗೆ ಮಾತ್ರ ಪ್ರಾರಂಭ ಮಾಡುವ ಉದ್ದೇಶ ಸರ್ಕಾರಕ್ಕಿದೆ. ತಾಯಂದಿರಿಗೆ, ರಾಜ್ಯದ ಹೆಣ್ಣುಮಕ್ಕಳಿಗೆ ಭ್ರಮನಿರಸನ ಮಾಡುವಂತಹ ಉದ್ದೇಶ ಈ ಯೋಜನೆಯದ್ದಾಗಿದೆ. ಅಧಿವೇಶನದಲ್ಲಿ ಈ ಎಲ್ಲ ವಿಷಯಗಳ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿವೆ ಎಂದರು.

Latest Videos
Follow Us:
Download App:
  • android
  • ios