Karnataka Politics: ಬಿಜೆಪಿಗೆ ಮತ್ತೆ ಅಧಿಕಾರ ನಿಶ್ಚಿತ: ಬಿ.ಎಸ್.ಯಡಿಯೂರಪ್ಪ
ಮುಂಬರುವ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ (ನ.19): ಮುಂಬರುವ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಶಿಕಾರಿಪುರ ಕ್ಷೇತ್ರದ ಜೆಡಿಎಸ್ ಮುಖಂಡ ಎಚ್.ಟಿ.ಬಳಿಗಾರ್ ಅವರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು.
ಬಳಿಗಾರ್ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡು ಮಾತನಾಡಿದ ಯಡಿಯೂರಪ್ಪ, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಇಡೀ ದೇಶವೇ ಮೆಚ್ಚುವಂತಹ ಕಾರ್ಯಕ್ರಮಗಳು ಜಾರಿಯಾಗುತ್ತಿವೆ. ಗುಜರಾತ್‌ನಲ್ಲಿ ಈಗಾಗಲೇ ಚುನಾವಣೆ ಘೋಷಣೆಯಾಗಿದ್ದು, ಅಲ್ಲಿಯೂ ಬಿಜೆಪಿಯೇ ಅಧಿಕಾರಕ್ಕೆ ಬರಲಿದೆ. 2023ರಲ್ಲಿ ರಾಜ್ಯದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು. ಮತದಾರರ ಪಟ್ಟಿದುರ್ಬಳಕೆ ಕುರಿತ ಆರೋಪಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ನಾಯಕರು ತಬ್ಬಲಿಗಳಂತೆ ಅಲೆಯುತ್ತಿದ್ದಾರೆ.
Shivamogga: ಅಂಗನವಾಡಿ ಕಾರ್ಯಕರ್ತೆಯರ ಸೇವೆ ಮಹತ್ವದ್ದು: ಬಿಎಸ್‌ವೈ
ಮುಂಬರುವ ಚುನಾವಣೆಯ ಸೋಲನ್ನು ಈಗಲೇ ಒಪ್ಪಿಕೊಂಡಿರುವ ಕಾಂಗ್ರೆಸ್, ಹತಾಶೆಯಿಂದ ಸುಮ್ಮನೆ ಆರೋಪ ಮಾಡುತ್ತಿದೆ. ಇದರಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಎಂಬುದನ್ನು ಮುಖ್ಯಮಂತ್ರಿಯವರೇ ಸ್ಪಷ್ಟಪಡಿಸಿದ್ದಾರೆ. ಈ ರೀತಿ ಆರೋಪ ಮಾಡುವುದು ಕಾಂಗ್ರೆಸ್ ಮುಖಂಡರಿಗೆ ಶೋಭೆ ತರುವುದಿಲ್ಲ. ಈ ಬಗ್ಗೆ ಸೂಕ್ತ ಸಾಕ್ಷ್ಯಾಧಾರಗಳಿದ್ದರೆ ಕೊಡಲಿ. ತನಿಖೆ ಮಾಡಿಸೋಣ ಎಂದರು.
ಮತದಾರರ ಪಟ್ಟಿಯಲ್ಲಿ ದುವ್ರ್ಯವಹಾರ ನಡೆದಿಲ್ಲ: ಮುಂಬರುವ ಚುನಾವಣೆಯಲ್ಲಿ ಸೋಲನ್ನು ಈಗಲೇ ಒಪ್ಪಿಕೊಂಡಿರುವ ಕಾಂಗ್ರೆಸ್ ಪಕ್ಷ ಏನು ಮಾಡಲೆಂದು ತೋಚದೆ, ಇದೀಗ ಮತದಾರರ ಪಟ್ಟಿದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪ ಮಾಡುತ್ತಿದೆ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿಯ ಆರೋಪ ಮಾಡುವ ಮೂಲಕ ಮುಂಬರುವ ಚುನಾವಣೆಯಲ್ಲಿನ ಸೋಲನ್ನು ಅವರು ಒಪ್ಪಿಕೊಂಡಿರುವುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ. ಈ ರೀತಿ ಆರೋಪ ಮಾಡುವುದು ಕಾಂಗ್ರೆಸ್ ಮುಖಂಡರಿಗೆ ಶೋಭೆ ತರುವುದಿಲ್ಲ. ಇಲ್ಲಿ ಯಾವುದೇ ರೀತಿಯಲ್ಲಿ ದುವ್ರ್ಯವಹಾರ ನಡೆದಿಲ್ಲ. ಈಗಾಗಲೇ ಮುಖ್ಯಮಂತ್ರಿಯವರು ಇದಕ್ಕೆ ತಕ್ಕ ಉತ್ತರ ಕೊಟ್ಟಿದ್ದಾರೆ ಎಂದರು.
ಗೆಲ್ಲುವ ವಿಶ್ವಾಸವಿಲ್ಲದ್ದಕ್ಕೆ ಸಿದ್ದು ಬೇರೆ ಕಡೆ ಸ್ಪರ್ಧೆ: ಯಡಿಯೂರಪ್ಪ
ಇಷ್ಟಾದರೂ ಇದರಲ್ಲಿ ಏನಾದರೂ ಲೋಪದೋಷ ಇದ್ದರೆ ಸರಿಪಡಿಸುವುದಾಗಿ ಹೇಳಿದ್ದಾರೆ. ಸೂಕ್ತ ಸಾಕ್ಷ್ಯಾಧಾರ ಇದ್ದರೆ ಕೊಡಿ ತನಿಖೆ ಮಾಡಿಸೋಣ ಎಂದು ಸಿಎಂ ತಿಳಿಸಿದ್ದಾರೆ. ಆದರೂ ಆರೋಪ ಮುಂದುವರೆಸುತ್ತಿರುವ ಕಾಂಗ್ರೆಸ್ ವ್ಯವಸ್ಥಿತವಾದ ಪಿತೂರಿ, ಷಡ್ಯಂತ್ರ ರೂಪಿಸುತ್ತಿದೆ ಎಂದು ದೂರಿದರು. ಮುಂಬರುವ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟುನಾವು ಸ್ಪಷ್ಟಬಹುಮತ ಪಡೆಯುವುದು ಖಚಿತವಾಗಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ, ಇಡೀ ದೇಶವೇ ಮೆಚ್ಚಿರುವ ಸಂದರ್ಭದಲ್ಲಿ ಕಾಂಗ್ರೆಸ್‌ನವರು ತಬ್ಬಲಿಯಂತೆ ಅಲೆಯುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.