ಇಡೀ ವಿಶ್ವವೇ ಸಮಸ್ಯೆಗಳಿಗೆ ಪರಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆ ಪಡೆಯಲು ಎದುರು ನೋಡುತ್ತಿದೆ. ಇಡೀ ಜಗತ್ತೇ ಮೆಚ್ಚಿರುವ ನರೇಂದ್ರ ಮೋದಿ ಅವರಿಗೆ ಭರವಸೆ ನೀಡುತ್ತೇನೆ. ರಾಜ್ಯದ 28 ಲೋಕಸಭಾ ಸ್ಥಾನಗಳನ್ನು ಗೆದ್ದು ಸಂಸದರನ್ನು ನಿಮ್ಮ ಜತೆಗೆ ಕಳುಹಿಸಿ ಕೊಡುತ್ತೇನೆ: ಯಡಿಯೂರಪ್ಪ  

ಬೆಂಗಳೂರು(ಏ.21): ಕಾಂಗ್ರೆಸ್ ಮುಖಂಡರು ಹಣ ಬಲ, ಹೆಂಡ, ತೋಳ್ಳಲದಿಂದ ಜಾತಿ ವಿಷಬೀಜ ಬಿತ್ತಿ ಅಧಿ ಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ. ನಿಮಗೆ ತಾಕತ್ ಇದ್ದರೆ ಕಳೆದ ಬಾರಿ ಗೆದ್ದಷ್ಟು ಸ್ಥಾನ ಗಳನ್ನು ಈ ಬಾರಿ ಗೆದ್ದು ತೋರಿಸಿ ಎಂದು ಮಾಜಿ ಮುಖ್ಯಮಂತ್ರಿ 2.2. ಯಡಿಯೂರಪ್ಪ ಸವಾಲು ಹಾಕಿದ್ದಾರೆ.

Add Asianetnews Kannada as a Preferred SourcegooglePreferred

ಅರಮನೆ ಮೈದಾನದಲ್ಲಿ ಶನಿವಾರ ನಡೆದ ಬಿಜೆಪಿಯ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಇಡೀ ವಿಶ್ವವೇ ಸಮಸ್ಯೆಗಳಿಗೆ ಪರಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆ ಪಡೆಯಲು ಎದುರು ನೋಡುತ್ತಿದೆ. ಇಡೀ ಜಗತ್ತೇ ಮೆಚ್ಚಿರುವ ನರೇಂದ್ರ ಮೋದಿ ಅವರಿಗೆ ಭರವಸೆ ನೀಡುತ್ತೇನೆ. ರಾಜ್ಯದ 28 ಲೋಕಸಭಾ ಸ್ಥಾನಗಳನ್ನು ಗೆದ್ದು ಸಂಸದರನ್ನು ನಿಮ್ಮ ಜತೆಗೆ ಕಳುಹಿಸಿ ಕೊಡುತ್ತೇನೆ ಎಂದರು.

ಕರ್ನಾಟಕಕ್ಕೆ 3 ಲಕ್ಷ ಕೋಟಿ ರು. ಕೊಟ್ಟಿದ್ದೇವೆ: ಏಷ್ಯಾನೆಟ್ ಸಂದರ್ಶನದಲ್ಲಿ ಅಂಕಿ ಅಂಶ ತೆರೆದಿಟ್ಟ ಮೋದಿ!

ಇಡೀ ರಾಜ್ಯದಲ್ಲಿ ನಮಗೆ ಅನುಕೂಲಕರ ವಾತಾವರಣವಿದೆ. ಬಿಜೆಪಿ-ಜೆಡಿಎಸ್ ಹೊಂದಾಣಿಕೆಯಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳನ್ನೂ ಗೆಲ್ಲುವುವು ನಿಶ್ಚಿತ. ರಾಜ್ಯದ ನಮ್ಮ ಕಾಂಗ್ರೆಸ್ ಸ್ನೇಹಿತರು ಅಧಿಕಾರದ ಮದದಿಂದ ಜನಹಿತ ಮರೆತು ತೊಘಲಕ್ ದರ್ಬಾರ್ ನಡೆಸುತ್ತಿ ದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ದೇಶದದಲ್ಲಿ ಕಾಂಗ್ರೆಸ್ 52 ಸ್ಥಾನ ಗೆದ್ದಿತ್ತು. ನಾನು ಕೇಳುತ್ತೇನೆ. ನೀವು ಕಳೆದ ಬಾರಿ ಗೆದ್ದಿರುವ 52 ಸ್ಥಾನಗಳನ್ನು ಈ ಬಾರಿಯೂ ಗೆದ್ದು ತೋರಿಸಿ ಎಂದು ಸವಾಲು ಹಾಕಿದರು. 

28 ಸ್ಥಾನಗಳಲ್ಲಿ ಗೆಲ್ಲಲು ಕೆಲಸ: 

ಮೊದಲ ಹಂತದ ಚುನಾವಣೆಗೆ ಐದಾರು ದಿನ ಸಮಯ ವಿದೆ. ಈ ಬಾರಿ 28 ಸ್ಥಾನಗಳನ್ನು ನಾವು ಗೆಲ್ಲಬೇಕು. ಈ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕು. ಇದಕ್ಕಾಗಿ ಮನೆ, ಮನೆಗೆ ತೆರಳಿ ಪ್ರಚಾರ ನಡೆಸಿ ಎಂದು ಕಾರ್ಯಕರ್ತರಿಗೆ ಯಡಿಯೂರಪ್ಪ ಕರೆ ನೀಡಿದರು.