ಮುಖ್ಯಮಂತ್ರಿಯಾಗುವ ಹಗಲು ಕನಸು ಕಾಣುತ್ತಿರುವ ಕಾಂಗ್ರೆಸ್‌ ಮುಖಂಡರ ಕನಸು ನನಸಾಗುವುದಿಲ್ಲ. ದೇಶದಲ್ಲಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್‌ ತಬ್ಬಲಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. 

ರಾಮದುರ್ಗ (ಮಾ.06): ಮುಖ್ಯಮಂತ್ರಿಯಾಗುವ ಹಗಲು ಕನಸು ಕಾಣುತ್ತಿರುವ ಕಾಂಗ್ರೆಸ್‌ ಮುಖಂಡರ ಕನಸು ನನಸಾಗುವುದಿಲ್ಲ. ದೇಶದಲ್ಲಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್‌ ತಬ್ಬಲಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಪಟ್ಟಣದ ತೇರಬಜಾರದಲ್ಲಿ ನಡೆದ ವಿಜಯ ಸಂಕಲ್ಪಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ವಿಜಯ ಸಂಕಲ್ಪಯಾತ್ರೆಗೆ .500 ಕೊಟ್ಟು ಜನರನ್ನು ಸೇರಿಸಿಲ್ಲ. ಹಣ, ಹೆಂಡ, ತೊಳ್ಬಲ ಮತ್ತು ಜಾತಿ ವಿಷಬೀಜ ಬಿತ್ತಿ ಅಧಿಕಾರಕ್ಕೆ ಬರುವ ಕಾಲ ಈಗ ಹೋಯಿತು. ಜನ ಜಾಗೃತರಾಗಿದ್ದಾರೆ ಎಂದರು. ಸೂರ್ಯಚಂದ್ರರಿರುವುದು ಎಷ್ಟುಸತ್ಯವೋ 2023ರಲ್ಲಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದು ಶತಸಿದ್ಧ. 

ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. 2023ರಲ್ಲಿ 140ಕ್ಕೂ ಅಧಿಕ ಸ್ಥಾನದಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬಂದೆ ಬರುತ್ತದೆ. ಮಾದರಿ ರಾಜ್ಯ ಮಾಡಲು ಬಿಜೆಪಿ ಜನತೆ ಆಶೀರ್ವಾದ ಮಾಡಬೇಕು ಎಂದು ಕೋರಿದರು. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಕಾಂಗ್ರೆಸ್‌ ಮುಕ್ತ ಭಾರತ ಮಾಡುವ ಸಂಕಲ್ಪ ಮಾಡಬೇಕು. ಬರುವ 2-3 ತಿಂಗಳು ಕಾಲ ವಿಶ್ರಾಂತಿ ಪಡೆಯದೆ ಹಗಲಿರುಳು ಕೇಂದ್ರದ ಪಿಎಂ ಕಿಸಾನ್‌ ಸಮ್ಮಾನದಂತಹ ಜನಪರ ಯೋಜನೆಗಳನ್ನು ಮತ್ತು ರಾಜ್ಯ ಸರ್ಕಾರದ ಸಾಧನೆಯನ್ನು ಪ್ರತಿ ಮನೆಗೆ ತಿಳಿ ಹೇಳುವುದರ ಜೊಗೆತೆ ಜನರ ಪ್ರೀತಿ, ವಿಶ್ವಾಸ ಪಡೆದಕೊಂಡು ಬಿಜೆಪಿ ಅಭ್ಯರ್ಥಿ ಗೆಲ್ಲಲು ಶ್ರಮಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಸರ್ಕಾರ ಇನ್ನೊಮ್ಮೆ ಅಧಿಕಾರಕ್ಕೆ ಬಂದರೆ ರಾಜ್ಯ ದಿವಾಳಿ: ರಣದೀಪ್‌ ಸಿಂಗ್‌ ವಾಗ್ದಾಳಿ

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ಕಾಂಗ್ರೆಸ್‌ ಪಕ್ಷ ರಾಮನ ಅಸ್ತಿತ್ವ ಮತ್ತು ರಾಮ ಮಂದಿರ ನಿರ್ಮಾಣ ವಿರೋಧಿಸಿದ್ದರಿಂದ ಮಂದಿರ ನಿರ್ಮಾಣಕ್ಕೆ ತೊಡಕಾಗಿತ್ತು. ಪ್ರಧಾನಿ ಮೋದಿಯವರ ಸರ್ಕಾರ 2024ರ ಜನವರಿಯಲ್ಲಿ ರಾಮಮಂದಿರ ಲೋಕಾರ್ಪಣೆ ಮಾಡಲಾಗುವುದು. ಬರುವ 3 ವರ್ಷಗಳಲ್ಲಿ ಭಾರತ ದೇಶ ವಿಶ್ವದ ಬಲಾಢ್ಯ ರಾಷ್ಟ್ರಗಳಾದ ಅಮೇರಿಕಾ ಮತ್ತು ಚೀನಾದೊಂದಿಗೆ ಪೈಪೋಟಿ ಮಾಡುವ ಮೂಲಕ ವಿಶ್ವದ ಅಗ್ರಗಣ್ಯ ರಾಷ್ಟ್ರವಾಗಲಿದೆ ಎಂದರು.

ಶಾಸಕ ಮಹಾದೇವಪ್ಪ ಯಾದವಾಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಚಿವರಾದ ಮುರಗೇಶ ನಿರಾಣಿ, ಸಿ.ಸಿ.ಪಾಟೀಲ, ಭೈರತಿ ಬಸವರಾಜ ಸೇರಿದಂತೆ ಹಲವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಸದರಾದ ಮಂಗಲ ಅಂಗಡಿ, ಈರಣ್ಣ ಕಡಾಡಿ, ಶಾಸಕ ರಮೇಶ ಜಾರಕಿಹೋಳಿ, ವಿಧಾನ ಪರಿಷತ್‌ ಮಾಜಿ ಸದಸ್ಯರಾದ ಮಹಾಂತೇಶ ಕವಟಗಿಮಠ, ಅರುಣ ಶಹಾಪುರ ಮುಖಂಡರಾದ ಮಲ್ಲಣ್ಣ ಯಾದವಾಡ, ಪಿ.ಎಫ್‌.ಪಾಟೀಲ, ರಮೇಶ ದೇಶಪಾಂಡೆ, ಡಾ.ಕೆ.ವಿ.ಪಾಟೀಲ, ಪುರಸಭೆಯ ಸದಸ್ಯ ರಘು ಡೊಡಮನಿ ಸೇರಿದಂತೆ ಮುಂತಾದವರು ಇದ್ದರು.

ಬಿಜೆಪಿ ಅಧಿ​ಕಾ​ರ​ಕ್ಕೆ ಕನ​ಕ​ಪುರ ಮತ​ದಾ​ರರು ಮುನ್ನುಡಿ ಬರೆ​ಯಿರಿ: ಸಚಿವ ಅಶೋಕ್‌

ಕಾಂಗ್ರೆಸ್‌ನವರು ಸುಳ್ಳು ಹೇಳುವುದರಲ್ಲಿ ನಿಸ್ಸಿಮರು. ಇವರು ಗ್ಯಾರಂಟಿಗಳೆಲ್ಲ ಸುಳ್ಳಾಗಲಿವೆ. ಇವರು ರಾಜಸ್ತಾನ ಮತ್ತು ಛತ್ತಿಸಘಡದಲ್ಲಿ ನೀಡಿದ ಗ್ಯಾರಂಟಿಗಳಾವು ಈಡೇರಿಲ್ಲ. ಇವರೆಲ್ಲ ಸುಳ್ಳಿನ ಸರದಾರರು. 70 ವರ್ಷದಲ್ಲಿ ಮಾಡದೇ ಇರುವುದನ್ನು ಈಗ ಮಾಡಲು ಸಾಧ್ಯವೇ?.
-ಪ್ರಲ್ಹಾದ ಜೋಶಿ, ಕೇಂದ್ರ ಸಚಿವರು.