Asianet Suvarna News Asianet Suvarna News

ಬಿಜೆಪಿಗೆ 40 ಸೀಟು ಎನ್ನುವ ರಾಹುಲ್‌ ವೈದ್ಯ ಪರೀಕ್ಷೆಗೆ ಒಳಗಾಗಲಿ: ಯಡಿಯೂರಪ್ಪ

140ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಯಾರ ಹಂಗಿಲ್ಲದೆ ಈ ಬಾರಿ ರಾಜ್ಯದಲ್ಲಿ ಸ್ವತಂತ್ರ ಸರ್ಕಾರ ರಚಿಸುತ್ತೇವೆ ಎನ್ನುವ ಮೂಲಕ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೇರಲಿದೆ ಎಂಬ ಸಮೀಕ್ಷೆಗಳಿಗೆ ತಿರುಗೇಟು ನೀಡಿದ ಯಡಿಯೂರಪ್ಪ 

Former CM BS Yediyurappa Slams Rahul Gandhi grg
Author
First Published Apr 30, 2023, 1:31 PM IST

ಹುಣಸಗಿ(ಯಾದಗಿರಿ)(ಏ.30):  ಹಿಂದು, ಮುಸ್ಲಿಂ ಹಾಗೂ ಕ್ರಿಶ್ಚಿಯನ್‌ ಎಲ್ಲರೂ ಒಂದೇ ತಾಯಿ ಮಕ್ಕಳು. ಇದು ಬಿಜೆಪಿ ತತ್ವವಾಗಿದ್ದು, ನನಗೆ ಯಾವ ಜಾತಿ ಧರ್ಮ ಗೊತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. 

ಸುರಪುರ ಬಿಜೆಪಿ ಅಭ್ಯರ್ಥಿ ನರಸಿಂಹ ನಾಯಕ್‌ (ರಾಜೂಗೌಡರ) ಪರ ರೋಡ್‌ ಶೋಗೆಂದು ಆಗಮಿಸಿದ್ದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, 140ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಯಾರ ಹಂಗಿಲ್ಲದೆ ಈ ಬಾರಿ ರಾಜ್ಯದಲ್ಲಿ ಸ್ವತಂತ್ರ ಸರ್ಕಾರ ರಚಿಸುತ್ತೇವೆ ಎನ್ನುವ ಮೂಲಕ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೇರಲಿದೆ ಎಂಬ ಸಮೀಕ್ಷೆಗಳಿಗೆ ತಿರುಗೇಟು ನೀಡಿದರು. ಬಿಜೆಪಿಗೆ 40 ಸ್ಥಾನಗಳು ಮಾತ್ರ ಸಿಗುತ್ತವೆ ಎಂಬುದಾಗಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಲು ಹೇಳಬೇಕು ಎಂದು ವ್ಯಂಗ್ಯವಾಡಿದರು.

ಯಾದಗಿರಿ ಜಿಲ್ಲೆಯಲ್ಲಿ ಕಾಂಗ್ರೆಸ್‌, ಕಮಲ ಬಂಡಾಯ, ಜೆಡಿಎಸ್‌ಗೆ ಲಾಭ?

ಭಾಗ್ಯಲಕ್ಷ್ಮೀ ಯೋಜನೆ ಸೇರಿ ಹಲವು ಯೋಜನೆಗಳನ್ನು ಕೊಟ್ಟಿದ್ದೇನೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ರುಪಾಯಿ ಅನುದಾನ ನೀಡಲಾಗಿದೆ. ಭಾರತವನ್ನು ಇಡೀ ಜಗತ್ತಿನಲ್ಲಿ ಗುರುತಿಸುವಂತೆ ಪ್ರಧಾನಿ ಮೋದಿ ಮಾಡಿದ್ದಾರೆ. ಮೋದಿ ನಾಯಕತ್ವದಲ್ಲಿ ಇಡೀ ಜಗತ್ತು ಅಚ್ಚರಿಯಿಂದ ನಮ್ಮ ಕಡೆ ನೋಡುತ್ತಿದೆ. ಭಾರತದ ಆರ್ಥಿಕ ಪರಿಸ್ಥಿತಿ ಸುಧಾರಣೆ ಅಗಿದೆ ಎಂದರು.

Follow Us:
Download App:
  • android
  • ios