ಬಿ.ಎಲ್‌.ಸಂತೋಷ್‌ ಕುರಿತು ಹಗುರ ಮಾತು ಸಹಿಸಲ್ಲ: ಯಡಿಯೂರಪ್ಪ ಗುಡುಗು

ಚುನಾವಣಾ ಪ್ರಚಾರ ಈಗಾಗಲೇ ಆರಂಭವಾಗಿದೆ. ಇಡೀ ರಾಜ್ಯದಲ್ಲಿ ಬಿಜೆಪಿಗೆ ಒಳ್ಳೆಯ ವಾತಾವರಣವಿದೆ. ಪ್ರಧಾನಿ ಮೋದಿ ಅಮಿತ್‌ ಶಾ ಸೇರಿ ಕೇಂದ್ರ ಮತ್ತು ವಿವಿಧ ರಾಜ್ಯಗಳ ಬಿಜೆಪಿ ಮುಖಂಡರು ರಾಜ್ಯಕ್ಕೆ ಚುನಾವಣಾ ಪ್ರಚಾರಕ್ಕಾಗಿ ಬರಲಿದ್ದಾರೆ. ನಾನೂ ಈಗಾಗಲೇ ಪ್ರಚಾರ ಆರಂಭಿಸಿದ್ದೇನೆ. ಕೊನೇ ಎರಡು ದಿನಗಳಿರುವಾಗ ಶಿವಮೊಗ್ಗದಲ್ಲಿ ಪ್ರಚಾರ ಕೈಗೊಳ್ಳುವೆ: ಬಿ.ಎಸ್‌.ಯಡಿಯೂರಪ್ಪ 

Former CM BS Yediyurappa Talks Over BL Santosh grg

ಶಿವಮೊಗ್ಗ(ಏ.25):  ಬಿಜೆಪಿ ರಾಷ್ಟ್ರೀಯ ಪ್ರಧಾನ ಸಂಘಟನಾ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ನಮ್ಮ ನಾಯಕರು. ಅವರ ಬಗ್ಗೆ ಹಗುರವಾಗಿ ಮಾತನಾಡಿದರೆ ಸಹಿಸಲು ಸಾಧ್ಯವಿಲ್ಲ ಎಂದು ನಿಕಟಪೂರ್ವ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್‌.ಯಡಿಯೂರಪ್ಪ ಗುಡುಗಿದರು. ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿ, ಸಂತೋಷ್‌ ಅವರನ್ನು ಟೀಕೆ ಮಾಡುವ ಯೋಗ್ಯತೆ ಕೂಡ ಯಾರಿಗೂ ಇಲ್ಲ. ಸಂಘಟನೆಗಾಗಿ ಅವರು ಕೆಲಸ ಮಾಡುತ್ತಿದ್ದಾರೆ ಎಂದರು.

ಚುನಾವಣಾ ಪ್ರಚಾರ ಈಗಾಗಲೇ ಆರಂಭವಾಗಿದೆ. ಇಡೀ ರಾಜ್ಯದಲ್ಲಿ ಬಿಜೆಪಿಗೆ ಒಳ್ಳೆಯ ವಾತಾವರಣವಿದೆ. ಪ್ರಧಾನಿ ಮೋದಿ ಅಮಿತ್‌ ಶಾ ಸೇರಿ ಕೇಂದ್ರ ಮತ್ತು ವಿವಿಧ ರಾಜ್ಯಗಳ ಬಿಜೆಪಿ ಮುಖಂಡರು ರಾಜ್ಯಕ್ಕೆ ಚುನಾವಣಾ ಪ್ರಚಾರಕ್ಕಾಗಿ ಬರಲಿದ್ದಾರೆ. ನಾನೂ ಈಗಾಗಲೇ ಪ್ರಚಾರ ಆರಂಭಿಸಿದ್ದೇನೆ. ಕೊನೇ ಎರಡು ದಿನಗಳಿರುವಾಗ ಶಿವಮೊಗ್ಗದಲ್ಲಿ ಪ್ರಚಾರ ಕೈಗೊಳ್ಳುವೆ ಎಂದು ತಿಳಿಸಿದರು.

ಸಿದ್ದರಾಮಯ್ಯಗೆ ಚುನಾವಣಾ ಸೋಲಿನ ಭೀತಿ ಎದುರಾಗಿದೆ: ಬಿಎಸ್‌ವೈ

ಶಿವಮೊಗ್ಗ ಕ್ಷೇತ್ರದಲ್ಲಿ ಶೇ.90ರಷ್ಟು ವೀರಶೈವರು ಬಿಜೆಪಿ ಬೆಂಬಲಿಸುತ್ತಾರೆ. ಇಲ್ಲಿ ಬಿಜೆಪಿ ಗೆಲ್ಲುವುದು ನೂರಕ್ಕೆ ನೂರರಷ್ಟುಶತಸಿದ್ಧ. ರಾಜ್ಯದಲ್ಲಿ 130ರಿಂದ 140 ರವರೆಗೆ ಸೀಟು ಪಡೆದು ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.
ಇದೇ ವೇಳೆ ವೀರಶೈವ ಸಮಾಜದ ಕುರಿತು ಸಿದ್ದರಾಮಯ್ಯ ಮತ್ತು ರಾಹುಲ್‌ ಗಾಂಧಿಗೆ ಏನು ಗೊತ್ತಿದೆ ಎಂದು ಖಾರವಾಗಿ ಪ್ರಶ್ನಿಸಿದ ಅವರು, ಮಾಜಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂಥ ಹಗುರ ಮಾತು ಸಹಿಸಲು ಸಾಧ್ಯವಿಲ್ಲ. ಈ ರೀತಿ ಮಾತನಾಡಬಾರದಿತ್ತು ಎಂದರು.

Latest Videos
Follow Us:
Download App:
  • android
  • ios