ಯತ್ನಾಳ್ ವಿಷಯ ಕೂತುಕೊಂಡು ಬಗೆಹರಿಸಿಕೊಳ್ಳುತ್ತೇವೆ: ಯಡಿಯೂರಪ್ಪ
ಪರಸ್ಪರ ಕಚ್ಚಾಡುವುದರಿಂದ ಯಾರಿಗೂ ಲಾಭ ಇಲ್ಲ. ಈ ಅಧಿವೇಶನದಲ್ಲಿ ಎಲ್ಲರೂ ಒಟ್ಟಾಗಿ ರಾಜ್ಯ ಸರ್ಕಾರದ ವೈಫಲ್ಯ ವಿರುದ್ದ ಹೋರಾಟ ಮಾಡ ಬೇಕು. ಈ ನಿಟ್ಟಿನಲ್ಲಿ ಮುನ್ನಡೆಯುವ ವಿಶ್ವಾಸ ನಮ್ಮೆಲ್ಲರಿಗೂ ಇದೆ ಎಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ
ಶಿವಮೊಗ್ಗ(ಡಿ.06): ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಷಯ ಎಲ್ಲರೂ ಕುಳಿತುಕೊಂಡು ಮಾತನಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪರಸ್ಪರ ಕಚ್ಚಾಡುವುದರಿಂದ ಯಾರಿಗೂ ಲಾಭ ಇಲ್ಲ. ಈ ಅಧಿವೇಶನದಲ್ಲಿ ಎಲ್ಲರೂ ಒಟ್ಟಾಗಿ ರಾಜ್ಯ ಸರ್ಕಾರದ ವೈಫಲ್ಯ ವಿರುದ್ದ ಹೋರಾಟ ಮಾಡ ಬೇಕು. ಈ ನಿಟ್ಟಿನಲ್ಲಿ ಮುನ್ನಡೆಯುವ ವಿಶ್ವಾಸ ನಮ್ಮೆಲ್ಲರಿಗೂ ಇದೆ ಎಂದರು.
ಅಪ್ಪ-ಮಗನ ವಿರುದ್ಧ ಯತ್ನಾಳ್ ಗೌಡ್ರಿಗೆ ಏಕಿಂಥಾ ದ್ವೇಷ?: ಬಿಜೆಪಿಯಲ್ಲಿ ಧಗಧಗಿಸುತ್ತಿರುವ ಸೇಡಿನ ಕಥೆ
ಸಿಎಂ ವಿರುದ್ದ ಇ.ಡಿ. ತನಿಖೆ ಬಗ್ಗೆ ಮಾತನಾಡಿದ ಬಿಎಸ್‌ವೈ, ಇ.ಡಿ.ಗೆ ಪೂರ್ತಿ ಅಧಿಕಾರ ಇದೆ. ಇ.ಡಿ. ಏನು ತೀರ್ಮಾನತೆಗೆ ದುಕೊಳ್ಳುತ್ತದೆ ಅದೇ ಅಂತಿಮ. ಸಿಎಂ ವಿರುದ್ದ ಸಾಕ್ಷ್ಯಾಧಾರಗಳು ಸಿಕ್ಕಿವೆ. ಅದಕ್ಕೆ ಈ ರೀತಿ ಹೇಳಿಕೆ ಕೊಡು ತ್ತಿದ್ದಾರೆ. ಸಿಎಂ ಆಗಿ ಇ.ಡಿ.ಗೆ ಗೌರವ ಕೊಡುವುದನ್ನು ಕಲಿಯಬೇಕು ಎಂದರು.
ಶೀಘ್ರದಲ್ಲೇ ಎಲ್ಲವೂ ಇತ್ಯರ್ಥ ಆಗಲಿದೆ:ಬಿ.ವೈ.ರಾಘವೇಂದ್ರ
ಶಿವಮೊಗ್ಗ: ರಾಜ್ಯ ಬಿಜೆಪಿಯಲ್ಲಿ ಮೂಡಿರುವ ಗೊಂದಲದ ವಾತಾವರಣ ಸದ್ಯ ತಿಳಿಯಾ ಗುತ್ತಿದೆ. ಆದಷ್ಟು ಬೇಗ ಹೈಕಮಾಂಡ್ ಮಧ್ಯೆ ಪ್ರವೇಶಿಸಿ ಸಮಸ್ಯೆ ಬಗೆ ಹರಿಸಲು ಸಂಸದರೆಲ್ಲ ಸೇರಿ ಮನವಿ ಮಾಡಿದ್ದೇವೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ.ರಾಘವೇಂದ್ರ ಹೇಳಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ ದೆಹಲಿಯಲ್ಲಿ ಸಂಸದರ ಸಭೆ ನಡೆದಿದ್ದು, ರಾಜ್ಯ ಬಿಜೆಪಿ ಬೆಳವಣಿಗೆ ಕುರಿತು ಚರ್ಚೆಯಾಗಿದೆ. ಶೀಘ್ರದಲ್ಲೇ ಎಲ್ಲವೂ ಇತ್ಯರ್ಥ ಆಗಲಿದೆ ಎಂಬ ವಿಶ್ವಾಸವಿದೆ ಎಂದರು.
ಬಿಜೆಪಿಯಿಂದ ವಕ್ಫ್ ವಿಚಾರವಾಗಿ ಹೋರಾಟ ನಡೆಯುತ್ತಿದೆ. ಕಾರ್ಯಕರ್ತರು ಸೇರಿ ಲಕ್ಷಾಂತರ ಜನರು ಸದಸ್ಯತ್ವ ಅಭಿಯಾನ ಮಾಡಿದ್ದಾರೆ. ಮೇಲ್ಮಟ್ಟದಲ್ಲಿ ಈ ರೀತಿಯ ಗೊಂದಲಗಳ ಕಾರ್ಯಕರ್ತರಿಗೆ ಎಂದರು. ಹೇಳಿಕೆಯಿಂದ ನೋವಾಗುತ್ತದೆ ಅಧಿವೇಶನದ ಸಮಯವನ್ನು ವಿಪಕ್ಷ ನಾಯಕರು ವ್ಯರ್ಥ ಮಾಡಿದ್ದಾರೆ.
ಅಧಿವೇಶನದಲ್ಲಿ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ಮಾಡಬೇಕಿತ್ತು. ಆದರೆ ಯಾವುದೇ ವಿಷಯಗಳು ಚರ್ಚೆಯಾಗಲಿಲ್ಲ. ಚರ್ಚೆಯಲ್ಲಿ ಭಾಗವಹಿಸಲು ಸ್ಪೀಕರ್‌ಸಹ ಮನವಿ ಮಾಡಿದ್ದಾರೆ. ಅಧಿವೇಶನದ ಸಮಯ ವ್ಯರ್ಥವಾಗಿದೆ. ಯಾವುದೇ ಬಿಲ್‌ಗಳು ಪಾಸ್ ಆಗಲಿಲ್ಲ. ಐಲ್ಯಾಂಡ್ ಐಲ್ಯಾಂಡೆಯೇ ನಮ್ಮದು ಅಂತ ವಕ್ಫ್ ನವರು ಹೇಳುತ್ತಿದ್ದಾರೆ.
ಮುಡಾ ಹಗರಣವನ್ನು ಮರೆಮಾಚಲು ರಾಜ್ಯ ಸರ್ಕಾರಹಾಸನದಲ್ಲಿ ಸಮಾವೇಶ ನಡೆಸುತ್ತಿದೆ. ಇಡಿ ಮಧ್ಯ ಪ್ರವೇಶವನ್ನು ಸಿಎಂ ಹಾಸ್ಯಾಸ್ಪದ ಮಾಡುತ್ತಿದ್ದಾರೆ. ಇದು ಸಿಎಂ ಅವರಿಗೆ ಶೋಭೆ ತರುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಹೋರಾಟ ಮಾಡಿ, ಹಾರಾಟ ಬಿಡಿ: ಯತ್ನಾಳ್‌ಗೆ ಶಿಸ್ತು ಸಮಿತಿ ಖಡಕ್ ಸೂಚನೆ
ನವದೆಹಲಿ/ಬೆಂಗಳೂರು: ವಕ್ಫ್ ವಿರುದ್ಧ ನಿಮ್ಮ ಹೋರಾಟವನ್ನು ಮುಂದುವರಿಸಿ. ಆದರೆ, ಪಕದ ನಾಯಕರ ವಿರುದ್ಧ ಮಾಧ್ಯಮಗಳ ಮುಂದೆ ಹೇಳಿಕೆ ನೀಡಬೇಡಿ, ಏನಾದರೂ ಇದರೆ ವರಿಷ್ಠರ ಮುಂದೆ ಹೇಳಿ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಖಡಕ್ ಸೂಚನೆ ನೀಡಿದೆ.
ಪರಿಣಾಮ ಯತ್ನಾಳ್ ವಿರುದ್ಧ ಅಮಾನತಿನಂಥ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಕ್ಷೀಣಿಸಿದ್ದು, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪರಿಸ್ಥಿತಿಯನ್ನು ಸರಿದೂಗಿಸುವ ದಿಕ್ಕಿನಲ್ಲಿ ಬಿಜೆಪಿ ವರಿಷ್ಠರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಯತ್ನಾಳ್ ಅವರು ನಡೆಸುತ್ತಿರುವ ವಕ್ಫ್ ವಿರುದ್ಧದ ಹೋರಾಟಕ್ಕೆ ಬ್ರೇಕ್ ಹಾಕದೆ ಅವರ ಬಹಿರಂಗ ಹೇಳಿಕೆಗಳಿಗೆ ಕಡಿವಾಣ ಹಾಕುವ ಪ್ರಯತ್ನ ನಡೆದಿದೆ.
ಬಿಜೆಪಿಯಲ್ಲಿ ಭಿನ್ನಮತ: ವರಿಷ್ಠರು ಹೇಳಿದಂತೆ ಯತ್ನಾಳ್ ಕೇಳುವುದು ಒಳಿತು, ಆರ್. ಅಶೋಕ್
ಜತೆಗೆ ಯತ್ನಾಳ್ ಅವರು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸುವ ಅಥವಾ ಶನಿವಾರ ನಡೆಯುವ ಕೋರ್‌ಕಮಿಟಿ ಸಭೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್‌ವಾಲ್ ಅವರು ಪ್ರಸ್ತಾಪಿಸಿ ಚರ್ಚಿಸುವ ನಿರೀಕ್ಷೆಯಿದೆ.
ಒಟ್ಟಿನಲ್ಲಿ ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪ್ರಮುಖ ಪ್ರತಿಪಕ್ಷವಾಗಿರುವ ಬಿಜೆಪಿಯಲ್ಲಿ ಒಡಕು ಮೂಡಿರುವುದು ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಆಹಾರವಾಗದಂತೆ ನೋಡಿಕೊಳ್ಳುವತ್ತೆ ವರಿಷ್ಠರು ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ.