ಹೈಕಮಾಂಡ್ ನಡೆಯ ಬಗ್ಗೆ ಅಸಮಾಧಾನ: ವರಿಷ್ಠರಿಂದ ಬುಲಾವ್, ಇಂದು ಸದಾನಂದಗೌಡ ದೆಹಲಿಗೆ
ಪಕ್ಷದ ವಿದ್ಯಮಾನಗಳ ಕುರಿತಂತೆ ಚರ್ಚಿಸಲು ತಮ್ಮನ್ನು ಭೇಟಿ ಆಗುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸದಾನಂದಗೌಡರಿಗೆ ದೂರವಾಣಿ ಕರೆ ಮಾಡಿ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಇಂದು(ಬುಧವಾರ) ದೆಹಲಿಗೆ ಹೋಗಿ ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.

ಬೆಂಗಳೂರು(ಅ.25): ಪಕ್ಷದ ಹೈಕಮಾಂಡ್ ನಡೆಯ ಬಗ್ಗೆ ಬಹಿರಂಗವಾಗಿಯೇ ಬೇಸರ, ಅತೃಪ್ತಿ ಹೊರಹಾಕಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಬುಧವಾರ ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಲಿದ್ದಾರೆ.
ಪಕ್ಷದ ವಿದ್ಯಮಾನಗಳ ಕುರಿತಂತೆ ಚರ್ಚಿಸಲು ತಮ್ಮನ್ನು ಭೇಟಿ ಆಗುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸದಾನಂದಗೌಡರಿಗೆ ದೂರವಾಣಿ ಕರೆ ಮಾಡಿ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಬುಧವಾರ ದೆಹಲಿಗೆ ಹೋಗಿ ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.
ಕೇಸರಿ ಪಡೆಯಲ್ಲಿ ‘ಮೈತ್ರಿ’ ಮುನಿಸು : ಬಹಿರಂಗವಾಗಿ ಅಸಮಾಧಾನ ಹೊರಹಾಕುತ್ತಿರುವ ನಾಯಕರು
ಗೌಡರು ದೆಹಲಿಯಲ್ಲಿ ನಡ್ಡಾ ಅವರೊಂದಿಗಿನ ಭೇಟಿ ವೇಳೆ ವಿಧಾನಸಭಾ ಚುನಾವಣೆ ಬಳಿಕ ವರಿಷ್ಠರು ಕರ್ನಾಟಕದತ್ತ ತಲೆ ಹಾಕದೆ ನಿರ್ಲಕ್ಷ್ಯ ತಾಳಿರುವುದು, ರಾಜ್ಯಾಧ್ಯಕ್ಷ ಹಾಗೂ ಪ್ರತಿಪಕ್ಷದ ನಾಯಕ ಆಯ್ಕೆ ವಿಳಂಬವಾಗಿರುವುದು, ಇದರಿಂದ ಪಕ್ಷ ಸಂಘಟನೆಗೆ ಹಿನ್ನಡೆ ಉಂಟಾಗಿರುವುದು, ಜೆಡಿಎಸ್ ಜೊತೆಗಿನ ಮೈತ್ರಿ ನಿರ್ಧಾರ ತೆಗೆದುಕೊಳ್ಳುವ ವೇಳೆ ಪಕ್ಷದ ರಾಜ್ಯ ನಾಯಕರನ್ನು ಕಡೆಗಣಿಸಿರುವ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.