ಸಿದ್ದು ಅಧಿಕಾರಕ್ಕೆ ಬಂದ ನಂತರ ಖಜಾನೆ ಲೂಟಿ: ಗೋವಿಂದ ಕಾರಜೋಳ

ವಾಲ್ಮೀಕಿ ನಿಗಮದ ಹಗರಣ ಸರ್ಕಾರದ ಹಗಲು ದರೋಡೆಯಾಗಿದ್ದು ಮಾರ್ಚ್ ತಿಂಗಳಲ್ಲಿ 180 ಕೋಟಿ ರು. ಹಣ ವರ್ಗಾವಣೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈವರೆಗೆ ಈ ಕುರಿತು ಬಾಯಿ ಬಿಟ್ಟಿಲ್ಲ. ಸಚಿವ ನಾಗೇಂದ್ರ ರಾಜೀನಾಮೆ ಪಡೆದು ನಿಷ್ಪಕ್ಷಪಾತ ತನಿಖೆಗೆ ಸರ್ಕಾರ ಆದೇಶ ಮಾಡಬೇಕಿತ್ತು. ಈ ಕೆಲಸ ಮಾಡದೆ ಲಘುವಾಗಿ ನಡೆದುಕೊಳ್ಳಲಾಗಿದೆ ಎಂದ ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ

Former CM Govind Karjol Slams CM Siddaramaiah grg

ಚಿತ್ರದುರ್ಗ(ಜೂ.02): ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಬಳಿಕ‌ ಸರ್ಕಾರದ ಖಜಾನೆ ಲೂಟಿಯಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣ ಸರ್ಕಾರದ ಹಗಲು ದರೋಡೆಯಾಗಿದ್ದು ಮಾರ್ಚ್ ತಿಂಗಳಲ್ಲಿ 180 ಕೋಟಿ ರು. ಹಣ ವರ್ಗಾವಣೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈವರೆಗೆ ಈ ಕುರಿತು ಬಾಯಿ ಬಿಟ್ಟಿಲ್ಲ. ಸಚಿವ ನಾಗೇಂದ್ರ ರಾಜೀನಾಮೆ ಪಡೆದು ನಿಷ್ಪಕ್ಷಪಾತ ತನಿಖೆಗೆ ಸರ್ಕಾರ ಆದೇಶ ಮಾಡಬೇಕಿತ್ತು. ಈ ಕೆಲಸ ಮಾಡದೆ ಲಘುವಾಗಿ ನಡೆದುಕೊಳ್ಳಲಾಗಿದೆ ಎಂದರು.

ಬಿಜೆಪಿಗೆ ಕಳೆದ ಬಾರಿಗಿಂತ ಒಂದು ಸ್ಥಾನ ಹೆಚ್ಚೇ ಸಿಗಬಹುದು: ವಿಜಯೇಂದ್ರ

2022ರಲ್ಲಿ ಗುತ್ತಿಗೆದಾರನೇ ಅಲ್ಲದ ಸಂತೋಷ ಪಾಟೀಲ್ ಆತ್ಮಹತ್ಯೆ ಆಗಿತ್ತು. ಆಗ ಕೆ.ಎಸ್ ಈಶ್ವರಪ್ಪ ವಿರುದ್ಧ ಸಿದ್ದರಾಮಯ್ಯ ಮಾತಾಡಿದ್ದರು. ಈಶ್ವರಪ್ಪ ವಿರುದ್ಧ ಕೇಸ್ ದಾಖಲಿಸಿ ಬಂಧಿಸುವಂತೆ ಆಗ್ರಹಿಸಿದ್ದರು. ಈಗೇಕೆ ಮುಖ್ಯಮಂತ್ರಿಗಳು ನಾಗೇಂದ್ರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದರು?.

Latest Videos
Follow Us:
Download App:
  • android
  • ios