ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ: ಬಿಎಸ್‌ವೈ ಸರ್ಕಾರದ ವಿರುದ್ಧ ಹೆಚ್‌ಡಿಕೆ ಕಿಡಿ

ಐದಾರು ತಿಂಗಳಿನಿಂದ ಪಿಂಚಣಿ ಹಣ ಪಾವತಿಯಾಗದೇ ಅಂಗವಿಕಲರು, ವೃದ್ಧರು ಹಾಗೂ ವಿಧವೆಯರು ಪರಿತಪಿಸುತ್ತಿದ್ದಾರೆ| ಅಂಗವಿಕಲ, ವೃದ್ಧಾಪ್ಯ ಮತ್ತು ವಿಧವಾ ವೇತನವನ್ನು ತಕ್ಷಣ ಬಿಡುಗಡೆ ಮಾಡಲು ಸರ್ಕಾರ ತುರ್ತು ಆದೇಶ ನೀಡಬೇಕು ಎಂದು ಆಗ್ರಹಿಸಿದ H D ಕುಮಾರಸ್ವಾಮಿ 

Former CM H D Kumaraswamy Reacts Over Chairmen Appointed to Various Boards and Corporations

ಬೆಂಗಳೂರು(ಜು.27):  ಬಿಜೆಪಿ ಸರ್ಕಾರಕ್ಕೆ ಒಂದು ವರ್ಷದ ಸಂದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ನಿಗಮ/ಮಂಡಳಿಗಳ ಅಧ್ಯಕ್ಷರ ಸ್ಥಾನಗಳನ್ನ ಹಂಚಿಕೆ ಮಾಡುತ್ತಿದ್ದಂತೆ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಸರಣಿ ಟ್ವೀಟ್‌ ಮಾಡುವ ಮೂಲಕ ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿ ಕಾರಿದ್ದಾರೆ. 

ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ ಎಂಬ ಬೀಜ ಮಂತ್ರ ಪಠಿಸುತ್ತಿರುವ ಬಿಜೆಪಿ ಸರ್ಕಾರದ ಬಡವರ ವಿರೋಧಿ ನೀತಿಗೆ ಇದಕ್ಕಿಂತ ಉದಾಹರಣೆ ಬೇಕೆ? ಅಂಗೈ ಹುಣ್ಣಿಗೆ ಕನ್ನಡಿ ಬೇಕೆ? ಎಂದು ಟ್ವೀಟ್‌ ಮಾಡಿದ್ದಾರೆ. 

ಬಿಜೆಪಿ ಸರ್ಕಾರಕ್ಕೆ ವರ್ಷ: ಶಾಸಕರಿಗೆ ಭರ್ಜರಿ ಗಿಫ್ಟ್‌ ನೀಡಿದ ಸಿಎಂ ಯಡಿಯೂರಪ್ಪ

 

ಪಿಂಚಣಿ ಹಣಕ್ಕಾಗಿ ಕಳೆದ 5 ತಿಂಗಳಿಂದ ವೃದ್ಧಾಪ್ಯ, ವಿಧವಾ ಮತ್ತು ಅಂಗವಿಕಲ ಫಲಾನುಭವಿಗಳನ್ನು  ಅಲೆದಾಡಿಸಲಾಗುತ್ತಿದೆ. ಇದು ನಾಚಿಕೆಗೇಡು. ಈ ಸರ್ಕಾರಕ್ಕೆ ಕಣ್ಣು ಮತ್ತು ಕಿವಿಗಳು ಇಲ್ಲ ಎಂದು ಹೇಳುವ ಇಂತಹ ಸಂದರ್ಭದಲ್ಲಿ ನಿಗಮ/ಮಂಡಳಿಗಳ ಅಧ್ಯಕ್ಷ ನೇಮಕ ಬೇಕಿತ್ತಾ ಎಂದು ಪರೋಕ್ಷವಾಗಿ ಬಿಎಸ್‌ವೈ ಸರ್ಕಾರದ ವಿರುದ್ಧ ಛಾಟಿ ಬೀಸಿದ್ದಾರೆ.

 

ಐದಾರು ತಿಂಗಳಿನಿಂದ ಪಿಂಚಣಿ ಹಣ ಪಾವತಿಯಾಗದೇ ಅಂಗವಿಕಲರು, ವೃದ್ಧರು ಹಾಗೂ ವಿಧವೆಯರು ಪರಿತಪಿಸುತ್ತಿದ್ದಾರೆ. ಅಂಗವಿಕಲ, ವೃದ್ಧಾಪ್ಯ ಮತ್ತು ವಿಧವಾ ವೇತನವನ್ನು ತಕ್ಷಣ ಬಿಡುಗಡೆ ಮಾಡಲು ಸರ್ಕಾರ ತುರ್ತು ಆದೇಶ ನೀಡಬೇಕು ಎಂದು ಆಗ್ರಹಿಸಿದ್ದಾರೆ. 

 

Latest Videos
Follow Us:
Download App:
  • android
  • ios