ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ತಾಯಿ: ಬಿಎಸ್‌ವೈ ಸರ್ಕಾರದ ವಿರುದ್ಧ ಹೆಚ್‌ಡಿಕೆ ಗರಂ

ರಾಜ್ಯ ಸರ್ಕಾರದ ಕಿವಿ ಹಿಂಡಿದ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ| ಸರಣಿ ಟ್ವೀಟ್‌ಗಳ ಎಚ್ಚರಿಸಿದ ಕುಮಾರಸ್ವಾಮಿ| ಬಡ ಪೋಷಕರು ಎದುರಿಸುತ್ತಿರುವ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಕ್ಷಣವೇ ಸಮಗ್ರ ಯೋಜನೆಯೊಂದನ್ನು ಕಾರ್ಯಗತಗೊಳಿಸಬೇಕು ಆಗ್ರಹಿಸಿದ ಹೆಚ್‌ಡಿಕೆ|

Former CM H D Kumaraswamy Talks Over B S Yediyurappa Government

ಬೆಂಗಳೂರು(ಜು.31): ಕೊರೋನಾ ಸೋಂಕು ಜನರ ಜೀವ-ಜೀವನದ ಜೊತೆ ಮಾತ್ರ ಚೆಲ್ಲಾಟ ಮಾಡುತ್ತಿಲ್ಲ. ಇಡೀ ಮನುಕುಲದ ರೀತಿ-ರಿವಾಜುಗಳನ್ನು ಬುಡಮೇಲು ಮಾಡುತ್ತಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ತಾಯಿ ಒಬ್ಬರು ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿಕೊಂಡ ಘಟನೆ ನನ್ನ ಹೃದಯ ಹಿಂಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. 

 

ಮಕ್ಕಳ ಶಿಕ್ಷಣಕ್ಕಾಗಿ ತಾಯಿ ತನ್ನ ತಾಳಿ ಅಡವಿಟ್ಟ ಬಗ್ಗೆ ಸುವರ್ಣ ನ್ಯೂಸ್‌ ವರದಿ ಪ್ರಸಾರ ಮಾಡಿತ್ತು. ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಹೆಚ್.ಡಿ. ಕುಮಾರಸ್ವಾಮಿ ಸರಣಿ ಟ್ವೀಟ್‌ ಮಾಡುವ ಮೂಲಕ ರಾಜ್ಯ ಸರ್ಕಾರದ ಕಿವಿ ಹಿಂಡಿದ್ದಾರೆ.

ಗದಗ: ಮಕ್ಕಳ ಶಿಕ್ಷಣಕ್ಕಾಗಿ ತಾಳಿ ಅಡವಿಟ್ಟ ತಾಯಿ..!

ನಾಲ್ಕು ಮಕ್ಕಳ ಪೈಕಿ 7 ಮತ್ತು 8 ನೇ ತರಗತಿ ಓದುತ್ತಿರುವ ಇಬ್ಬರು ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ಮನೆಯಲ್ಲಿ ಟಿವಿ ಇಲ್ಲದ ಕಾರಣ ತಾಳಿಯನ್ನು ಅಡವಿಟ್ಟು ನರಗುಂದ ತಾಲೂಕಿನ ರಡ್ಡೇರ ನಾಗನೂರು ಗ್ರಾಮದ ಕಸ್ತೂರಿ ಎಂಬ ಮಹಾತಾಯಿ ದುಸ್ಥಿತಿ ಕಂಡು ಕಣ್ಣಾಲಿಗಳು ತುಂಬಿ ಬಂದಿವೆ ಎಂದು ಬರೆದುಕೊಂಡಿದ್ದಾರೆ. 

 

ಇಂತಹ ನೂರಾರು ನಿದರ್ಶನಗಳು ಸದ್ದಿಲ್ಲದೆ, ಸುದ್ದಿಯಾಗದೆ ಬಡ ಪೋಷಕರು ಕೊರೋನಾ ಕಾಲದಲ್ಲಿ ಯಮಯಾತನೆ ಅನುಭವಿಸುತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ನಮ್ಮ ಸಮಾಜ ಮತ್ತು ಸರ್ಕಾರ ಎಚ್ಚರ ವಹಿಸಬೇಕಿದೆ ಎಂದು ಹೇಳಿದ್ದಾರೆ. 

 

ಆನ್ಲೈನ್ ಶಿಕ್ಷಣದ ಅಪಾಯ ಮತ್ತು ಬಡ ಪೋಷಕರು ಎದುರಿಸುತ್ತಿರುವ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಕ್ಷಣವೇ ಸಮಗ್ರ ಯೋಜನೆಯೊಂದನ್ನು ಕಾರ್ಯಗತಗೊಳಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೆಚ್. ಡಿ. ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ.

 

ಎನಗೆ ಮನೆ ಇಲ್ಲ , ಎನಗೆ ಧನವಿಲ್ಲ ,
ಮಾಡುವದೇನು? ನೀಡುವದೇನು?
ಮನೆ ಧನ ಸಕಲ ಸಂಪದ ಸೌಖ್ಯವುಳ್ಳ
ನಿಮ್ಮ ಶರಣರ ತಪ್ಪಲಕ್ಕಿಯ ತಂದು,
ಎನ್ನೊಡಲ ಹೊರೆವೇನಾಗಿ,
ಅಮರೇಶ್ವರ ಲಿಂಗಕ್ಕೆ ನೀಡುವ ಬಯಕೆ ಎನಗಿಲ್ಲ ಸಂಗನ ಬಸವಣ್ಣಾ ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. 

 

Latest Videos
Follow Us:
Download App:
  • android
  • ios