ಲೋಕಸಭಾ ಚುನಾವಣೆ 2024: ಬಿಜೆಪಿ ಜತೆ ಟಿಕೆಟ್ ಸಭೆ: ಇಂದು/ನಾಳೆ ಎಚ್‌ಡಿಕೆ ದಿಲ್ಲಿಗೆ
ರಾಜ್ಯ ಬಿಜೆಪಿ ನಾಯಕರ ಜತೆ ಹೈಕಮಾಂಡ್ ಚರ್ಚೆ ನಡೆಸಿದೆ. ಈ ಕುರಿತು ಅಂತಿಮವಾಗಿ ಕುಮಾರಸ್ವಾಮಿ ಜತೆ ಮಾತುಕತೆ ನಡೆಸಿ ತೀರ್ಮಾನ ಕೈಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ದೆಹಲಿಗೆ ತೆರಳಲಿದ್ದಾರೆ.
ಬೆಂಗಳೂರು(ಮಾ.12): ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿ ಬಿಜೆಪಿ ವರಿಷ್ಠರ ಜತೆ ಸಮಾಲೋಚನೆ ನಡೆಸುವ ಸಂಬಂಧ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಅಥವಾ ಬುಧವಾರ ದೆಹಲಿಗೆ ತೆರಳುವ ಸಾಧ್ಯತೆ ಇದೆ.
ರಾಜ್ಯ ಬಿಜೆಪಿ ನಾಯಕರ ಜತೆ ಹೈಕಮಾಂಡ್ ಚರ್ಚೆ ನಡೆಸಿದೆ. ಈ ಕುರಿತು ಅಂತಿಮವಾಗಿ ಕುಮಾರಸ್ವಾಮಿ ಜತೆ ಮಾತುಕತೆ ನಡೆಸಿ ತೀರ್ಮಾನ ಕೈಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ದೆಹಲಿಗೆ ತೆರಳಲಿದ್ದಾರೆ.
ಕೋಲಾರ ಜೆಡಿಎಸ್ ನಾಯಕರ ಜತೆ ಕುಮಾರಸ್ವಾಮಿ ಮಾತುಕತೆ
ಮಂಗಳವಾರ ದೆಹಲಿಗೆ ತೆರಳುವ ನಿರೀಕ್ಷೆ ಇತ್ತು. ಆದರೆ, ಸಿಎಎ ಜಾರಿ ಹಿನ್ನೆಲೆಯಲ್ಲಿ ಕೇಂದ್ರದ ವರಿಷ್ಠರು ಕಾರ್ಯದ ಒತ್ತಡದಲ್ಲಿರುವ ಕಾರಣ ಮಂಗಳವಾರದ ಬದಲು ಇಂದು(ಬುಧವಾರ) ದೆಹಲಿಗೆ ತೆರಳುವ ಸಂಭವವಿದೆ ಎಂದು ಮೂಲಗಳು ತಿಳಿಸಿವೆ.