ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್/ ಸಿದ್ದರಾಮಯ್ಯಗೆ ಪ್ರಶ್ನೆಗಳ ಬಾಣ/ ಯಾರು ಯಾರಿಗೆ ಕೇಡು ಬಗೆದರು? ಎಂದು ಆತ್ಮವಂಚನೆ ಇಲ್ಲದೇ ಹೇಳುವಿರಾ?
ಬೆಂಗಳೂರು(ಅ. 24) ಉಪ ಚುನಾವಣೆಯಲ್ಲಿ ಕಾಂಗ್ರೆಸ್ 15ಸ್ಥಾನ ಗೆದ್ದರೆ ಬಿಎಸ್ವೈ ರಾಜೀನಾಮೆ ನೀಡಬೇಕು. ನಂತರ ನೇರವಾಗಿ ಚುನಾವಣೆಗೆ ಹೋಗುತ್ತೇವೆ. ಜೆಡಿಎಸ್ ಜತೆ ಸೇರಲ್ಲ. ಅವರ ಜೊತೆ ಸೇರಿ ಅನುಭಿವಿಸಿದ್ದು ಸಾಕು ಎಂದಿದ್ದಾರೆ ಸಿದ್ದರಾಮಯ್ಯ. ಸಿದ್ದರಾಮಯ್ಯನವರೇ ಯಾರ ಸಹವಾಸದಿಂದ ಯಾರು ಕೆಟ್ಟರು? ಯಾರು ಯಾರಿಗೆ ಕೇಡು ಬಗೆದರು? ಎಂದು ಆತ್ಮವಂಚನೆ ಇಲ್ಲದೇ ಹೇಳುವಿರಾ?
ನಮ್ಮ ಸಹವಾಸ ಮಾಡಿ ಎಂದು ಸಿದ್ದರಾಮಯ್ಯನವರನ್ನು ಬೇಡಿದ್ದು ಯಾರು. ಅವರ ಮನೆ ಬಾಗಿಲಿಗೆ ಹೋಗಿದ್ದು ಯಾರು? ಸಹಕಾರ(?) ಕೊಟ್ಟವರು ಯಾರು? ಪಕೃತಿ ಚಿಕಿತ್ಸೆಯಲ್ಲಿ ಕೂತು ಕತ್ತಿ ಮಸೆದಿದ್ದು ಯಾರು? ದಿನಕ್ಕೊಬ್ಬರ ಮೂಲಕ ನನ್ನನ್ನು ಟೀಕಿಸಿದ್ದು ಯಾರು?
ಲೋಕಸಭೆ ಚುನಾವಣೆಯಲ್ಲಿ ನೀವು ಕೊಟ್ಟ ಸಹಕಾರ ಎಂಥದ್ದು? ಸರ್ಕಾರ ಬೀಳಿಸಿದ ಶಾಸಕರ ಎದೆ ಬಗೆದರೆ ಅಲ್ಲಿ ಕಾಣುತ್ತಿದ್ದವರು ಯಾರು? ಈ "ಯಾರು''ಎಂಬ ಪ್ರಶ್ನೆಗೆ ನೀವು ಪ್ರಾಮಾಣಿಕವಾಗಿ ಉತ್ತರಿಸುವಿರಾ? ನೀವು ಕೊಟ್ಟ ಸಹಕಾರಕ್ಕೆ, ಬೆಂಬಲಕ್ಕೆ ನಾನು ಋಣಿ. ಈ ಜನ್ಮದಲ್ಲಿ ನಾನು ಮರೆಯಲಾರೆ.
ನಿಮ್ಮ ಸಹವಾಸ ನಮಗೂ ಬೇಡ ಸಿದ್ದರಾಮಯ್ಯನವರೇ...
ಸ್ನೇಹಿತನ ಬಿಡುಗಡೆಗೆ ಎಚ್‌ಡಿಕೆ ಕಾಲ್ಗುಣ ಕಾರಣ
ಹೌದು ಮಾಜಿ ಸಿಎಂ ಕುಮಾಸ್ವಾಮಿ ಸರಣಿ ಟ್ವೀಟ್ ಮಾಡಿ ಸಿದ್ದರಾಮಯ್ಯ ಅವರಿಗೆ ಪ್ರಶ್ನೆಗಳ ಸರಮಾಲೆ ಎಸೆದಿದ್ದು ಸದ್ಯದ ರಾಜಕಾರಣದ ಮಹತ್ವದ ಬೆಳವಣಿಗೆ. ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಒಟ್ಟಾಗಿಯೇ ರಾಜ್ಯದಲ್ಲಿ ಚುನಾವಣೆ ಎದುರಿಸಿದ್ದವು. ಎರಡೂ ಪಕ್ಷಗಳಿಗೂ ರಾಝ್ಯದಲ್ಲಿ ತಲಾ ಒಂದೊಂದು ಸ್ಥಾನ ಸಿಕ್ಕಿತ್ತು.
ಅದಾದ ನಂತರದ ಬೆಳವಣಿಗೆಯಲ್ಲಿ ಸಿದ್ದರಾಮಯ್ಯ ಆಪ್ತರು ಎಂದು ಕರೆಸಿಕೊಂಡಿದ್ದ ಶಾಸಕರೆ ರಾಜೀನಾಮೆ ನೀಡಿದ ಪರಿಣಾಮ ಕುಮಾರಸ್ವಾಮಿ ಸಿಎಂ ಆಗಿದ್ದ ದೋಸ್ತಿ ಸರ್ಕಾರ ಬಹುಮತ ಸಾಬೀತು ಮಾಡಲು ವಿಫಲವಾಗಿ ಅಧಿಕಾರ ಕಳೆದುಕೊಂಡಿತ್ತು.
ಇದೀಗ ಉಪಚುನಾವಣೆ ಹತ್ತಿರವಾಗುತ್ತಿರುವ ಸಂರ್ಭದಲ್ಲಿ ಕುಮಾರಸ್ವಾಮಿ ಮಾಡಿರುವ ಟ್ವೀಟ್ ಗೆ ಸಿದ್ದರಾಮಯ್ಯ ಯಾವ ಪ್ರತಿಕ್ರಿಯೆ ನೀಡುತ್ತಾರೆ ಎಂದು ಕಾದು ನೋಡಬೇಕು.
