Asianet Suvarna News Asianet Suvarna News

ಒಳಮೀಸಲಾತಿ: ತುಟಿಗೆ ತುಪ್ಪ ಸವರುವ ನೀತಿಗಳನ್ನು ಸರ್ಕಾರಗಳು ಬಿಡಬೇಕು ಎಂದ ಎಚ್‌ಡಿ

ಒಳಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರ ಕೆಲ ಸಲಹೆ ಕೊಡುವ ಮೂಲಕ ಟಾಂಗ್ ಕೊಟ್ಟಿದ್ದಾರೆ.

Former CM HD Kumaraswamy Reacts On discrimination In Reservation
Author
Bengaluru, First Published Aug 30, 2020, 3:39 PM IST

ಬೆಂಗಳೂರು, (ಆ.30): ಒಳಮೀಸಲಾತಿ “ಸರ್ವರಿಗೂ ಸಮಪಾಲು ಸಮಬಾಳು” ಎಂಬ ಸಂವಿಧಾನಿಕ ಮೂಲ ಧಾತುವೇ ಆಗಿದ್ದು, ಅದನ್ನು ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸ್ವತಃ ಹಿಂದುಳಿದ ವರ್ಗದವರೇ ಆಗಿರುವ ಪ್ರಧಾನಿಗಳು ಸಾಮಾಜಿಕ ನ್ಯಾಯವನ್ನು ಅನುಷ್ಠಾನಗೊಳಿಸುವ ಮೂಲಕ ಸಮಬಾಳು-ಸಮಪಾಲು ಎಂಬ ತತ್ವವನ್ನು ಎತ್ತಿಹಿಡಿಯಬೇಕಾಗಿದೆ. ಶೋಷಿತ ವರ್ಗದಲ್ಲೂ ಸ್ಪೃಶ್ಯ ಸಮುದಾಯ ಅಸ್ಪೃಶ್ಯರನ್ನು ಹತ್ತಿರ ಬಿಟ್ಟು ಕೊಳ್ಳದ ಪರಿಸ್ಥಿತಿ ಈಗಲೂ ಇದೆ. ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು. ಒಳಮೀಸಲಾತಿ ವಿಚಾರದಲ್ಲಿ ತುಟಿಗೆ ತುಪ್ಪ ಸವರುವ ನೀತಿಗಳನ್ನು ಸರ್ಕಾರಗಳು ಇನ್ನಾದರೂ ಬಿಡಬೇಕು ಎಂದರು.

ಕುಮಾರಸ್ವಾಮಿಗೆ ಭರ್ಜರಿ ಉಡುಗೊರೆ ನೀಡಿದ ಸಿಎಂ ಯಡಿಯೂರಪ್ಪ...!

ತುಳಿತಕ್ಕೊಳಗಾದ ಎಲ್ಲಾ ಜಾತಿಗಳಿಗೂ ಮೀಸಲಾತಿಯ ಫಲ ದಕ್ಕಬೇಕು ಎಂಬ ಸುಪ್ರೀಂ ಕೋರ್ಟಿನ ಆಶಯ ಒಳಮೀಸಲಾತಿಯ ಪರವಾದ ನಿಲುವೇ ಆಗಿದ್ದು, ಅದನ್ನು ಜಾರಿಗೊಳಿಸುವುದು ಸಾಮಾಜಿಕ ನ್ಯಾಯದ ಪರಿಪಾಲನೆಯ ಕರ್ತವ್ಯವಾಗುತ್ತದೆ. ಮೇಲ್ಜಾತಿಯಲ್ಲಿನ ಬಡವರಿಗೆ ಶೇ. 10ರಷ್ಟು ಮೀಸಲಾತಿಯನ್ನು ಜಾರಿಗೆ ತಂದ ಕೇಂದ್ರದ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ, ಹಿಂದುಳಿದ ವರ್ಗಗಳಲ್ಲಿನ ಅವಕಾಶವಂಚಿತರಿಗೆ ಒಳಮೀಸಲಾತಿ ಜಾರಿಗೆ ತರಬಾರದೇಕೆ ಎಂದಿದ್ದಾರೆ.

Follow Us:
Download App:
  • android
  • ios