ಬಿಜೆಪಿ ವಿರುದ್ಧ ಜೆಡಿಎಸ್‌ ಗರಂ: ನಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳಿ ಎಂದ ಎಚ್‌ಡಿಕೆ

ಬಿಜೆಪಿಯು ನಮ್ಮನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು. ಗೌರವಯುತವಾಗಿ ನಡೆಸಿಕೊಳ್ಳಬೇಕು. ಕಡೆಗಣಿಸಬಾರದು. ಇದರಿಂದ ಮುಂದೆ ಪೆಟ್ಟುಬಿದ್ದರೆ ಅದರ ಸಾಧಕ-ಬಾಧಕಗಳಿಗೆ ಬಿಜೆಪಿಯೇ ಜವಾಬ್ದಾರಿಯಾಗಲಿದೆ' ಎಂದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ 

Former CM HD Kumaraswamy Slams BJP grg

ಬೆಂಗಳೂರು(ಮಾ.19): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಮತ್ತು ಜೆಡಿಎಸ್ ನಡುವೆ ಅಸಮಾಧಾನ ಹೊಗೆಯಾಡತೊಡಗಿದೆ. 'ಬಿಜೆಪಿಯು ನಮ್ಮನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು. ಗೌರವಯುತವಾಗಿ ನಡೆಸಿಕೊಳ್ಳಬೇಕು. ಕಡೆಗಣಿಸಬಾರದು. ಇದರಿಂದ ಮುಂದೆ ಪೆಟ್ಟುಬಿದ್ದರೆ ಅದರ ಸಾಧಕ-ಬಾಧಕಗಳಿಗೆ ಬಿಜೆಪಿಯೇ ಜವಾಬ್ದಾರಿಯಾಗಲಿದೆ' ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ಧಾಟಿಯಲ್ಲಿ ತೀಕ್ಷ್ಮವಾಗಿ ಹೇಳಿದ್ದಾರೆ.

ಸೋಮವಾರ ಪಕ್ಷದ ಕಚೇರಿಯಲ್ಲಿ ಲೋಕಸಭಾ ಕ್ಷೇತ್ರಗಳ ಉಸ್ತುವಾರಿಗಳು ಹಾಗೂ ಜಿಲ್ಲಾಅಧ್ಯಕ್ಷರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸುಮಾರು 18 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ನಮ್ಮ ಪಕ್ಷದಿಂದ ಅನುಕೂಲ ಆಗಲಿದೆ. ಈ ವಿಷಯವನ್ನು ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ನಮ್ಮ ಶಕ್ತಿಯನ್ನು ಧಾರೆ ಎರೆದರೆ ಬಿಜೆಪಿಗೆ ಒಳ್ಳೆಯ ಫಲಿತಾಂಶ ಬರುತ್ತದೆ. ಏಕೆಂದರೆ ಕರ್ನಾಟಕದ ರಾಜಕೀಯ ಬೇರೆ, ದೇಶದ ಇತರೆ ರಾಜ್ಯಗಳ ರಾಜಕೀಯವೇ ಬೇರೆ. ಇದನ್ನು ಬಿಜೆಪಿ ಹೈಕಮಾಂಡ್ ಗಮನಕ್ಕೆ ತನ್ನಿ ಎಂದು ಮುಖಂಡರು ನನ್ನ ಮೇಲೆ ಒತ್ತಡ ಹಾಕಿದ್ದಾರೆ ಎಂದರು.

ಕುಮಾರಣ್ಣ ನೀವು ಅರ್ಜಿ ಹಾಕಿ ಸಾಕು, ನಾವು ಗೆಲ್ಲಿಸಿಕೊಂಡು ಬರುತ್ತೇವೆ: ಸಿ.ಎಸ್.ಪುಟ್ಟರಾಜು

ರಾಜ್ಯದ ಅನೇಕ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಶಕ್ತಿ ಇದೆ ಅಂತ ಎಲ್ಲರಿಗೂ ಗೊತ್ತು. ರಾಜಕೀಯ ವಿಶ್ಲೇಷಣೆ ಮಾಡುವ ಎಲ್ಲರಿಗೂ ಈ ವಿಷಯ ಗೊತ್ತಿದೆ. ಬಿಜೆಪಿ ಅವರು ಇದನ್ನೆಲ್ಲ ಗಮನಿಸು ತ್ತಾರೆ. ಅದನ್ನು ಸರಿಯಾಗಿ ಉಪಯೋಗ ಮಾಡಿ ಕೊಳ್ಳಿ ಅಂತ ಹೇಳೋಕೆ ನಾವು ಸಭೆ ಮಾಡಿದ್ದು ಎಂದು ತಿಳಿಸಿದರು. ಇವತ್ತಿನ ಸಭೆಯಲ್ಲಿ ಚುನಾ ವಣೆ ಉಸ್ತುವಾರಿಗಳು ಮತ್ತು ಜಿಲ್ಲಾ ಘಟಕದ ಅಧ್ಯಕ್ಷರು ಭಾಗವಹಿಸಿದ್ದರು. ಕೆಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಸಭೆಯಲ್ಲಿ ನಮ್ಮ ಪ್ರಮುಖರು ಅಭಿಪ್ರಾಯ ಹೇಳಿದ್ದಾರೆ. ಇದನ್ನು ಬಿಜೆಪಿ ನಾಯಕರು ಅರ್ಥ ಮಾಡಿಕೊಳ್ಳಬೇಕು. ನಮ್ಮ ಸಹಕಾರ ಇರುವ ರೀತಿಯಲ್ಲೇ ಬಿಜೆಪಿ ಯಿಂದಲೂ ಸಹಕಾರ ಇರಬೇಕು.

ಅದನ್ನು ಸರಿ ಮಾಡುವ ನಿಟ್ಟಿನಲ್ಲಿ ಕೆಲವು ಸೂಚನೆಗಳನ್ನು ಬಿಜೆಪಿಯವರಿಗೆ ನೀಡಬೇಕು ಅಂತ ಕೆಲವರು ಹೇಳಿ ದ್ದಾರೆ ಎಂದು ಕುಮಾರಸ್ವಾಮಿ ಮಾಹಿತಿ ನೀಡಿದರು. ಎರಡೂ ಪಕ್ಷದ ನಾಯಕರ ಸಭೆಗಳು, ಚುನಾವಣೆ ಪ್ರಚಾರದಲ್ಲಿ ಎರಡು ಪಕ್ಷಗಳು ಹೇಗೆ ಕೆಲಸ ಮಾಡ ಬೇಕು, ಬೂತ್ ಮಟ್ಟದಲ್ಲಿ ಹೇಗೆ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಸಲಹೆ ಕೊಡಬೇಕು ಅಂತ ಸಭೆಯಲ್ಲಿ ಹೇಳಿದ್ದಾರೆ. ಉತ್ತರ ಕರ್ನಾಟಕದ ವಿಜಯ ಪುರ, ಕಲಬುರಗಿಯಲ್ಲಿ ಬಿಜೆಪಿಗಿಂತ ಜೆಡಿಎಸ್ ಪ್ರಬಲ ವಾಗಿದೆ. ಇಂತಹ ಕ್ಷೇತ್ರಗಳಲ್ಲಿ ನಮ್ಮ ನಾಯಕರನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು. ಇದರ ಬಗ್ಗೆ ಬಿಜೆಪಿ ಹೈಕಮಾಂಡ್ ಜತೆ ಚರ್ಚೆ ಆಗಬೇಕು ಅಂತ ಪ್ರಮುಖರು ಹೇಳಿದ್ದಾರೆ ಎಂದರು. ನಮ್ಮನ್ನು ಗೌರವ ಯುತವಾಗಿ ನಡೆಸಿಕೊಳ್ಳಬೇಕು. ಕಡೆಗಣಿಸ ಬಾರದು. ಅದರಿಂದ ಆಗುವ ಪರಿಣಾ ಮವನ್ನು ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಇದೆಲ್ಲವನ್ನೂ ಬಿಜೆಪಿ ಹೈಕಮಾಂಡ್ ಜತೆ ಚರ್ಚೆ ಮಾಡಿ ಸೌಹಾರ್ದಯು ತವಾಗಿ ಒಟ್ಟಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ ಎಂದರು. ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಾಜಿ ಸಚಿವ ರಾದ ಎಚ್.ಡಿ.ರೇವಣ್ಣ, ಬಂಡೆಪ್ಪ ಕಾಶೆಂಪೂರ್, ವೆಂಕಟರಾವ್ ನಾಡಗೌಡ, ಯುವ ಜನತಾದಳದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ ಭಾಗವಹಿಸಿದ್ದರು

ಜೆಡಿಎಸ್‌ಗೆ ಸಿಟ್ಟೇಕೆ?

• ಬಿಜೆಪಿ ಮೈತ್ರಿ ಧರ್ಮ ಪಾಲಿಸದೆ ಜೆಡಿಎಸ್‌ ಅನ್ನು ಕಡೆಗಣಿಸುತ್ತಿದೆ
• 20 ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಗೆ ಮುನ್ನ ಜೆಡಿಎಸ್‌ ಜತೆ ಮಾತಾಡಿಲ್ಲ
• ಚುನಾವಣಾ ಪ್ರಚಾರಕ್ಕೆ ಜೆಡಿಎಸ್‌ ನಾಯಕರನ್ನು ಆಹ್ವಾನಿಸುತ್ತಿಲ್ಲ
• 3-4% ಜೆಡಿಎಸ್‌ನ ಮತಗಳು ಸಿಕ್ಕರೆ 18 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ನಿರಾಯಾಸವಾಗಿ ಗೆಲ್ಲುತ್ತಾರೆ
• ಕಲಬುರಗಿ, ಶಿವಮೊಗ್ಗದ ಮೋದಿ ಸಮಾವೇಶಕ್ಕೆ ದೇವೇಗೌಡ, ಕುಮಾರಸ್ವಾಮಿ ಅವರನ್ನೂ ಕರೆದಿಲ್ಲ
• ಜೆಡಿಎಸ್ ಹೇಗಿದ್ದರೂ ಗೆಲ್ಲುತ್ತಿದ್ದ 2-3 ಕ್ಷೇತ್ರಗಳನ್ನು ಪಡೆಯುವುದಕ್ಕೆ ಬಿಜೆಪಿಗೆ ತಲೆಬಾಗಬೇಕೆ?

Latest Videos
Follow Us:
Download App:
  • android
  • ios