ಕರ್ನಾಟಕವು ಸಂಪದ್ಭರಿತ ರಾಜ್ಯವಾಗಿದ್ದು, ಹಣದ ಕೊರತೆ ಇಲ್ಲ. ರಸ್ತೆ ತೆರಿಗೆ ಸಂಗ್ರಹದಲ್ಲಿ ರಾಜ್ಯವು ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ತೆರಿಗೆ ಸಂಗ್ರಹದಲ್ಲಿ ಮುಂಚೂಣಿಯಲ್ಲಿದ್ದೇವೆ. ಕಾಂಗ್ರೆಸ್ಸಿಗರ ಲೂಟಿಯ ದಾಹಕ್ಕೆ ರಾಜ್ಯದ ಖಜಾನೆಯನ್ನು ಖಾಲಿ ಮಾಡಲಾಗುತ್ತಿದೆ ಎಂದು ಹರಿಹಾಯ್ದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ 

ಬೆಂಗಳೂರು(ಫೆ.24): ಕಾಂಗ್ರೆಸ್‌ ಸರ್ಕಾರ ರಾಜ್ಯವನ್ನು ಭಿಕ್ಷುಕರ ರಾಜ್ಯವನ್ನಾಗಿ ಮಾಡಲು ಹೊರಟಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕವು ಸಂಪದ್ಭರಿತ ರಾಜ್ಯವಾಗಿದ್ದು, ಹಣದ ಕೊರತೆ ಇಲ್ಲ. ರಸ್ತೆ ತೆರಿಗೆ ಸಂಗ್ರಹದಲ್ಲಿ ರಾಜ್ಯವು ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ತೆರಿಗೆ ಸಂಗ್ರಹದಲ್ಲಿ ಮುಂಚೂಣಿಯಲ್ಲಿದ್ದೇವೆ. ಕಾಂಗ್ರೆಸ್ಸಿಗರ ಲೂಟಿಯ ದಾಹಕ್ಕೆ ರಾಜ್ಯದ ಖಜಾನೆಯನ್ನು ಖಾಲಿ ಮಾಡಲಾಗುತ್ತಿದೆ ಎಂದು ಹರಿಹಾಯ್ದರು.

1 ಲಕ್ಷ ಕೋಟಿ ಸಾಲ ಮಾಡಿ 52 ಸಾವಿರ ಕೋಟಿ ಗ್ಯಾರೆಂಟಿಗೆ ನೀಡಿದ್ರೆ ಬಡವರ ಬಜೆಟ್ ಅಂತಾರಾ? ಸಿಎಂ ವಿರುದ್ಧ ಎಚ್‌ಡಿಕೆ ವಾಗ್ದಾಳಿ!

ಗ್ಯಾರಂಟಿಯಿಂದಾಗಿ ಖಜಾನೆ ಖಾಲಿಯಾಗುವುದಿಲ್ಲ. ಅವರ ಸ್ವೇಚ್ಛಾಚಾರದಿಂದ ಖಾಲಿಯಾಗುತ್ತಿದೆ. ಕೇಂದ್ರ ಸರ್ಕಾರವನ್ನು ಪದೇ ಪದೇ ಕೆದಕಿಕೊಂಡು ಹೋಗುತ್ತಿದ್ದಾರೆ. ಸದನದಲ್ಲಿ ಅಮ್ಮ, ತಾಯಿ ಆರು ಸಾವಿರ ಕೋಟಿ ರು. ಎಂದು ಕೇಳಿ ರಾಜ್ಯದ ಜನತೆಗೆ ಅವಮಾನ ಮಾಡಲಾಗುತ್ತಿದೆ. ಇದು ಮುಖ್ಯಮಂತ್ರಿಗೆ ಶೋಭೆ ತರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.