Asianet Suvarna News Asianet Suvarna News

ಬೆಲೆ ಏರಿಕೆ ಬಗ್ಗೆ ಸಿದ್ದು ಸರ್ಕಾರಕ್ಕೆ ಚಿಂತೆಯೇ ಇಲ್ಲ: ಕುಮಾರಸ್ವಾಮಿ ಕಿಡಿ

ಬೆಲೆ ಏರಿಕೆ ಪಟ್ಟಿ ಓದಿದರೆ ಎದೆ ನಡುಗುತ್ತದೆ. ಅಕ್ಕೆ ಬೆಲೆ ಕೆಜಿಗೆ ಸರಾಸರಿ 20 ರು. ಹೆಚ್ಚಳವಾದರೆ, ಕೆಜಿ ಟೊಮೆಟೋ ಬೆಲೆ 100 ರು. ಮುಟ್ಟಿದೆ. ಈ ಏರಿಕೆ ಲಾಭ ಅತ್ತ ರೈತನಿಗೂ ಇಲ್ಲ, ಇತ್ತ ಗ್ರಾಹಕನಿಗೂ ಇಲ್ಲ. ಜನ ಬೆಲೆಯ ಬೆಂಕಿಯಲ್ಲಿ ಬೇಯುತ್ತಿದ್ದರೆ ಈ ಸರ್ಕಾರ ಆ ಬೇಗೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತಿದೆ: ಎಚ್‌.ಡಿ.ಕುಮಾರಸ್ವಾಮಿ 

Former CM HD Kumaraswamy Slams CM Siddaramaiah grg
Author
First Published Jun 27, 2023, 12:10 PM IST | Last Updated Jun 27, 2023, 12:10 PM IST

ಬೆಂಗಳೂರು(ಜೂ.27):  ಐದು ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿಸುಳ್ಳು ಹೇಳಿದ್ದ ರಾಜ್ಯ ಕಾಂಗ್ರೆಸ್‌ ಸರ್ಕಾರ ಬರಗೆಟ್ಟ ಈ ಹೊತ್ತಿನಲ್ಲಿ ಅಂಬರದ ಮೇಲೆ ಕುಳಿತು ಸ್ವಯಂವರ ಮಾಡಿಕೊಳ್ಳುತ್ತಿರುವ ಮತಗೆಟ್ಟವರನಂತೆ ವರ್ತಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಸಂಬಂಧ ಸೋಮವಾರ ಸರಣಿ ಟ್ವೀಟ್‌ ಮಾಡಿರುವ ಅವರು, ಬೆಲೆ ಏರಿಕೆ ಹೊಡೆತಕ್ಕೆ ಜನ ತತ್ತರಿಸುತ್ತಿರುವುದು ಕಾಂಗ್ರೆಸ್‌ ಕಣ್ಣಿಗೆ ಕಾಣುತ್ತಿಲ್ಲ. ನನಗೂ ಫ್ರೀ, ನಿನಗೂ ಫ್ರೀ ಎಂದು ಗ್ಯಾರಂಟಿ ಜಾಗಟೆ ಹೊಡೆದ ಈ ಸರ್ಕಾರಕ್ಕೆ ಮಾರುಕಟ್ಟೆಯಲ್ಲಿ ಗಗನಮುಖಿಯಾದ ಆಹಾರ ಪದಾರ್ಥಗಳ ಬೆಲೆ ಮೇಲೆ ನಿಯಂತ್ರಣವೇ ಇಲ್ಲ. ಆಹಾರ ಮತ್ತು ನಾಗರಿಕ ಪೂರೈಕೆ, ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಗಳು ಜನರ ಕಣ್ಣೀರಿನಲ್ಲಿ ಗೆಣಸು ಬೇಯಿಸಿಕೊಳ್ಳುತ್ತಿವೆ. ಅವರಿಗೆ ಬೆಲೆ ಇಳಿಕೆ ಬಗ್ಗೆ ಚಿಂತನೆಯೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್‌ ಪಾಳಯದಲ್ಲಿ ಮತ್ತೊಮ್ಮೆ ಬಿರುಗಾಳಿ ಏಳುತ್ತಾ?: ಗೌಡರ ಕುಟುಂಬದಿಂದ ಲೋಕಸಭೆಗೆ ಯಾರೂ ಸ್ಪರ್ಧಿಸಲ್ವಂತೆ?

ಇನ್ನೊಬ್ಬರ ಮೇಲೆ ಗೂಬೆ ಕೂರಿಸುವ ಈ ಸರ್ಕಾರ ಬಂದು ತಿಂಗಳ ಮೇಲಾಯಿತು. ಅಧಿಕಾರ ಸಿಕ್ಕ ಕೂಡಲೇ ವರ್ಗಾವಣೆ ದಂಧೆಯ ದಾಸ್ಯಕ್ಕೆ ಬಿದ್ದ ಸರ್ಕಾರಕ್ಕೆ ಮಾರುಕಟ್ಟೆಯಲ್ಲಿ ಹೆಚ್ಚುತ್ತಲೇ ಹೋಗುತ್ತಿರುವ ಬೆಲೆ, ಆಹಾರ ಪದಾರ್ಥಗಳ ದುಬಾರಿ ಬಗ್ಗೆ ಗಮನ ಹೋಗಲೇ ಇಲ್ಲ. ಹಣದ ಹಪಾಹಪಿ ಭಾಗ್ಯಗಳನ್ನು ಬಲಿ ತೆಗೆದುಕೊಳ್ಳುವ ದುಸ್ಥಿತಿಗೆ ದೂಡಿದೆ. ಬೆಲೆ ಏರಿಕೆ ಪಟ್ಟಿ ಓದಿದರೆ ಎದೆ ನಡುಗುತ್ತದೆ. ಅಕ್ಕೆ ಬೆಲೆ ಕೆಜಿಗೆ ಸರಾಸರಿ 20 ರು. ಹೆಚ್ಚಳವಾದರೆ, ಕೆಜಿ ಟೊಮೆಟೋ ಬೆಲೆ 100 ರು. ಮುಟ್ಟಿದೆ. ಈ ಏರಿಕೆ ಲಾಭ ಅತ್ತ ರೈತನಿಗೂ ಇಲ್ಲ, ಇತ್ತ ಗ್ರಾಹಕನಿಗೂ ಇಲ್ಲ. ಜನ ಬೆಲೆಯ ಬೆಂಕಿಯಲ್ಲಿ ಬೇಯುತ್ತಿದ್ದರೆ ಈ ಸರ್ಕಾರ ಆ ಬೇಗೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತಿದೆ. ಹೊಸ ಹುಂಡಿಗಳಿಗೆ ಜಾಗ ಹುಡುಕುತ್ತಿದೆ ಎಂದು ಹರಿಹಾಯ್ದಿದ್ದಾರೆ.

Latest Videos
Follow Us:
Download App:
  • android
  • ios