ಎಂಪಿ ಚುನಾವಣೆವರೆಗೂ ಸರ್ಕಾರದ ಜಾತಿಗಣತಿ ನಾಟಕ: ಎಚ್‌ಡಿಕೆ

ಲೋಕಸಭೆ ಚುನಾವಣೆವರೆಗೂ ಕಾಂಗ್ರೆಸ್‌ ಸರ್ಕಾರ ‘ಜಾತಿಗಣತಿ’ ನಾಟಕ ಆಡುತ್ತದೆ ಆನಂತರವೂ ಈ ಸರ್ಕಾರದಿಂದ ಏನೂ ಆಗದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದರು. 

Former CM HD Kumaraswamy Slams On Congress Govt At Ramanagara gvd

ರಾಮನಗರ (ನ.25): ಲೋಕಸಭೆ ಚುನಾವಣೆವರೆಗೂ ಕಾಂಗ್ರೆಸ್‌ ಸರ್ಕಾರ ‘ಜಾತಿಗಣತಿ’ ನಾಟಕ ಆಡುತ್ತದೆ ಆನಂತರವೂ ಈ ಸರ್ಕಾರದಿಂದ ಏನೂ ಆಗದು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟೀಕಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವರದಿಯನ್ನು ಸರ್ಕಾರ ಇನ್ನೂ ನಾಲ್ಕು ತಿಂಗಳು ಅಧ್ಯಯನ ಮಾಡಲಾಗುವುದು ಎಂದು ಹೇಳುತ್ತಿದೆ. 

ನನ್ನ ಪ್ರಕಾರ ಲೋಕಸಭೆ ಚುನಾವಣೆ ತನಕ ಇದು ಏನೂ ಆಗಲ್ಲ. ಯಾರೂ ಗಾಬರಿ ಆಗಬೇಕಾದ ಅವಶ್ಯಕತೆ ಇಲ್ಲ ಎಂದರು. ಇದೇ ಸಿದ್ದರಾಮಯ್ಯ ಅವರು 2018ರಲ್ಲಿ ಕಾಂತರಾಜು ವರದಿ ಕೊಡಲು ಬಂದಾಗ ಆ ವರದಿಯನ್ನು ಕುಮಾರಸ್ವಾಮಿ ಸ್ವೀಕರಿಸಿಲ್ಲ ಎಂದು ಈಗ ಹೇಳುತ್ತಿ ದ್ದಾರೆ. ಹಾಗಾದರೆ ಆಗಲೇ ವರದಿ ಸಿದ್ಧವಾಗಿತ್ತು ಎಂದಾಯಿತಲ್ಲಾ? ಈಗ ನಿಮ್ಮ ಸರ್ಕಾರ ಬಂದು 6 ತಿಂಗಳಾಗಿದೆ. ಇನ್ನೂ ಯಾಕೆ ವರದಿ ಸ್ವೀಕಾರ ಮಾಡಿಲ್ಲ? ಎಂದವರು ಸರ್ಕಾರಕ್ಕೆ ಪ್ರಶ್ನೆ ಎಸೆದಿದ್ದಾರೆ.

ಡಿಕೆಶಿ ಸಿಬಿಐ ಕೇಸ್ ವಾಪಸಿನ ನಿರ್ಧಾರಕ್ಕೆ ಛೀಮಾರಿ ಬೀಳಲಿದೆ: ಎಚ್‌.ಡಿ.ಕುಮಾರಸ್ವಾಮಿ

ಅಕ್ಕಿ ಕಳವು, ಕಠಿಣ ಕ್ರಮ ಕೈಗೊಳ್ಳಲಿ: ಚನ್ನಪಟ್ಟಣದಲ್ಲಿ ಅನ್ನಭಾಗ್ಯದ ಅಕ್ಕಿ ಕಳವು ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಿ. ಇದು ಕೇವಲ ಚನ್ನಪಟ್ಟಣದಲ್ಲಿ ಮಾತ್ರವಲ್ಲ, ರಾಜ್ಯದ ಹಲವೆಡೆ ನಡೆಯುತ್ತಿದೆ. ರಾಜ್ಯ ಸರ್ಕಾರ ಜವಾಬ್ದಾರಿಯಿಂದ ಕ್ರಮವಹಿಸಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

ಡಿಕೆ ಶಿವಕುಮಾರ್ ಜೀವನ ಏನೆಂಬುದು ತಿಳಿದಿದೆ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜೀವನ ಏನೆಂಬುದು ತಿಳಿದಿದೆ. ದೇಶದ ವ್ಯವಸ್ಥೆಯಲ್ಲಿ ಕಳ್ಳರು ಹಾಗೂ ಸುಳ್ಳರು ಒಂದಾಗಿದ್ದಾರೆ. ಮೇಲೊಬ್ಬ ಭಗವಂತ ಎಂಬುವವನಿದ್ದಾನೆ. ಅವನೇ ಅಂತಿಮವಾಗಿ ಎಲ್ಲಾ ತೀರ್ಮಾನ ತೆಗೆದುಕೊಳ್ಳುತ್ತಾನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಿಡಿಕಾರಿದರು.

ತಾಲೂಕಿನ ದಾಸೇಗೌಡನದೊಡ್ಡಿ ಗ್ರಾಮದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜದಲ್ಲಿ ಹಣದ ಮದ ಹತ್ತಿಸಿಕೊಂಡವರು ಎಲ್ಲವನ್ನೂ ಕೊಂಡುಕೊಳ್ಳುತ್ತೇನೆ ಎಂದುಕೊಂಡಿದ್ದಾರೆ. ಆದರೆ ಎಲ್ಲದಕ್ಕೂ ಒಂದು ಅಂತ್ಯವೆಂಬುದು ಇದ್ದೇ ಇರುತ್ತದೆ ಎಂದು ತಿರುಗೇಟು ನೀಡಿದರು. ನನ್ನ ವಿರುದ್ಧ ಯಾರು ಬೇಕಾದರೂ ಪೋಸ್ಟರ್ ಅಂಟಿಸಿಕೊಳ್ಳಲಿ, ಬೇಡ ಎನ್ನುವುದಿಲ್ಲ. ನನಗೆ ಯಾರು ಏನೂ ಮಾಡಲು ಸಾಧ್ಯವಾಗುವುದಿಲ್ಲವೆಂದು ತಮ್ಮ ವಿರುದ್ಧದ ಪೋಸ್ಟರ್ ವಾರ್ ವಿಚಾರವಾಗಿ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದರು.

ಸರ್ಕಾರದ ತಪ್ಪುಗಳನ್ನು ಏಕಾಂಗಿಯಾಗಿ ಪ್ರಶ್ನೆ ಮಾಡುವುದು ಕುಮಾರಸ್ವಾಮಿ ಒಬ್ಬನೇ. ಎಲ್ಲರೂ ಮೌನಕ್ಕೆ ಶರಣಾಗಿದ್ದಾಗ ಅಕ್ರಮ ಸಂಪತ್ತು, ವರ್ಗಾವಣೆ ದಂಧೆ ವಿರುದ್ಧ ನಾನು ಧ್ವನಿ ಎತ್ತಿದೆ. ಇಲ್ಲಿವರೆಗೆ ನಾನು ಏನು ಹೇಳಿದ್ದೇನೋ ಅದರಲ್ಲಿ ಒಂದಕ್ಕೂ ಸರ್ಕಾರ ಉತ್ತರ ಕೊಟ್ಟಿಲ್ಲ ಎಂದರು. ನಿಲುವು ಬದಲಾಯಿಸಿಕೊಳ್ಳಿ ಎಂಬ ಸಿ.ಎಂ. ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಅವರು ಮಾತನಾಡಲಿ, ತಲೆ ಏಕೆ ಕೆಡಿಸಿಕೊಳ್ಳಬೇಕು. ಅದರ ಅವಶ್ಯಕತೆಯೂ ಇಲ್ಲ ಎಂದು ಹೇಳಿದರು

ಮಂಡ್ಯದಿಂದ ಎಂಪಿಗೆ ಸ್ಪರ್ಧಿಸಲು ಎಚ್‌ಡಿಕೆ, ನಿಖಿಲ್‌ಗೆ ಆಹ್ವಾನ: ಸಿ.ಎಸ್.ಪುಟ್ಟರಾಜು

ರೈತರಿಗೆ ಬರ ಪರಿಹಾರ ವಿತರಣೆ ಮಾಡಿಲ್ಲ. ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ 800ಕೋಟಿ ಇಟ್ಟಿದ್ದೇವೆ ಎನ್ನುತ್ತಾರೆ. ರೈತರಿಗೆ ಪರಿಹಾರ ನೀಡದೇ ಯಾವ ಉದ್ದೇಶಕ್ಕೆ ಆ ಹಣ ಇಟ್ಟಿದ್ದೀರಿ. ಇಲ್ಲಿವರೆಗೂ ಬೆಳೆ ಪರಿಹಾರದ ನಷ್ಟವನ್ನು ಸರ್ಕಾರ ಕೊಟ್ಟಿಲ್ಲ. ಅದೇನೋ ನುಡಿದಂತೆ ನಡೆದಿದ್ದೇವೆ ಅಂತಾರೆ ಇದೇನಾ ಎಂದು ಪ್ರಶ್ನಿಸಿದರು.

Latest Videos
Follow Us:
Download App:
  • android
  • ios