ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದು ವಿಫಲ: ಎಚ್.ಡಿ.ಕುಮಾರಸ್ವಾಮಿ ಟೀಕೆ
ಗ್ಯಾರಂಟಿಗಳು ಹಳ್ಳ ಹಿಡಿದು ವಿಫಲವಾಗಿವೆ. ಯಾವ ಗ್ಯಾರಂಟಿಯೂ ಸಮರ್ಪಕ ಜಾರಿಯಾಗಿಲ್ಲ. ಎಷ್ಟು ಜನರಿಗೆ ಫಲ ಸಿಕ್ಕಿದೆ? ಆರ್ಥಿಕವಾಗಿ ಹೊರೆ ಎಷ್ಟು ಬಿದ್ದಿದೆ? ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಬೆಂಗಳೂರು (ನ.15): ಗ್ಯಾರಂಟಿಗಳು ಹಳ್ಳ ಹಿಡಿದು ವಿಫಲವಾಗಿವೆ. ಯಾವ ಗ್ಯಾರಂಟಿಯೂ ಸಮರ್ಪಕ ಜಾರಿಯಾಗಿಲ್ಲ. ಎಷ್ಟು ಜನರಿಗೆ ಫಲ ಸಿಕ್ಕಿದೆ? ಆರ್ಥಿಕವಾಗಿ ಹೊರೆ ಎಷ್ಟು ಬಿದ್ದಿದೆ? ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.
ಚರ್ಚೆಗೆ ಬನ್ನಿ. ನಾನು ತಯಾರಿದ್ದೇನೆ. ಅಧಿವೇಶನದಲ್ಲೂ ದಾಖಲೆ ಸಮೇತ ಚರ್ಚೆಗೆ ಸಿದ್ಧನಿದ್ದೇನೆ. ಚನ್ನಪಟ್ಟಣದ ನನ್ನ ಜನರೂ ಮಾಹಿತಿ ನೀಡಿದ್ದಾರೆ, ರಾಜ್ಯದ ಉಳಿದ 223 ಕ್ಷೇತ್ರಗಳ ಜನರು ಕೊಟ್ಟ ವಿವರವೂ ನನ್ನಲ್ಲಿದೆ. ನೀವು ಒಳಗೊಳಗೆ ಮಾಡುತ್ತಿರುವ ಕೆಲಸಗಳ ಮಾಹಿತಿಯೂ ಇದೆ. ಚರ್ಚೆ ಮಾಡೋಣ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ಯಾರಂಟಿ ವಿರೋಧಿಸುವವರು ಬಡವರ ವಿರೋಧಿಗಳು: ಎಚ್‌ಡಿಕೆಗೆ ಸಿಎಂ ಸಿದ್ದು ಕಿಡಿ
‘ಡೂಪ್ಲಿಕೇಟ್ ಸಿಎಂ’ (ಡಿಸಿಎಂ) ಡಿಕೆಶಿ: ಇದು ಕರ್ನಾಟಕ. ಡಿಕೆಶಿ ರಿಪಬ್ಲಿಕ್ ಅಲ್ಲ. ಚಕ್ರ ತಿರುಗಲು ಶುರು ಮಾಡಿದೆ. ಅದು ಕೆಳಕ್ಕೆ ಬಂದೇ ಬರುತ್ತದೆ'' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯದ ಜನತೆ ಆಡಳಿತ ಪಕ್ಷದಲ್ಲಿ ಕೂರಿಸಿದ್ದಾರೆ ಎಂದಷ್ಟಕ್ಕೇ ಇವರ ತಲೆ ನಿಲ್ಲುತ್ತಿಲ್ಲ. ಸ್ವಲ್ಪ ಸಮಯ ಬೇಕಷ್ಟೇ. ಆಗ ತಿರುಗುವ ತಲೆ ತಾನಾಗಿಯೇ ನಿಲ್ಲುತ್ತದೆ ತೀಕ್ಷ್ಣವಾಗಿ ಹೇಳಿದ್ದಾರೆ.
ಡೂಪ್ಲಿಕೇಟ್ ಮುಖ್ಯಮಂತ್ರಿ (ಡಿಸಿಎಂ) ಬಹಳ ಆವೇಶದಲ್ಲಿದ್ದಾರೆ. ಅತಿಯಾದ ಆವೇಶ ಆರೋಗ್ಯಕ್ಕೆ ಹಾನಿಕಾರಕ..! ಈ ಎಚ್ಚರಿಕೆ ನೆನಪಿದ್ದರೆ ಕ್ಷೇಮ. ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೂ ಏನು ಸಂಬಂಧ ಎಂಬ ಅಣಿಮುತ್ತು ಉದುರಿಸಿದ್ದಾರೆ. ಅಧಿಕಾರದ ಪಿತ್ತ ನೆತ್ತಿಗೇರಿ ಮೆದುಳು ಕೆಲಸ ಮಾಡದಿದ್ದರೆ ನಾಲಿಗೆ ಹೀಗೆ ಮಾತನಾಡುತ್ತದೆ. ಅಚ್ಚರಿಯೇನೂ ಇಲ್ಲ ಎಂದು ಲೇವಡಿ ಮಾಡಿದ್ದಾರೆ.
ನೋಟಿಸ್ ಪೀರಿಯಡ್‌ನಲ್ಲಿ ಸಿಎಂ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ತಾರಕಕ್ಕೇರಿ ತಣ್ಣಗಾಗುತ್ತಿರುವಾಗಲೇ, ಮುಖ್ಯಮಂತ್ರಿಗಳು ನೋಟಿಸ್ ಪೀರಿಯಡ್‌ನಲ್ಲಿ ಇದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ಹೈಕಮಾಂಡ್ ಈಗಾಗಲೇ ನೋಟಿಸ್ ನೀಡಿದ್ದು, ಮುಖ್ಯಮಂತ್ರಿಗಳು ನೋಟಿಸ್ ಪೀರಿಯಡ್‌ನಲ್ಲಿದ್ದಾರೆ. ಈ ಕುರಿತು ಎಚ್ಚರಿಕೆಯನ್ನೂ ನೀಡಿದ್ದಾರೆ ಎಂದು ಆಪಾದಿಸಿದರು.
ಸಾಲದ ಬಗ್ಗೆ ಮಾತಾಡಲು ಸಿದ್ದುಗೆ ಯಾವ ನೈತಿಕತೆ ಇದೆ?: ಎಚ್.ಡಿ.ಕುಮಾರಸ್ವಾಮಿ
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರಿಗೆ ಹಣ ಸಂಗ್ರಹಿಸಿ ಕೊಡುವ ಟಾರ್ಗೆಟ್ ಅನ್ನು ಹೈಕಮಾಂಡ್ ನೀಡಿದೆ. ಹೆಚ್ಚು ಹಣ ಕೊಟ್ಟವರು ಸಚಿವರಾಗಿ ಮುಂದುವರೆಯುತ್ತಾರೆ. ಇಲ್ಲದಿದ್ದರೆ ಎರಡೂವರೆ ವರ್ಷಗಳ ಬಳಿಕ ತೆಗೆದು ಹಾಕುತ್ತಾರೆ. ಕರ್ನಾಟಕದಲ್ಲಿ ಕಮಿಷನ್ ಸಂಗ್ರಹಿಸಿ ಅದನ್ನು ಪಂಚರಾಜ್ಯಗಳ ಚುನಾವಣೆಗೆ ಬಳಸಲಾಗುತ್ತಿದೆ. ಒಂದು ರಾಜ್ಯ, ಐದು ಚುನಾವಣೆ ಎನ್ನುವಂತಾಗಿದೆ ಎಂದರು.