ಡಿ.ಕೆ.ಸಹೋದರರ ದಬ್ಬಾಳಿಕೆಗೆ ಲೋಕಸಭಾ ಚುನಾವಣೆಯಲ್ಲಿ ಪಾಠ ಕಲಿಸುತ್ತಾರೆ: ಎಚ್‌ಡಿಕೆ
ಒಬ್ಬ ಲೋಕಸಭಾ ಸದಸ್ಯನಿಗೆ ಜನಸಂಪರ್ಕ ಸಭೆಗೆ ಅಧಿಕಾರಿಗಳನ್ನು ಕರೆದುಕೊಂಡು ಹೋಗುವ ಪವರ್ ಇಲ್ಲ. ಜಿಪಂನಲ್ಲಿ ದಿಶಾ ಸಭೆ ನಡೆಸಲು ಮಾತ್ರ ಅಧಿಕಾರವಿದೆ. ಈ ಬಗ್ಗೆ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೂ ತಂದಿದ್ದೇನೆ.
ರಾಮನಗರ (ಸೆ.21): ಒಬ್ಬ ಲೋಕಸಭಾ ಸದಸ್ಯನಿಗೆ ಜನಸಂಪರ್ಕ ಸಭೆಗೆ ಅಧಿಕಾರಿಗಳನ್ನು ಕರೆದುಕೊಂಡು ಹೋಗುವ ಪವರ್ ಇಲ್ಲ. ಜಿಪಂನಲ್ಲಿ ದಿಶಾ ಸಭೆ ನಡೆಸಲು ಮಾತ್ರ ಅಧಿಕಾರವಿದೆ. ಈ ಬಗ್ಗೆ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೂ ತಂದಿದ್ದೇನೆ. ಈ ವಿಚಾರವಾಗಿ ಸಂಸದ ಡಿ.ಕೆ.ಸುರೇಶ್ ವಿರುದ್ಧ ಹಕ್ಕುಚ್ಯುತಿ ಮಂಡಿಸುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಂಸದ ಡಿ.ಕೆ.ಸುರೇಶ್ ದೊಡ್ಡವರು. ಸಂಸ್ಕೃತಿ ಇರುವವರು. ಜನಸಂಪರ್ಕ ಸಭೆಗೆ ತಹಸೀಲ್ದಾರ್ ಕರೆದುಕೊಂಡು ಹೋಗುವ ಅಧಿಕಾರ ಸಂಸದರಿಗೆ ಇದಿಯಾ? ಎಂದು ಪ್ರಶ್ನಿಸಿದರು.
ರಾಜೀವ್‌ಗಾಂಧಿ ಆರೋಗ್ಯ ವಿವಿ ನನ್ನ ಕನಸಿನ ಯೋಜನೆ. ಡಿ.ಕೆ.ಶಿವಕುಮಾರ್ ಕಡೆಯವರ ಜಮೀನು ಇರುವ ಕಾರಣಕ್ಕೆ ತಕರಾರು ಮಾಡುತ್ತಿದ್ದಾರೆ. ರಾಮನಗರದಿಂದ ಯಾವುದೇ ಕಾರಣಕ್ಕೂ ಮೆಡಿಕಲ್ ಕಾಲೇಜು ಹೋಗೋಕೆ ನಾನು ಬಿಡುವುದಿಲ್ಲ . ಅಣ್ಣ-ತಮ್ಮಂದಿರ ದಬ್ಬಾಳಿಕೆಗೆ ಈ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಜನರು ಪಾಠ ಕಲಿಸುತ್ತಾರೆ ಎಂದವರು ಎಚ್ಚರಿಸಿದರು.
ವರದಕ್ಷಿಣೆ ಕಿರುಕುಳ: ಮದುವೆಯಾಗಿ ನಾಲ್ಕೇ ತಿಂಗಳಿಗೆ ಮಸಣ ಸೇರಿದ ಯುವತಿ!
ಕೂಪನ್ ಹಂಚಿ ಅಧಿಕಾರ ಹಿಡಿದ ಸರ್ಕಾರ ವಜಾ ಮಾಡಿ: ಜನರಿಗೆ ಆಸೆ, ಆಮಿಷ ಒಡ್ಡಿ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾವನ್ನು ವಜಾ ಮಾಡಲು ಕೇಂದ್ರ ಚುನಾವಣಾ ಆಯೋಗ ಸೂಕ್ತ ಕ್ರಮ ಜರುಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬಂದಿದೆ.
ಜನರಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರೇ ಗ್ಯಾರಂಟಿ ಕೂಪನ್‌ಗಳ ಮೇಲೆ ಸಹಿ ಮಾಡಿ ಮನೆಮನೆಗೂ ಹಂಚಿದ್ದಾರೆ. ಈ ಕೂಪನ್‌ಗಳ ಬಗ್ಗೆ ಆಯೋಗ ತನಿಖೆ ನಡೆಸಿ, ರಾಜ್ಯದ 135 ಶಾಸಕರ ಸದಸ್ಯತ್ವ ರದ್ದುಗೊಳಿಸುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗವನ್ನು ಒತ್ತಾಯಿಸಿದ ಅವರು, ಕಳೆದ ವಿಧಾನಸಭೆ ಚುನಾವಣೆ ನಡೆದಿದ್ದೇ ಕುಕ್ಕರ್, ಮಿಕ್ಸಿ, ತವಾಗಳ ಮೇಲೆ. ಅವುಗಳಿಂದಲೇ ಕಾಂಗ್ರೆಸ್ ಚುನಾವಣೆ ಗೆದ್ದಿದೆ. ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಹೇಳಿದರು.
ನನ್ನ ಅವಧಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ಕೊಟ್ಟಿದ್ದೆ: ಎಚ್.ಡಿ.ಕುಮಾರಸ್ವಾಮಿ
ಚನ್ನಪಟ್ಟಣದ ಜನ ಮರಳಾಗಲಿಲ್ಲ: ಇಂತಹ ಆಮಿಷಗಳಿಗೆ ರಾಜ್ಯದ ಜನತೆಗೆ ಮರುಳಾಗಬೇಡಿ ಅಂದಿದ್ದೆ. ನಮ್ಮ ಚನ್ನಪಟ್ಟಣದ ಜನ ಇಂತಹ ಆಮಿಷಗಳಿಗೆ ಮರುಳು ಆಗಲಿಲ್ಲ. ಆದರೆ, ರಾಮನಗರದಲ್ಲಿ ಅದೆಲ್ಲಾ ನಡೆಯಿತು. ಅಲ್ಲಿ ಗಿಫ್ಟ್ ಕೂಪನ್‌ಗಳನ್ನು ಹಂಚಿಕೆ ಮಾಡಲಾಯಿತು. ಚುನಾವಣಾ ಆಯೋಗ ಸರಿಯಾಗಿ ತನಿಖೆ ಮಾಡಿದರೆ, ಸತ್ಯ ಹೊರಬರಲಿದ್ದು, ಈ ಸರ್ಕಾರ ವಜಾ ಮಾಡಬೇಕು ಎಂದರು ಆಗ್ರಹಿಸಿದರು. ಈವರೆಗೂ ರಾಜ್ಯದಲ್ಲಿ ಇಂತಹ ಅಕ್ರಮ ಸರ್ಕಾರ ಬಂದಿಲ್ಲ. ಪ್ರಜಾಪ್ರಭುತ್ವದ ದಾರಿಯಲ್ಲಿ ಈ ಸರ್ಕಾರ ಅಧಿಕಾರಕ್ಕೆ ಬಂದಿಲ್ಲ. ಚುನಾವಣಾ ಆಯೋಗ ಸರಿಯಾದ ರೀತಿ ತೀರ್ಮಾನ ಮಾಡಬೇಕು. ಈ ಸರ್ಕಾರವನ್ನು ವಜಾ ಮಾಡಬೇಕು ಎಂದ ಅವರು, ಕೇಂದ್ರ ಸರ್ಕಾರ ಗಿಫ್ಟ್ ಕೂಪನ್ ಹಂಚಿಕೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯ ಮಾಡಿದರು.