Asianet Suvarna News Asianet Suvarna News

ನನ್ನ ಬಗ್ಗೆ ಮಾತನಾಡಿದ್ರೆ ಹುಷಾರ್‌: ಸಚಿವ ಅಶ್ವತ್ಥನಾರಾಯಣಗೆ ಎಚ್‌ಡಿಕೆ ಎಚ್ಚರಿಕೆ

*  ಪ್ರಾಧ್ಯಾಪಕರ ನೇಮಕದಲ್ಲಿ 450 ಕೋಟಿ ಅಕ್ರಮ
*  ನನ್ನಲ್ಲಿರುವ ದಾಖಲೆಗಳು ಸಚಿವ ಅಶ್ವತ್ಥ್‌ ನಾರಾಯಣ ಬಳಿಯೂ ಇಲ್ಲ
*  ತಾಕತ್ತಿದ್ದರೆ ಅಶ್ವತ್ಥ್‌ ನನ್ನ ವಿರುದ್ಧದ ದಾಖಲೆ ಬಿಡುಗಡೆ ಮಾಡಲಿ 

Former CM HD Kumaraswamy Slams on Minister CN Ashwath Narayan grg
Author
Bengaluru, First Published May 12, 2022, 6:13 AM IST

ಬೆಂಗಳೂರು(ಮೇ.12):  ‘ಪ್ರಾಧ್ಯಾಪಕರ ನೇಮಕಾತಿಯಲ್ಲಿ 450 ಕೋಟಿ ರು. ಅಕ್ರಮವಾಗಿದೆ(Professor Recruitment Scam). ನೀವು ನನ್ನ ಬಗ್ಗೆ ಮಾತನಾಡಿದರೆ ಹುಷಾರ್‌. ನನ್ನ ಬಳಿ ಇರುವ ದಾಖಲೆಗಳು ನಿಮ್ಮ ಬಳಿಯೂ ಇಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ(HD Kumaraswamy) ಅವರು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ(CN Ashwath Narayan) ಅವರಿಗೆ ಎಚ್ಚರಿಕೆ ನೀಡಿದ್ದಾರೆ.
ಅಲ್ಲದೆ, ನಿಮಗೆ ತಾಕತ್ತು ಇದ್ದರೆ ನನ್ನ ವಿರುದ್ಧದ ದಾಖಲೆ ಬಿಡುಗಡೆ ಮಾಡಿ ಎಂದೂ ಅವರು ನೇರ ಸವಾಲು ಹಾಕಿದ್ದಾರೆ.

ಬುಧವಾರ ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಜನತಾ ಜಲಧಾರೆ(Janata Jaladhare) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ವಿರುದ್ಧ ಏನೇ ದಾಖಲೆಗಳಿದ್ದರೂ ಅವುಗಳನ್ನು ಬಿಡುಗಡೆ ಮಾಡಲಿ. ನಾನು ಅವರ ರೀತಿ ಲೂಟಿ ಹೊಡೆದಿಲ್ಲ. ಲೂಟಿ ಮಾಡುತ್ತಿರುವವರು ಅವರು ಎಂದು ಏರಿದ ಧ್ವನಿಯಲ್ಲಿ ಹೇಳಿದರು.

ಡಿಕೆ ಶಿವಕುಮಾರ್ ಜೈಲು ಹಕ್ಕಿ ಎಂದ ಅಶ್ವತ್ಥ್ ನಾರಾಯಣ!

ಧರ್ಮದ ಹೆಸರಲ್ಲಿ ಜನರನ್ನು ದಾರಿ ತಪ್ಪಿಸಲಾಗುತ್ತಿದೆ. ನಿಮಗೆ ಧರ್ಮ(Religion) ಬೇಕಾ? ಜೀವನ ಬೇಕಾ? ಧರ್ಮವನ್ನು ಮನೆಯಲ್ಲಿಟ್ಟುಕೊಳ್ಳೋಣ. ಬೀದಿಯಲ್ಲಿ ರಕ್ತದೋಕುಳಿ ಹರಿಸುವುದು ಬೇಡ ಎಂದು ಮನವಿ ಮಾಡಿದ ಅವರು, ಶಾಲಾ ಮಕ್ಕಳು ಅನುಭವಿಸುತ್ತಿರುವ ಹಿಂಸೆಯನ್ನು ಚಾನಲ್‌ನಲ್ಲಿ ಗಮನಿಸಿದ್ದೇನೆ. ಮಹಾಲಕ್ಷ್ಮೇ ಲೇಔಟ್‌ನಲ್ಲಿ ಖಾಸಗಿ ಶಾಲೆಯ ಅವ್ಯವಸ್ಥೆಯನ್ನು ಬಹಿರಂಗ ಮಾಡಲಾಗಿದೆ. ಹಲವು ಶಾಲೆಯಲ್ಲಿ ಇಂತಹ ವ್ಯವಸ್ಥೆ ಇದೆ. ಇಂತಹ ಸಮಸ್ಯೆಗಳನ್ನು ಪರಿಹಾರ ಮಾಡುವ ನಿಟ್ಟಿನಲ್ಲಿ ನಾವು ಹೆಜ್ಜೆ ಇಡಬೇಕೇ ಹೊರತು ಸಮಾಜವನ್ನು ಒಡೆಯಲು ಅಲ್ಲ. ಶಿಕ್ಷಣ ಕ್ಷೇತ್ರದ ಸುಧಾರಣೆಯ ಬಗ್ಗೆ ಕಾರ್ಯಕ್ರಮ ರೂಪಿಸಿದ್ದೇನೆ. ತಕ್ಷಣ ಆ ಶಾಲೆಯ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಧಿಯಲ್ಲಿ ನಕಲಿ ದಾಖಲಾತಿ ನೀಡಿ ಪೊಲೀಸ್‌ ಅಧಿಕಾರಿ ಕೆಂಪಯ್ಯ ಆಯಕಟ್ಟಿನ ಅಧಿಕಾರ ಪಡೆದಿದ್ದರು. ಅಂತಹವರಿಗೆ ಪೊಲೀಸ್‌(Police) ಇಲಾಖೆಯ ಜವಾಬ್ದಾರಿ ನೀಡಲಾಗಿತ್ತು. ಕೆಂಪಯ್ಯಗೆ ನೋಟಿಸ್‌ ನೀಡಿದ ಎರಡು ದಿನಕ್ಕೆ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ. ಇದರಲ್ಲಿ ಕಾಂಗ್ರೆಸ್‌-ಬಿಜೆಪಿ ಶಾಮೀಲಾಗಿವೆ. ಇದರಲ್ಲಿ ಯಾರು ಎ ಟೀಂ ಮತ್ತು ಯಾರು ಬಿ ಟೀಂ ಎಂಬುದು ಗೊತ್ತಾಗುತ್ತದೆ. ಸಿದ್ದರಾಮಯ್ಯ ಅವರು ದಲಿತರು, ಹಿಂದುಳಿದವರ ಬಗ್ಗೆ ಮಾತನಾಡುತ್ತಾರೆ. ಆದರೆ, ಅವರಿಗೆ ಸಿಗಬೇಕಾದ ಸೌಲಭ್ಯದಲ್ಲಿ ಅನ್ಯಾಯವಾದರೆ ಅಧಿಕಾರಿಯನ್ನೇ ವರ್ಗಾವಣೆ ಮಾಡಿಸಲಾಗುತ್ತದೆ. ಈ ಸರ್ಕಾರದಲ್ಲಿ ದಲಿತರಿಗೆ ಮತ್ತು ದಲಿತ ಅಧಿಕಾರಿಗಳಿಗೆ ಎಲ್ಲಿದೆ ರಕ್ಷಣೆ? ಎಂದು ಪ್ರಶ್ನಿಸಿದರು.
 

Follow Us:
Download App:
  • android
  • ios