Asianet Suvarna News Asianet Suvarna News

ಯಾರೋ ಕಟ್ಟಿದ ಗೂಡಲ್ಲಿ ಕೂತು ಸಿದ್ದು ಅಧಿಕಾರ: ಕುಮಾರಸ್ವಾಮಿ

ಯಾರೋ ಕಟ್ಟಿದ ಗೂಡಲ್ಲಿ ಕೂತು ಸಿದ್ದು ಅಧಿಕಾರ, ಪಂಚರತ್ನ ರಥಯಾತ್ರೆಯಲ್ಲಿ ಕಾಂಗ್ರೆಸ್‌, ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಕಿಡಿ

Former CM HD Kumaraswamy Slams Siddaramaiah grg
Author
First Published Nov 25, 2022, 12:30 PM IST

ಚಿಕ್ಕಬಳ್ಳಾಪುರ/ಚಿಂತಾಮಣಿ(ನ.25):  ಕಾಂಗ್ರೆಸ್‌ ಪಕ್ಷವು ಬಿಜೆಪಿಯ ಬಿ ಟೀಂ ಆಗಿ ಕಾರ್ಯನಿರ್ವಹಿಸುತ್ತಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಯಾರೋ ಕಟ್ಟಿದ ಗೂಡಲ್ಲಿ ಕೂತು ಅಧಿಕಾರ ಚಲಾಯಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಪಂಚರತ್ನ ರಥಯಾತ್ರೆಯ ಏಳನೇ ದಿನವಾದ ಗುರುವಾರ ಚಿಂತಾಮಣಿ ತಾಲೂಕಿನ ಕೋನಪಲ್ಲಿ ಹಾಗೂ ಶಿಡ್ಲಘಟ್ಟಪಟ್ಟಣದಲ್ಲಿ ಸಮಾವೇಶ ಹಾಗೂ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್‌ ಹಾಗೂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕರು ಜೆಡಿಎಸ್‌ ಪಕ್ಷವನ್ನು ಬಿಜೆಪಿ ಬಿ ಟೀಮ್‌ ಎಂದು ಕರೆದರು. ಆದರೆ ಜೆಡಿಎಸ್‌ ಬಿಜೆಪಿ ಬಿ ಟೀಮ್‌ ಅಲ್ಲ, ಕಾಂಗ್ರೆಸ್‌ ಪಕ್ಷವೇ ಬಿಜೆಪಿಯ ಬಿ ಟೀಮ್‌ ಆಗಿ ಕಾರ್ಯನಿರ್ವಹಿಸುತ್ತಿದೆ. ಇದನ್ನು ಮುಸ್ಲಿಮರು ಅರ್ಥ ಮಾಡಿಕೊಳ್ಳಬೇಕು. ರಾಜ್ಯದಲ್ಲಿ ಎಲ್ಲ ಸಮಸ್ಯೆ ಬಗೆಹರಿಸಬೇಕು ಅನ್ನುವುದೇ ನಮ್ಮ ಪಕ್ಷದ ಉದ್ದೇಶ. ನನ್ನದು ಭಾಗ್ಯಗಳ ಕಾರ್ಯಕ್ರಮ ಅಲ್ಲ ಎಂದರು.

ಸಾಲ ಮನ್ನಾ ಮಾಡಿದ ಎಚ್ಡಿಕೆಗೆ 25,000 ರು. ಚೆಕ್‌ ಕೊಟ್ಟ ರೈತ..!

2018ರಲ್ಲಿ ರೈತರ ಸಾಲ ಮನ್ನಾ ಮಾಡುವ ಕೆಲಸ ಮಾಡಿದೆ. ಅಧಿಕಾರದಲ್ಲಿದ್ದ ಕೇವಲ 14 ತಿಂಗಳಲ್ಲಿ ಈ ಕಾರ್ಯ ಮಾಡಿದ್ದೇನೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಆರ್ಥಿಕ ಇಲಾಖೆ ನನ್ನ ಬಳಿಯೇ ಇರಬೇಕೆಂದು ಒತ್ತಡ ಹಾಕಿದ್ದೆ. ಸಾಲ ಮನ್ನಾ ಮಾಡಬೇಕು ಅಂತಲೇ ಆ ಖಾತೆ ನನ್ನ ಬಳಿ ಇಟ್ಟುಕೊಂಡೆ. ಇಲ್ಲದಿದ್ದರೆ ಸಾಲ ಮನ್ನಾ ಮಾಡಲೂ ಕಾಂಗ್ರೆಸ್‌ ಬಿಡುತ್ತಿರಲಿಲ್ಲ ಎಂದ ಅವರು, ರಾಜ್ಯಾದ್ಯಂತ ಪಂಚರತ್ನ ಯೋಜನೆ ನಾಡಿನ ಜನತೆಗೆ ತಲುಪಿಸಬೇಕು ಎಂಬುದು ನನ್ನ ಉದ್ದೇಶ. ಅದಕ್ಕಾಗಿ ನನ್ನ ಆರೋಗ್ಯವನ್ನೂ ಲೆಕ್ಕಿಸದೆ ಹೋರಾಟ ಮಾಡುತ್ತಿದ್ದೇನೆ. ಈ ಭಾಗದ ಜನತೆಗೆ ಶುದ್ಧ ನೀರು ತರುವ ಸಂಕಲ್ಪ ಮಾಡಿದ್ದೇನೆ. ಎತ್ತಿನಹೊಳೆ ಯೋಜನೆ ಲೂಟಿ ಹೊಡೆಯುವ ಯೋಜನೆæ ಎಂದು ಆರೋಪಿಸಿದರು.

JDS Pancharatna Rathayatra: ಕೊಳೆಚೆ ನೀರು ತಂದವರಿಗೆ ತಕ್ಕಪಾಠ ಕಲಿಸಿ: ಎಚ್‌ಡಿಕೆ

ಮಗುವಿಗೆ ನಾಮಕರಣ

ಚಿಂತಾಮಣಿ ತಾಲೂಕಿನ ಕೋನಪಲ್ಲಿಯಲ್ಲಿ ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಹೂಡಿದ್ದ ವೇಳೆ ತಾಲೂಕಿನ ರಾಚಾಪುರ ಗ್ರಾಮದ ಸುರೇಶ್‌ ಮತ್ತು ರೂಪಾ ದಂಪತಿ ಆಗಮಿಸಿದ್ದರು. ಈ ವೇಳೆ ಕುಮಾರಸ್ವಾಮಿ ಆ ಮಗುವಿಗೆ ರಿಶಿಕ್‌ ಎಂದು ನಾಮಕರಣ ಮಾಡಿದರು.

ಶಿಡ್ಲಘಟ್ಟದಲ್ಲಿ ಅದ್ಧೂರಿ ಸ್ವಾಗತ

ಚಿಕ್ಕಬಳ್ಳಾಪುರ: ಮುಂಬರುವ ವಿಧಾನಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಆಯೋಜಿಸಿರುವ ಪಂಚರತ್ನ ರಥಯಾತ್ರೆಗೆ ಶಿಡ್ಲಘಟ್ಟದಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಚಿಂತಾಮಣಿ ತಾಲೂಕಿನಿಂದ ಶಿಡ್ಲಘಟ್ಟತಾಲೂಕಿನ ವೈ.ಹುಣಿಸೇನಹಳ್ಳಿ ಪ್ರವೇಶಿಸುತ್ತಿದ್ದಂತೆ 10 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಸೇರಿದ್ದ ಪಕ್ಷದ ಕಾರ್ಯಕರ್ತರು, ಮುಖಂಡರು ಕುಮಾರಸ್ವಾಮಿ ಪರ ಹರ್ಷೋದ್ಘಾರ ಮೊಳಗಿಸಿ ರಥಯಾತ್ರೆಯನ್ನು ಸಂಭ್ರಮದಿಂದ ಬರಮಾಡಿಕೊಂಡರು. ಅಲ್ಲಿಂದ ಚಿಂತಾಮಣಿ-ಚಿಕ್ಕಬಳ್ಳಾಪುರ ಬೈಪಾಸ್‌ ಮೂಲಕ ಶಿಡ್ಲಘಟ್ಟವರೆಗೂ ಮೆರವಣಿಗೆ ಮೂಲಕ ಕೊಂಡೊಯ್ಯಲಾಯಿತು. ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಪಕ್ಷದ ಯುವ ನಾಯಕರಾದ ಸಂಸದ ಪ್ರಜ್ವಲ್‌ ರೇವಣ್ಣ, ನಿಖಿಲ್‌ ಕುಮಾರಸ್ವಾಮಿ ಮತ್ತಿತರರು ಹಾಜರಿದ್ದರು. ನಂತರ ಸಾದಲಿ ಗ್ರಾಮದಲ್ಲಿ ಕುಮಾರಸ್ವಾಮಿ ವಾಸ್ತವ್ಯ ಮಾಡಿದರು.
 

Follow Us:
Download App:
  • android
  • ios