ಅಭಿವೃದ್ಧಿಗಾಗಿ ಅಮಿತ್‌ ಶಾ ಮಂಡ್ಯಕ್ಕೆ ಬರುತ್ತಿಲ್ಲ: ಕುಮಾರಸ್ವಾಮಿ

ಮಂಡ್ಯಕ್ಕೆ ಅಮಿತ್‌ ಶಾ ಬರುತ್ತಿರುವುದರಲ್ಲಿ ಅಚ್ಚರಿ ಇಲ್ಲ. ಇನ್ನೂ ಮೂರು ತಿಂಗಳು ಕರ್ನಾಟಕಕ್ಕೆ ಪ್ರಧಾನಿ ಮೋದಿ ಸೇರಿ ಎಲ್ಲರೂ ಬರಬಹುದು. ಈಗಾಗಲೇ ಕೇಂದ್ರ ಸರ್ಕಾರದ ಮಂತ್ರಿಗಳ ದಂಡು ಬರುತ್ತಲೇ ಇದೆ. ಅಮಿತ್‌ ಶಾ, ಮೋದಿ ಚುನಾವಣೆಗಾಗಿ ಬರುತ್ತಿದ್ದಾರೆಯೇ ವಿನಃ ಕರ್ನಾಟಕದ ಅಭಿವೃದ್ಧಿಗೆ ಬರುತ್ತಿಲ್ಲ ಎಂದು ಕಿಡಿಕಾರಿದ ಎಚ್‌ಡಿಕೆ 

Former CM HD Kumaraswamy Slams Union Home Minister Amit Shah grg

ಮಂಡ್ಯ(ಡಿ25): ರಾಜ್ಯದ ಅಭಿವೃದ್ಧಿಗಾಗಿ ಅಮಿತ್‌ ಶಾ ಮಂಡ್ಯಕ್ಕೆ ಬರುತ್ತಿಲ್ಲ. ಚುನಾವಣಾ ಉದ್ದೇಶವನ್ನಿಟ್ಟುಕೊಂಡು ಬರುತ್ತಿದ್ದಾರೆ. ರಾಜ್ಯದ ಜನರ ಸಮಸ್ಯೆ ಬಗೆಹರಿಸಲು ಅವರಾರ‍ಯರೂ ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಟೀಕಿಸಿದರು. ಶ್ರೀರಂಗಪಟ್ಟಣ ತಾಲೂಕು ಕೆಆರ್‌ಎಸ್‌ನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಂಡ್ಯಕ್ಕೆ ಅಮಿತ್‌ ಶಾ ಬರುತ್ತಿರುವುದರಲ್ಲಿ ಅಚ್ಚರಿ ಇಲ್ಲ. ಇನ್ನೂ ಮೂರು ತಿಂಗಳು ಕರ್ನಾಟಕಕ್ಕೆ ಪ್ರಧಾನಿ ಮೋದಿ ಸೇರಿ ಎಲ್ಲರೂ ಬರಬಹುದು. ಈಗಾಗಲೇ ಕೇಂದ್ರ ಸರ್ಕಾರದ ಮಂತ್ರಿಗಳ ದಂಡು ಬರುತ್ತಲೇ ಇದೆ. ಅಮಿತ್‌ ಶಾ, ಮೋದಿ ಚುನಾವಣೆಗಾಗಿ ಬರುತ್ತಿದ್ದಾರೆಯೇ ವಿನಃ ಕರ್ನಾಟಕದ ಅಭಿವೃದ್ಧಿಗೆ ಬರುತ್ತಿಲ್ಲ ಎಂದು ಕಿಡಿಕಾರಿದರು.

ಕರ್ನಾಟಕ ಜಲ, ಗಡಿ, ಭಾಷೆ ಹಾಗೂ ಜನರ ಸಮಸ್ಯೆ ಬಗೆಹರಿಸಲು ಅವರು ಯಾವತ್ತಿಗೂ ಬರಲ್ಲ. ಚುನಾವಣೆಯಲ್ಲಿ ಮತ ಕೇಳಲು ಮಾತ್ರ ಬರುತ್ತಾರೆ. ಇವೆಲ್ಲವೂ ಜನರಿಗೆ ಗೊತ್ತಿದೆ. ಅವರು ಏನೇ ಮಾಡಿದರೂ ಈ ಭಾಗದಲ್ಲಿ ಅವರ ಆಟ ಏನೂ ನಡೆಯಲ್ಲ ಎಂದು ವಿಶ್ವಾಸದಿಂದ ನುಡಿದರು.

MANDYA: ಹಳೇ ಮೈಸೂರು ಭಾಗದ ಮೇಲೆ ಕಣ್ಣಿಟ್ಟಿರುವ ಕೇಸರಿ ಪಡೆ: ಸಕ್ಕರೆನಾಡಿಗೆ ಅಮಿತ್‌ ಶಾ

ಪಂಚರತ್ನ ಯಾತ್ರೆಗೆ ಸ್ವಾಗತ: 

ಜೆಡಿಎಸ್‌ ಪಂಚರತ್ನ ರಥಯಾತ್ರೆ ಶನಿವಾರ ಶ್ರೀರಂಗಪಟ್ಟಣ ಹಾಗೂ ಪಾಂಡವಪುರದಲ್ಲಿ ಸಂಚರಿಸಿತು. ಈ ವೇಳೆ ಕುಮಾರಸ್ವಾಮಿ ಅವರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ಕೆಆರ್‌ಎಸ್‌ ಬೃಂದಾವನದ ಬಳಿ ಪಂಚರತ್ನ ರಥಯಾತ್ರೆ ಆಗಮಿಸಿದ ವೇಳೆ ಕಾಪ್ಟರ್‌ ಮೂಲಕ ಹೂ ಮಳೆ ಸುರಿಸಲಾಯಿತು. ಜೆಸಿಬಿ ಮೂಲಕ ಕಾರ್ಯಕರ್ತರು ಕುಮಾರಸ್ವಾಮಿ ಅವರ ಮೇಲೆ ಪುಷ್ಪವೃಷ್ಟಿಗರೆದರು. ಅದೇ ರೀತಿ ಕೆ.ಬೆಟ್ಟಹಳ್ಳಿ ಗ್ರಾಮಸ್ಥರು ಬೃಹತ್‌ ಬತ್ತದ ತೆನೆ ಹಾರ ಹಾಕಿ ಮೇಲುಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಅದ್ಧೂರಿ ಸ್ವಾಗತ ನೀಡಿದರು. ಅಲ್ಲಿಂದ ಕೆಆರ್‌ಎಸ್‌ ಬೃಂದಾವನದೊಳಗೆ ಆಗಮಿಸಿದ ಕುಮಾರಸ್ವಾಮಿ ಅವರು ಶಾಸಕ ಸಿ.ಎಸ್‌.ಪುಟ್ಟರಾಜು ಅವರೊಂದಿಗೆ ಕಾವೇರಿ ಪ್ರತಿಮೆ ಬಳಿ ತೆರಳಿ ಪೂಜೆ ಸಲ್ಲಿಸಿದರು. ನಂತರ ಯಾತ್ರೆ ಪಾಂಡವಪುರ ಪ್ರವೇಶಿಸುತ್ತಿದ್ದಂತೆ ಕುಮಾರಸ್ವಾಮಿ ಅವರಿಗೆ ಭಾರೀ ಗಾತ್ರದ ಸೇಬು, ಕಬ್ಬಿನ ಜೊಲ್ಲೆ, ಮೂಸುಂಬಿ ಹೀಗೆ ಥರಾವರಿ ಹಾರಗಳನ್ನು ಹಾಕಿ ಸ್ವಾಗತ ನೀಡಲಾಯಿತು.

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿರುವ ವಿಚಾರವಾಗಿ ಪ್ರಶ್ನಿಸಿದಾಗ, ಬೇರೆ ಪಕ್ಷದ ನಾಯಕರು ಅವರ ಪಕ್ಷಕ್ಕೆ ಮತ ಹಾಕಿ ಎಂದು ಜನರನ್ನು ಕೇಳುವುದರಲ್ಲಿ ತಪ್ಪಿಲ್ಲ. ಆದರೆ, ನಾನೇ ಮುಖ್ಯಮಂತ್ರಿಯಾಗುತ್ತೇನೆ ಎನ್ನುವುದರಲ್ಲಿ ಅರ್ಥವಿಲ್ಲ. ರಾಜ್ಯದಲ್ಲಿ ಬಹಳ ಜನ ಮುಖ್ಯಮಂತ್ರಿಯಾಗುತ್ತೇನೆ ಎಂದು ಆಸೆ ಪಟ್ಟಿದ್ದಾರೆ. ಯಾರು ಮುಖ್ಯಮಂತ್ರಿ ಆಗಬೇಕೆಂದು ನಿರ್ಧಾರ ಮಾಡುವವರು ಜನ. ದೇವರಿಚ್ಛೆ ಹಾಗೂ ಜನರ ತೀರ್ಮಾನ ಏನಿದೆಯೋ ಕಾದುನೋಡಬೇಕಲ್ಲವೇ? ಎಂದರು.

Latest Videos
Follow Us:
Download App:
  • android
  • ios