ಪಂಚರತ್ನ ಯಾತ್ರೆ ಸುನಾಮಿ ತಡೆಯಲು ಅಮಿತ್ ಶಾ ಕರೆಸ್ತಿದ್ದಾರೆ: ಎಚ್.ಡಿ.ಕುಮಾರಸ್ವಾಮಿ
ರಾಜ್ಯದಲ್ಲಿ ಪಂಚರತ್ನ ಯಾತ್ರೆಗೆ ಅಭೂತಪೂರ್ವ ಬೆಂಬಲ ದೊರಕಿದ್ದು, ಪಂಚರತ್ನ ರಥಯಾತ್ರೆಯ ಸುನಾಮಿ ಅಲೆ ತಡೆಯಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿಯವರು ಕರೆಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.
ತುಮಕೂರು (ಡಿ.30): ರಾಜ್ಯದಲ್ಲಿ ಪಂಚರತ್ನಯಾತ್ರೆಗೆ ಅಭೂತಪೂರ್ವ ಬೆಂಬಲ ದೊರಕಿದ್ದು, ಪಂಚರತ್ನ ರಥಯಾತ್ರೆಯ ಸುನಾಮಿ ಅಲೆ ತಡೆಯಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿಯವರು ಕರೆಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ. ಪಂಚರತ್ನ ರಥಯಾತ್ರೆಯಲ್ಲಿ ಮಾತನಾಡಿ, ಶಾ ಅವರು ಹೆಲಿಕಾಪ್ಟರ್‌ನಲ್ಲಿ ಬೇಕಾದರೂ ಬರಲಿ, ರಾಕೆಟ್‌ನಲ್ಲಿ ಬೇಕಾದರೂ ಬರಲಿ ನನಗೇನು?. ರೈತರಿಗೆ ಹೆದರಿ ಅವರು ಕರ್ನಾಟಕಕ್ಕೆ ಬರುತ್ತಿದ್ದಾರೆ. ಬಿಜೆಪಿಯವರು ದೇಶವನ್ನು ಕಾಂಗ್ರೆಸ್ ಮುಕ್ತ ಮಾಡ್ತೀವಿ, ಮಂಡ್ಯವನ್ನು ಜೆಡಿಎಸ್ ಮುಕ್ತ ಮಾಡ್ತೀವಿ ಎಂದು ಹೇಳುತ್ತಿದ್ದಾರೆ. ಮುಕ್ತ ಮಾಡುವುದಕ್ಕೆ ಇವರೇನು ದೊಡ್ಡ ಬ್ರಹ್ಮನಾ ಎಂದು ಪ್ರಶ್ನಿಸಿದರು.
15 ಸಾವಿರ ಕಾಯಿನ್ ಬಳಸಿ ವಿಶೇಷ ಹಾರ: ಯಾತ್ರೆ ಗುರುವಾರ ತುಮಕೂರು ಗ್ರಾಮಾಂತರಕ್ಕೆ ಬಂದಾಗ ಪ್ಯಾರಾಗ್ಲೈಡಿಂಗ್ ಮೂಲಕ ಅವರಿಗೆ ಸ್ವಾಗತ ಕೋರಲಾಯಿತು. 5 ಸಾವಿರ ಬೈಕ್, 500 ಕಾರು, 500 ಆಟೋಗಳು ಪಾಲ್ಗೊಂಡ ಬೃಹತ್ ರಾರಯಲಿಯಲ್ಲಿ ಅವರನ್ನು ಕರೆದೊಯ್ಯಲಾಯಿತು. ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಜಾಲತಾಣದ ವಿಭಾಗದಿಂದ 1 ರು.ಮುಖಬೆಲೆಯ 15 ಸಾವಿರ ಕಾಯಿನ್ ಹಾರ ಹಾಕಿ ಸ್ವಾಗತ ಕೋರಲಾಯಿತು. ಬಳಿಕ, ಹೆಬ್ಬೂರಿನಲ್ಲಿ ಕ್ರೇನ್ ಬಳಸಿ ಮಣ್ಣಿನ ಹಾರ, ನೇಗಿಲ ಹಾರ ಹಾಕಿ ಸ್ವಾಗತಿಸಲಾಯಿತು.
Mandya: ಪಂಚರತ್ನ ರಥಯಾತ್ರೆಯಲ್ಲಿ ಹೂ ಮಳೆ ಸುರಿಸಿದ ಹೆಲಿಕಾಪ್ಟರ್
ನಂತರ, ಹೊನ್ನುಡಿಕೆ ಹ್ಯಾಂಡ್ ಪೋಸ್ವ್ ಮಾರ್ಗವಾಗಿ ಗೂಳೂರಿಗೆ ಬಂದ ಕುಮಾರಸ್ವಾಮಿ, ಗೂಳೂರು ಗಣೇಶ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಅಲ್ಲಿ ಅವರಿಗೆ ಕರ್ಜಿಕಾಯಿ ಹಾರ, ಎಲ್‌ಇಡಿ ಹಾರ ಹಾಕಿ ಗೌರವ ಸಮರ್ಪಣೆ ಮಾಡಲಾಯಿತು. ಬೇವಿನಹಳ್ಳಿ ಗೇಟ್‌ನಲ್ಲಿ ಕಂಬಳಿಯ ಉಣ್ಣೆಯ ಹಾರ, ತೆಂಗಿನಗರಿಯ ಟೋಪಿ ಹಾಕಿ, ತೆಂಗಿನಕಾಯಿ ಕಳಸ, ಹೂಗುಚ್ಛ ನೀಡಿ ಸ್ವಾಗತಿಸಲಾಯಿತು.
ಮಹದಾಯಿಗೆ ಒಪ್ಪಿಗೆ ಕನ್ನಡಿಗರಿಗೆ ಸಂದ ಜಯ: ಕಳಸಾ-ಬಂಡೂರಿ ವಿಸ್ತೃತ ಯೋಜನೆಗೆ ಕೇಂದ್ರ ಜಲ ಆಯೋಗ ಒಪ್ಪಿಗೆ ನೀಡಿರುವುದು ಸ್ವಾಗತಾರ್ಹ. ಇದು ಸಮಸ್ತ ಕನ್ನಡಿಗರ ಹೋರಾಟಕ್ಕೆ ದೊರೆತ ಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಗುರುವಾರ ಟ್ವೀಟ್ ಮಾಡಿರುವ ಅವರು, ರಾಜಕೀಯಕ್ಕೆ ಅತೀತವಾಗಿ ರೈತರು, ಕನ್ನಡಪರ ಹೋರಾಟಗಾರರು, ಕಾರ್ಮಿಕರು ಸೇರಿ ಎಲ್ಲರೂ ನಡೆಸಿದ ಸಮಷ್ಟಿಹೋರಾಟಕ್ಕೆ ಸಂದ ಜಯವಿದು. ಜೆಡಿಎಸ್ ಪಕ್ಷ ಕನ್ನಡಿಗರ ಜತೆಗೂಡಿ ಹೋರಾಟ ನಡೆಸಿದೆ.
ಒಕ್ಕಲಿಗ ಮೀಸಲಾತಿ ಹೋರಾಟಕ್ಕೆ ಸದಾ ಬೆಂಬಲ: ಎಚ್.ಡಿ.ಕುಮಾರಸ್ವಾಮಿ
ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರು ಸಂಸತ್ತಿನ ಒಳಗೆ-ಹೊರಗೆ ದೊಡ್ಡ ಸಂಘರ್ಷವನ್ನೇ ನಡೆಸಿದ್ದಾರೆ. ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದರು ಎಂದು ತಿಳಿಸಿದ್ದಾರೆ. ಕಳಸಾ-ಬಂಡೂರಿ ಯೋಜನೆಗೆ ಸದ್ಯಕ್ಕೆ ಜಲ ಆಯೋಗ ಒಪ್ಪಿಗೆ ನೀಡಿದೆ. ಆದರೆ, ಸರ್ವೋಚ್ಚ ನ್ಯಾಯಾಲಯದಲ್ಲಿ ವ್ಯಾಜ್ಯ ಬಾಕಿ ಇದೆ. ಪರಿಸರ ಇಲಾಖೆಯ ಅನುಮತಿ ಇನ್ನೂ ಸಿಕ್ಕಿಲ್ಲ. ಇದೆಲ್ಲವನ್ನೂ ತ್ವರಿತವಾಗಿ ಮುಗಿಸಿಕೊಂಡು ಕಾಮಗಾರಿ ಆರಂಭ ಮಾಡಬೇಕಿದೆ. ರಾಜ್ಯ ಸರ್ಕಾರ ಇನ್ನು ತಡ ಮಾಡುವುದು ಬೇಡ ಎಂದು ಟ್ವೀಟರ್‌ನಲ್ಲಿ ಹೇಳಿದ್ದಾರೆ.