ಮಂಡ್ಯ ಜಿಲ್ಲೆಯ ಸ್ಥಿತಿಗತಿಗಳನ್ನು ವಿಸ್ತ್ರತವಾಗಿ ಚರ್ಚೆ ನಡೆಸಿ, ಬಿಜೆಪಿ ಮೈತ್ರಿ ನಂತರದ ಜಿಲ್ಲೆಯಲ್ಲಿನ ರಾಜಕೀಯ ಪರಿಸ್ಥಿತಿ ಕುರಿತು ಅವರು ಅವಲೋಕಿಸಿದರು. ಅಭ್ಯರ್ಥಿ ಆಯ್ಕೆ ವಿಚಾರವಾಗಿ ಅಗತ್ಯ ಮಾಹಿತಿ ಸಂಗ್ರಹಿಸಿದರು. ಮೈತ್ರಿ ಅಭ್ಯರ್ಥಿಯನ್ನು ನಾವು ಗೆಲ್ಲಿಸಿಕೊಳ್ಳಬೇಕಾಗಿದ್ದು, ಹಿಂದಿನ ಘಟನೆಗಳಿಂದ ಪಾಠ ಕಲಿಯಬೇಕು ಹಾಗೂ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ 

ಬೆಂಗಳೂರು(ಮಾ.07): ಲೋಕಸಭಾ ಚುನಾವಣೆಗೆ ಪೂರ್ವ ತಯಾರಿ ನಡೆಸುತ್ತಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಳಿಕ ಇದೀಗ ಮಂಡ್ಯ ಲೋಕಸಭಾ ಕ್ಷೇತ್ರದ ಮುಖಂಡರ ಸಭೆ ನಡೆಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬುಧವಾರ ಸಂಜೆ ತಮ್ಮ ನಿವಾಸದಲ್ಲಿ ಮಂಡ್ಯ ಜಿಲ್ಲೆಯ ಮುಖಂಡರ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಆಯ್ಕೆ ಮಾಡುವುದಾಗಿ ಕುಮಾಸ್ವಾಮಿ ಅವರು ತಿಳಿಸಿದರು. 

ದೇವರ ಆಶೀರ್ವಾದವಿದ್ದರೆ ಮಂಡ್ಯದಲ್ಲಿ ಮನೆ ಕಟ್ಟುವೆ: ಸುಮಲತಾ ಅಂಬರೀಶ್

ಮಂಡ್ಯ ಜಿಲ್ಲೆಯ ಸ್ಥಿತಿಗತಿಗಳನ್ನು ವಿಸ್ತ್ರತವಾಗಿ ಚರ್ಚೆ ನಡೆಸಿ, ಬಿಜೆಪಿ ಮೈತ್ರಿ ನಂತರದ ಜಿಲ್ಲೆಯಲ್ಲಿನ ರಾಜಕೀಯ ಪರಿಸ್ಥಿತಿ ಕುರಿತು ಅವರು ಅವಲೋಕಿಸಿದರು. ಅಭ್ಯರ್ಥಿ ಆಯ್ಕೆ ವಿಚಾರವಾಗಿ ಅಗತ್ಯ ಮಾಹಿತಿ ಸಂಗ್ರಹಿಸಿದರು. ಮೈತ್ರಿ ಅಭ್ಯರ್ಥಿಯನ್ನು ನಾವು ಗೆಲ್ಲಿಸಿಕೊಳ್ಳಬೇಕಾಗಿದ್ದು, ಹಿಂದಿನ ಘಟನೆಗಳಿಂದ ಪಾಠ ಕಲಿಯಬೇಕು ಹಾಗೂ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ತಾಕೀತು ಮಾಡಿದರು.