ದೇಶದ ರಕ್ಷಣೆಗಾಗಿ ಮೋದಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಬಿಜೆಪಿ ಸೇರಿದ್ದೇನೆಂದ ಜಗದೀಶ್ ಶೆಟ್ಟರ್!
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ನವದೆಹಲಿಯಲ್ಲಿ ಮರಳಿ ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.
ನವದೆಹಲಿ (ಜ.25): ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ರಾಜಿನಾಮೆ ನಿಡಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ಕೇಂದ್ರ ಬಿಜೆಪಿ ನಾಯಕ ಭೂಪೇಂದ್ರ ಯಾದವ್ ರಿಂದ ಸದಸ್ಯತ್ಚದ ರಸೀದಿ ನೀಡಿ, ಬಿಜೆಪಿ ಶಾಲು ಹಾಗೂ ಹೂಗುಚ್ಛ ನೀಡಿ ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ಸ್ವಾಗತಿಸಲಾಯಿತು. ಈ ವೇಳೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತಿತರರು ಉಪಸ್ಥಿತರಿದ್ದರು.
ಘರ್ ವಾಪ್ಸಿ ಯಶಸ್ವಿ: ಅಮಿತ್ ಶಾ ಜಿತೆಗೆ ಮಾತುಕತೆ ಬಳಿಕ ಬಿಜೆಪಿ ಬುಟ್ಟಿಗೆ ಬಿದ್ದ ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿ ಹಾಗೂ ಪಕ್ಷ ಸಂಘಟನೆಯಲ್ಲಿ ಅಗಾಧ ಸೇವೆ ಮಾಡಿದ ವ್ಯಕ್ತಿಯಾಗಿದ್ದರು. ಹೀಗಾಗಿ, ಅವರನ್ನು ಪುನಃ ಬಿಜೆಪಿಗೆ ಸೇರಿಸಿಕೊಳ್ಳುವುದಕ್ಕೆ ನಮ್ಮ ಕಾರ್ಯಕರ್ತರ ಅಪೇಕ್ಷೆ ಇತ್ತು. ಆದ್ದರಿಂದ ನಾವು ಅವರನ್ನು ಹೈಕಮಾಂಡ್‌ನೊಂದಿಗೆ ಚರ್ಚೆ ಮಾಡಿ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಬಿಜೆಪಿ ಪಕ್ಷ ಸಂಘಟನೆ ಹಾಗೂ ರಾಜ್ಯದ 28 ಕ್ಷೇತ್ರಗಳಲ್ಲಿ ಕನಿಷ್ಠ 25 ಸ್ಥಾನ ಬಿಜೆಪಿ ಗೆಲ್ಲುವುದಕ್ಕೆ ಸಾಕಷ್ಟು ಶ್ರಮಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು.
ಬಿಜೆಪಿ ಪಕ್ಷಕ್ಕೆ ಮರಳಿದ ಬಗ್ಗೆ ಮಾತನಾಡಿದ ಜಗದೀಶ್ ಶೆಟ್ಟರ್ ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಮತ್ತೆ ಬಿಜೆಪಿಗೆ ಸೇರ್ಪಡೆ ಆಗರುವುದು ಸಂತೋಷದ ಸಂಗತಿಯಾಗಿದೆ. ಈಗ ನಾನು ಕಾಂಗ್ರೆಸ್ ಸದಸ್ಯತ್ವಕ್ಕೆ ಹಾಗೂ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ರಾಜಿನಾಮೆ ನೀಡುತ್ತಿದ್ದೇನೆ. ನಾನು ಈಗ ಕಾಂಗ್ರೆಸ್ ಪಕ್ಷದ ಎಂಎಲ್‌ಸಿ ಆಗಿದ್ದರಿಂದ ಕೂಡಲೇ ಆ ಸ್ಥಾನಕ್ಕೂ ರಾಜಿನಾಮೆ ನೀಡುತ್ತಿದ್ದೇನೆ. ಈ ಬಗ್ಗೆ ಸಭಾಪತಿ ಬಸವರಾಜ ಹೊರಟ್ಟಿ ಅವರೊಂದಿಗೆ ಫೋನಿನ ಮೂಲಕ ಕರೆ ಮಾಡಿ ಮಾಹಿತಿ ನೀಡಿದ್ದೇನೆ ಎಂದು ಹೇಳಿದರು.
ರಾಮಮಂದಿರದ ಮೇಲೆ ಹಸಿರು ಬಾವುಟ ಸ್ಟೇಟಸ್; ಆರೋಪಿ ಸದ್ದಾಂ ಹುಸೇನ್ ಬಂಧನ
ನಾನು ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದರಿಂದಲೂ ಲೋಕಸಭಾ ಚುನಾವಣೆ ಮುನ್ನೆಲೆಗೆ ಬಂದ ಇತ್ತೀಚಿನವರೆಗೂ 9 ತಿಂಗಳ ಅವಧಿಯಲ್ಲಿ ನಮ್ಮ ಕಾರ್ಯಕರ್ತರು, ಬಿಜೆಪಿ ನಾಯಕರು ಬಿಜೆಪಿ ಸೇರುತ್ತಾರೆ ಎಂಬ ಆಪೇಕ್ಷೆ ಇಟ್ಟುಕೊಂಡಿದ್ದರು. ಇನ್ನು ರಾಷ್ಟ್ರೀಯ ನಾಯಕರ ಆಪೇಕ್ಷೆ ಕೂಡ ಇತ್ತು. ಈ ಕುರಿತು ಕೇಂದ್ರ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚೆ ಮಾಡಿದಾಗ ಅವರು ಕೂಡ ಸಂತಸದಿಂದ ಸ್ವಾಗತ ಮಾಡಿ ಬಿಜೆಪಿ ಸೇರ್ಪಡೆಗೆ ಪ್ರೋತ್ಸಾಹಿಸಿದರು. ಈಗ ಬಿಜೆಪಿ ಗೆ ಸೇರಿದ್ದು ಸಂತೋಷ ಆಗಿದೆ. ಎಮ್ ಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಡಿಕೆಶಿ ಅವರಿಗೂ ಕಾಂಗ್ರೆಸ್ ಪಕ್ಷ ರಾಜೀನಾಮೆ ಕೊಟ್ಟಿದ್ದೇನೆ. ಇವತ್ತು ದೇಶದ ಮುಂದೆ ಸವಾಲಾಗಿರುವುದು ದೇಶದ ರಕ್ಷಣೆ ಮುಖ್ಯವಾಗಿದೆ. ಪ್ರಧಾನಿ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಹಾಗಾಗಿ ಬಿಜೆಪಿ ಸೇರ್ಪಡೆಯಾಗಿದ್ದೇನೆ ಜಗದೀಶ್ ಶೆಟ್ಟರ್ ಎಂದು ಹೇಳಿದರು.