Asianet Suvarna News Asianet Suvarna News

ಘರ್‌ವಾಪ್ಸಿ ಪ್ರಕ್ರಿಯೆ 1.5 ತಿಂಗಳಿಂದಿತ್ತು: ಜಗದೀಶ್ ಶೆಟ್ಟರ್

ಪಕ್ಷದ ರಾಷ್ಟ್ರೀಯ ನಾಯಕರು ಗೌರವದ ಮಾತು ಹೇಳಿದ್ದಾರೆ. ಇನ್ನು ಮುಂದೆ ರಾಜ್ಯದಲ್ಲಿ ಬಿಜೆಪಿ ಶಕ್ತಿಯನ್ನು ವೃದ್ಧಿಸುವ ಕೆಲಸ ಮಾಡುತ್ತೇನೆ. ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶ ಬಲಾಡ್ಯವಾಗಿ ಬೆಳೆದಿದೆ. ಕಳೆದ 10 ವರ್ಷಗಳಲ್ಲಿ ಜಗತ್ತಿನ ಶಕ್ತಿಶಾಲಿ ದೇಶವಾಗಿಸಲು ಮೋದಿ ಅವರು ಶ್ರಮ ಹಾಕಿದ್ದಾರೆ. ಮತ್ತೆ ಮೋದಿ ಅವರು ದೇಶದ ಪ್ರಧಾನಿ ಆಗಬೇಕು ಎಂಬುದು ದೇಶದ ಜನರ ಅಭಿಲಾಷೆಯಾಗಿದೆ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ 

Former CM Jagadish Shettar React to Join BJP grg
Author
First Published Jan 26, 2024, 8:35 AM IST

ಬೆಂಗಳೂರು(ಜ.26): ಬಿಜೆಪಿ ನನ್ನ ಮನೆ. ನಾವೇ ಕಟ್ಟಿ ಬೆಳೆಸಿದ ಮನೆಗೆ ಈಗ ವಾಪಸ್ ಬಂದಿದ್ದೇನೆ. ಯಾವುದೇ ಷರತ್ತುಗಳಿಲ್ಲದೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಕಳೆದ ಒಂದೂವರೆ ತಿಂಗಳಿಂದ ಘರ್ ವಾಪ್ತಿ ಪ್ರಕ್ರಿಯೆ ನಡೆದಿದ್ದು, ಇದೀಗ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ ಎಂದೂ ಹೇಳಿದ್ದಾರೆ.  ಗುರುವಾರ ರಾತ್ರಿ ದೆಹಲಿಯಿಂದ ವಾಪಸಾದ ಬಳಿಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಕಾರ್ಯ ಕರ್ತರು ಹಾಗೂ ಮುಖಂಡರು ಭರ್ಜರಿಯಾಗಿ ಸ್ವಾಗತಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಳಗ್ಗೆ ಮಾಜಿ ಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿದ್ದೆ. ರಾಜ್ಯದಲ್ಲಿನ ಪಕ್ಷದ ನಾಯಕರು, ಕಾರ್ಯಕರ್ತರು, ಮುಖಂಡರ ಅಪೇಕ್ಷೆ ಇತ್ತು. ಯಡಿಯೂರಪ್ಪ ಮತ್ತು ವಿಜಯೇಂದ್ರ ಪಕ್ಷಕ್ಕೆ ವಾಪಸ್ ಬರುವಂತೆ ಪ್ರಸ್ತಾವನೆ ಇಟ್ಟರು. ಹೀಗಾಗಿ ಎಲ್ಲರ ಅಭಿಪ್ರಾಯ ಪಡೆದು ಬಹಳ ಸಂತೋಷದಿಂದ ನಮ್ಮ ಮನೆಗೆ ವಾಪಸ್‌ ಬಂದಿದ್ದೇನೆ ಎಂದರು. 

ಜಗದೀಶ ಶೆಟ್ಟ‌ರ್ ಬಿಜೆಪಿ ಸೇರ್ಪಡೆಗೆ ಕಾಂಗ್ರೆಸ್ ಕಿಡಿ

ಪಕ್ಷದ ರಾಷ್ಟ್ರೀಯ ನಾಯಕರು ಗೌರವದ ಮಾತು ಹೇಳಿದ್ದಾರೆ. ಇನ್ನು ಮುಂದೆ ರಾಜ್ಯದಲ್ಲಿ ಬಿಜೆಪಿ ಶಕ್ತಿಯನ್ನು ವೃದ್ಧಿಸುವ ಕೆಲಸ ಮಾಡುತ್ತೇನೆ. ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶ ಬಲಾಡ್ಯವಾಗಿ ಬೆಳೆದಿದೆ. ಕಳೆದ 10 ವರ್ಷಗಳಲ್ಲಿ ಜಗತ್ತಿನ ಶಕ್ತಿಶಾಲಿ ದೇಶವಾಗಿಸಲು ಮೋದಿ ಅವರು ಶ್ರಮ ಹಾಕಿದ್ದಾರೆ. ಮತ್ತೆ ಮೋದಿ ಅವರು ದೇಶದ ಪ್ರಧಾನಿ ಆಗಬೇಕು ಎಂಬುದು ದೇಶದ ಜನರ ಅಭಿಲಾಷೆಯಾಗಿದೆ. ಸೇರ್ಪಡೆ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. 
ಕಾಂಗ್ರೆಸ್‌ನಲ್ಲಿ ನನಗೆ ಗೌರವ ಕೊಟ್ಟಿದ್ದಾರೆ. 

ಕಾಂಗ್ರೆಸ್‌ನಲ್ಲಿ ನನಗೆ ಗೌರವ ಕೊಟ್ಟಿದ್ದಾರೆ ಅದಕ್ಕೆ ನಾನು ಧನ್ಯವಾದ ಹೇಳಿದ್ದೇನೆ ಎಂದರು. ಇದೀಗ ವೈಯಕ್ತಿಕ ಅಭಿಲಾಷೆ ಯಿಂದ ಪಕ್ಷಕ್ಕೆ ಮರಳಿದ್ದೇನೆ. ಎಲ್ಲರೂ ಒಟ್ಟಾಗಿ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ. ಕಳೆದ ಒಂದೂವರೆ ತಿಂಗಳಿಂದ ಫರ್ ವಾಪ್ತಿ ಪ್ರಕ್ರಿಯೆ ನಡೆದಿದ್ದು, ಇದೀಗ ಪಕ್ಷಕ್ಕೆ ಸೇರ್ಪಡೆ ಯಾಗಿದ್ದೇನೆ ಎಂದು ಪ್ರಶ್ನೆಯೊಂದಕ್ಕೆ ಶೆಟ್ಟರ್ ಉತ್ತರಿಸಿದರು.

Follow Us:
Download App:
  • android
  • ios