ಬಿಜೆಪಿ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ಸಿಗಿಲ್ಲ: ಜಗದೀಶ್‌ ಶೆಟ್ಟರ್‌

ಕಾಂಗ್ರೆಸ್‌ ಪಕ್ಷ ಹಾಗೂ ಅದರ ನಾಯಕರಿಗೆ ಬಿಜೆಪಿ ಮತ್ತು ಪಕ್ಷದ ನಾಯಕರ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ. ಭ್ರಷ್ಟಾಚಾರದ ಹಗರಣದಲ್ಲಿ ಜೈಲಿಗೆ ಹೋಗಿದ್ದವರು ಪೇಸಿಎಂ ಬಗ್ಗೆ ಮಾತನಾಡುವುದು ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್‌ ವಿರುದ್ಧ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಆಕ್ರೋಶ ವ್ಯಕ್ತಪಡಿಸಿದರು.

Former Cm Jagadish Shettar Slams On Congress At Hubballi gvd

ಹುಬ್ಬಳ್ಳಿ (ಸೆ.25): ಕಾಂಗ್ರೆಸ್‌ ಪಕ್ಷ ಹಾಗೂ ಅದರ ನಾಯಕರಿಗೆ ಬಿಜೆಪಿ ಮತ್ತು ಪಕ್ಷದ ನಾಯಕರ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ. ಭ್ರಷ್ಟಾಚಾರದ ಹಗರಣದಲ್ಲಿ ಜೈಲಿಗೆ ಹೋಗಿದ್ದವರು ಪೇಸಿಎಂ ಬಗ್ಗೆ ಮಾತನಾಡುವುದು ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್‌ ವಿರುದ್ಧ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಗೌರವಯುತ ಪಕ್ಷವಾಗಿ ಉಳಿದಿಲ್ಲ. ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಪೇ ಸಿಎಂ ಎನ್ನುವ ಕೀಳುಮಟ್ಟದ ರಾಜಕಾರಣಕ್ಕೆ ಇಳಿದಿದೆ ಎಂದರು.

ಕಾಂಗ್ರೆಸ್‌ ಯಾಕೆ ಇಷ್ಟೊಂದು ಕೆಳಮಟ್ಟಕ್ಕೆ ಇಳಿದಿದೆ ಗೊತ್ತಿಲ್ಲ. ದಾಖಲೆಗಳಿದ್ದರೆ ಲೋಕಾಯುಕ್ತಕ್ಕೆ ಸಲ್ಲಿಸಲಿ. ಅದನ್ನು ಬಿಟ್ಟು ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಕೆಳಮಟ್ಟಕ್ಕೆ ಇಳಿದಿದೆ. ಅವರದ್ದೆ ಪಕ್ಷದ ಓರ್ವ ಮಾಜಿ ಸ್ಪೀಕರ್‌ ರಮೇಶಕುಮಾರ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಇಂದಿರಾಗಾಂಧಿ ಅವರಿಂದ ಅವರ ಕುಟುಂಬದಿಂದ ಎರಡೂ, ಮೂರು ತಲೆಮಾರು ಆಗುವಷ್ಟುಆಸ್ತಿ ಮಾಡಿದ್ದೇವೆ. ಅವರ ಪರ ಹೋರಾಡಬೇಕು ಎಂದು ಹೇಳಿದ್ದಾರೆ. ಈ ಹೇಳಿಕೆಯೇ ಕಾಂಗ್ರೆಸ್ಸಿಗರೆಲ್ಲರೂ ಭ್ರಷ್ಟಾಚಾರದಲ್ಲಿ ತೊಡಗಿದ್ದರು ಎಂಬುದಕ್ಕೆ ಸಾಕ್ಷಿ. ಅಂಥವರು ಇದೀಗ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದರು.

Chitradurga: ಟ್ಯಾಕ್ಸ್‌ ಕಟ್ಟಲು ನನ್ನ ಬಳಿ ಹಣವಿಲ್ಲ: ಸಚಿವ ಮಾಧುಸ್ವಾಮಿ

ಕಾಂಗ್ರೆಸ್‌ ಭಾರತ ಜೋಡೋ ಕುರಿತು ಪ್ರತಿಕ್ರಿಯಿಸಿದ ಶೆಟ್ಟರ್‌, ಕಾಂಗ್ರೆಸ್‌ ಭಾರತ ಜೋಡೋ ಬಿಟ್ಟು, ಕಾಂಗ್ರೆಸ್‌ ಜೋಡೊ ಮಾಡಲಿ. ಅದರ ನಾಯಕರು ಪಕ್ಷದಲ್ಲಿ ಪಾದಯಾತ್ರೆ ಮಾಡಿ ಪಕ್ಷ ಸಂಘಟನೆ ಮಾಡಲಿ ಎಂದರು. ರಾಹುಲ್‌ ಗಾಂಧಿಗೆ ತಮ್ಮ ಪಕ್ಷದ ಅಧ್ಯಕ್ಷನಾಗಬೇಕೆಂಬ ಇಚ್ಛೆಯೇ ಇಲ್ಲ. ಅಂಥವರೇನು ಪಕ್ಷ ಸಂಘಟನೆ ಮಾಡುತ್ತಾರೆ. ಅವರ ಪಕ್ಷದವರೆಲ್ಲರೂ ರಾಹುಲ್‌ ಗಾಂಧಿ ಅಧ್ಯಕ್ಷರಾಗಲಿ ಎಂದು ಹೇಳುತ್ತಿದ್ದರೆ, ಇವರು ತಾವು ಒಲ್ಲೆ ಎಂದು ಹೇಳುತ್ತಿದ್ದಾರೆ ಎಂದು ಹೇಳಿದರು. ಬಸವರಾಜ ಹೊರಟ್ಟಿಅವರನ್ನು ಬಿಜೆಪಿ ಕಡೆಗಣನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಈ ಬಗ್ಗೆ ಪಕ್ಷದ ವರಿಷ್ಠರು ಹಾಗೂ ಹೈಕಮಾಂಡ್‌ ತೀರ್ಮಾನ ಕೈಗೊಳ್ಳುತ್ತಾರೆ. ಹೊರಟ್ಟಿಅವರಿಗೆ ಸೂಕ್ತ ಸ್ಥಾನಮಾನ ಸಿಗಲಿದೆ ಎಂದು ಭರವಸೆ ನೀಡಿದರು.

ಕೈ ವಿರುದ್ಧ ಕಮಲ ಕಿಡಿ: ವಿಧಾನಸಭೆಯ ಒಳಗೆ ಹಾಗೂ ಹೊರಗೆ ಭಾರೀ ಕೋಲಾಹಲ ಉಂಟು ಮಾಡಿದ್ದ ಕಾಂಗ್ರೆಸ್‌ನ ‘ಪೇ ಸಿಎಂ’ ಅಭಿಯಾನದ ವಿರುದ್ಧ ಬಿಜೆಪಿ ತಿರುಗಿ ಬಿದ್ದಿದೆ. ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ 40% ಆರೋಪ ಮಾಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ ನಾಯಕರ ಹೇಳಿಕೆಗಳಿಗೆ ತೀಕ್ಷ$್ಣವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕರು, ತಾಕತ್ತಿದ್ದರೆ ಈ ಬಗ್ಗೆ ದಾಖಲೆ ಬಿಡುಗಡೆ ಮಾಡಲಿ ಎಂದು ತಿರುಗೇಟು ನೀಡಿದ್ದಾರೆ. 

ಈ ಕುರಿತು ತೀರ್ಥಹಳ್ಳಿಯಲ್ಲಿ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ‘ಪೇ ಸಿಎಂ’ ಕಾಂಗ್ರೆಸ್‌ನ ವಿಕೃತ ಮನಸ್ಥಿತಿಗೆ ಸಾಕ್ಷಿಯಂತಾಗಿದೆ. ನೇರಾನೇರ ರಾಜಕಾರಣ ಮಾಡಲು ಅವರಿಗೆ ಯೋಗ್ಯತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಚಿಕ್ಕಮಗಳೂರಿನಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ‘ಪೇ ಸಿಎಂ’ ಅಂದರೆ, ‘ಪೇ ಫಾರ್‌ ಕಾಂಗ್ರೆಸ್‌ ಮೇಡಂ’, ಈ ಸ್ಕಾ್ಯನರ್‌ನಲ್ಲಿ ಕಾಂಗ್ರೆಸ್‌ನ ಅಧಿನಾಯಕಿಯ ಹೆಸರಿನ ಬದಲಿಗೆ ಬೊಮ್ಮಾಯಿ ಅವರ ಹೆಸರು ಮುದ್ರಣಗೊಂಡಿದೆ ಎಂದು ತಿರುಗೇಟು ನೀಡಿದ್ದಾರೆ. 

ಶಿವಮೊಗ್ಗದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಪತ್ಯ: ಎಚ್‌.ಎಂ.ರೇವಣ್ಣ

ಇದೇ ವೇಳೆ, ಚಿಕ್ಕಮಗಳೂರಿನಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಉಡುಪಿಯಲ್ಲಿ ಇಂಧನ ಸಚಿವ ಸುನಿಲ್‌ ಕುಮಾರ್‌, ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ ಶೆಟ್ಟರ್‌, ಬಾಗಲಕೋಟೆಯಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಮಾತನಾಡಿ, ಕಾಂಗ್ರೆಸ್‌ ನಾಯಕರ ವಿರುದ್ದ ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯ, ಡಿಕೆಶಿ ಇಬ್ಬರೂ ನರಿಗಳು. ನರಿಗಳು ಕುರಿಗಳ ವೇಷ ಹಾಕಿದ್ರೆ ನಾವು ಬಿಡಲ್ಲ. ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬೇಲ್‌ ಮೇಲಿರುವ ಡಿಕೆಶಿಯವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿರುವುದು ದುರಂತ ಎಂದು ರಾಮುಲು ಹೇಳಿದ್ದಾರೆ.

Latest Videos
Follow Us:
Download App:
  • android
  • ios