ಬೆಂಗಳೂರು, (ಆ.12): ನಗರದ ಡಿಜೆ ಹಳ್ಳಿಯಲ್ಲಿ ನಡೆದ ದಾಂಧಲೆಯನ್ನ ವಿಪಕ್ಷಗಳು ಸೇರಿ ಇಡೀ ರಾಜ್ಯವೇ ಖಂಡಿಸುತ್ತಿದೆ. ಅದರಂತೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ದುರ್ಘಟನೆ ಸಂಬಂಧಿಸಿದಂತೆ ಟ್ವೀಟ್‌ ಮಾಡಿದ್ದರು. ಆದ್ರೆ, ಅವರ ಹೇಳಿಕೆ ಭಾರೀ ಸದ್ದು ಮಾಡಿದ್ದು, ಕೊನೆಗೆ ಸಿದ್ದರಾಮಯ್ಯ ಅವರೇ ಸಮಜಾಯಿಷಿ ನೀಡಿದ್ದಾರೆ.

ಮಂಗಳವಾರ) ರಾತ್ರಿ ನಗರದ ಡಿಜೆ ಹಳ್ಳಿಯಲ್ಲಿ ನಡೆದ ದಾಂಧಲೆಯನ್ನ ಖಂಡಿಸಿ, ಬೆಳಗ್ಗೆ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ 'ಕಳೆದ ರಾತ್ರಿ ಕಾವಲಭೈರಸಂದ್ರದಲ್ಲಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡೂ ಖಂಡನೀಯ. ಹಿಂದೂ-ಮುಸ್ಲಿಮ್ ಎರಡು ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಕೈಮುಗಿದು ಮನವಿ ಮಾಡುತ್ತಿದ್ದೇನೆ' ಎಂದು ಹೇಳಿದ್ದರು. 

ಧರ್ಮದ ಅವಹೇಳನ ಅರೋಪ: ಕಾಂಗ್ರೆಸ್‌ ವಿರುದ್ಧ ಸಚಿವ ಸಿ.ಟಿ.ರವಿ ವಾಗ್ದಾಳಿ

ಈ ಹೇಳಿಕೆಯನ್ನ ರೀಟ್ವೀಟ್ ಮಾಡಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ಮುಖಂಡ ಬಿ.ಎಲ್.ಸಂತೋಷ್ ಸೇರಿದಂತೆ ಅನೇಕರು ವ್ಯಂಗ್ಯವಾಡಿದ್ದರು.

ಇದೀಗ ತಮ್ಮ ಈ ಹೇಳಿಕೆಯನ್ನ ಸಮರ್ಥಿಸಿಕೊಂಡಿರುವ ವಿಪಕ್ಷ ನಾಯಕ, ಹಿಂದು-ಮುಸ್ಲಿಮರು ಕೂಡಿ ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂಬ ನನ್ನ ಹೇಳಿಕೆಯನ್ನು‌ ಹಿಂದೂ ವಿರೋಧಿ ಎನ್ನುವಂತೆ ತಿರುಚಲಾಗುತ್ತಿದೆ. ಮುಸ್ಲಿಮ್ ಗಲಭೆಕೋರರಿಗೆ ಮುಸ್ಲಿಮ್ ಹಿರಿಯರು, ಗಲಭೆಗೆ ಪ್ರಚೋದಿಸಿದ್ದ ಹಿಂದೂ ಯುವಕ ನವೀನ್‌ಗೆ ಹಿಂದೂ ಹಿರಿಯರೇ ಬುದ್ದಿ ಹೇಳಬೇಕಲ್ಲಾ? ನನ್ನ ಹೇಳಿಕೆಯಲ್ಲಿ ತಪ್ಪೇನಿದೆ?' ಎಂದು ಪ್ರಶ್ನಿಸಿದ್ದಾರೆ.