ಬೆಂಗಳೂರು(ಸೆ.18): ಬಿಬಿಎಂಪಿ ಚುನಾವಣೆ ಎದುರಿಸುವ ಸಾಮರ್ಥ್ಯ ಬಿಜೆಪಿಗೆ ಇಲ್ಲ. ಏಕೆಂದರೆ, ಜನರ ಬಳಿಗೆ ಹೋಗುವ ಧೈರ್ಯ ಅವರಿಗೆ ಇಲ್ಲ. ರಾಜ್ಯ ಸುತ್ತುವ ಮೂಲಕ ಜನರ ಸಮಸ್ಯೆ ಬಗೆಹರಿಸುವುದೂ ಇಲ್ಲ. ಮುಖ್ಯಮಂತ್ರಿ, ಮಂತ್ರಿಗಳು ಬೆಂಗಳೂರಿನಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ವಿಧಾ​ನ​ಸಭೆ ವಿಪಕ್ಷ ನಾಯ​ಕ ಸಿದ್ದ​ರಾ​ಮ​ಯ್ಯ ದೂರಿದ್ದಾರೆ. 

ಗುರು​ವಾರ ಸುದ್ದಿ​ಗೋ​ಷ್ಠಿ​ಯಲ್ಲಿ ಅವರು ಮಾತ​ನಾಡಿ, ಬೆಂಗಳೂರಿನ ಜನಸಂಖ್ಯೆ 1.10 ಕೋಟಿ. ಕೇವಲ ವಲಯಗಳನ್ನು ಮಾಡಿ ಆಯುಕ್ತರ ಹುದ್ದೆಯನ್ನು ಮುಖ್ಯ ಆಯುಕ್ತರ ಹುದ್ದೆ ಎಂದು ಬದಲಾಯಿಸಿದರೆ ಮಹಾನಗರ ಅಭಿವೃದ್ಧಿ ಆಗುವುದೇ? ಪ್ರತಿವರ್ಷ ಮಳೆ ಬರುತ್ತದೆ. ಈವರೆಗೆ ರಾಜ ಕಾಲುವೆಗಳ ದುರಸ್ತಿ ಆಗಿಲ್ಲ ಎಂದು ಟೀಕಿಸಿದ್ದಾರೆ. 

ಪ್ರಧಾನಿ ಮೋದಿ ಹುಟ್ಟುಹಬ್ಬ ನಿರುದ್ಯೋಗಿಗಳ ದಿನ: ಸಿದ್ದರಾಮಯ್ಯ

ಪಾಲಿಕೆ ಆಸ್ತಿಯನ್ನು ಅಡಮಾನ ಇಟ್ಟವರು ಯಾರು? ಬಿಜೆಪಿಯವರಿಂದ ಬೆಂಗಳೂರು ಅಭಿವೃದ್ಧಿ ಅಸಾಧ್ಯ. ಕೇವಲ ಭಾಷಣ ಮತ್ತು ಭ್ರಷ್ಟಾಚಾರವನ್ನು ಮಾತ್ರ ಅವರಿಂದ ನಿರೀಕ್ಷೆ ಮಾಡಬಹುದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.