ಮೀಸಲಾತಿ ಹೆಚ್ಚಳಕ್ಕಾಗಿ ಸಮುದಾಯಗಳು ಕೇಳುವುದು ತಪ್ಪಲ್ಲ: ಸಿದ್ದರಾಮಯ್ಯ
ಮೀಸಲಾತಿ ಹೆಚ್ಚಳಕ್ಕಾಗಿ ಸಮುದಾಯಗಳು ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮೀಸಲಾತಿ ಹೆಚ್ಚಿಸಲು ಕೆಲವು ಸಮುದಾಯಗಳು ಹೋರಾಟ ವಿಚಾರವಾಗಿ ಮಾತನಾಡಿದರು.
ಮಂಡ್ಯ (ಅ.29): ಮೀಸಲಾತಿ ಹೆಚ್ಚಳಕ್ಕಾಗಿ ಸಮುದಾಯಗಳು ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮೀಸಲಾತಿ ಹೆಚ್ಚಿಸಲು ಕೆಲವು ಸಮುದಾಯಗಳು ಹೋರಾಟ ವಿಚಾರವಾಗಿ ಮಾತನಾಡಿದ ಅವರು, ಯಾರು ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದ್ದಾರೆ, ಶೋಷಣೆಗೆ ಒಳಪಟ್ಟಿದ್ದಾರೆ. ಅವರಿಗೆ ಮೀಸಲಾತಿ ಕೊಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆರ್ಟಿಕಲ್ 15,16 ಪ್ರಕಾರ ಮೀಸಲಾತಿ ಕೊಡಬೇಕು. ಯಾವುದೇ ಸಮುದಾಯಗಳು ಮೀಸಲಾತಿ ಕೇಳುವುದು ತಪ್ಪೇನಿಲ್ಲ ಎಂದರು. ಸಿದ್ದು-ಡಿಕೆಗೆ ಖರ್ಗೆಯಿಂದ ಭಯ ಶುರುವಾಗಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕಟೀಲ್ ಒಬ್ಬ ಜೋಕರ್ ಅವನಿಗೆ ಉತ್ತರ ಕೊಡಲ್ಲ ಎಂದು ಕಿಡಿಕಾರಿದರು.
ಬಿಜೆಪಿ ಸರ್ಕಾರಗಳಿಂದ ಜನರ ಕಲ್ಯಾಣ ಸಾಧ್ಯವಿಲ್ಲ: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಶುಕ್ರವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರರ 60ನೇ ಹುಟ್ಟುಹಬ್ಬ ಅಂಗವಾಗಿ ಹಮ್ಮಿಕೊಂಡಿದ್ದ ನಮ್ಮ ಅಭಿಮಾನ ಸಂಗಮೇಶೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಹಾಗೂ ರಾಜ್ಯದಲ್ಲಿನ ಬಿಜೆಪಿ ಡಬಲ್ ಇಂಜಿನ್ ಸರ್ಕಾರಗಳು ಜನವಿರೋಧಿ ಸರ್ಕಾರಗಳಾಗಿವೆ.
ಸಿದ್ದರಾಮಯ್ಯ ದಲಿತರು, ಹಿಂದುಳಿದ ನಾಯಕರನ್ನು ತುಳಿದಿದ್ದಾರೆ: ಸಚಿವ ಶ್ರೀರಾಮುಲು
ಈ ಸರ್ಕಾರಗಳಿಂದ ಜನರ ಕಲ್ಯಾಣ ಸಾಧ್ಯವಿಲ್ಲ ಎಂಬುದು ಇದೀಗ ಎಲ್ಲರಿಗೂ ಅರ್ಥವಾಗುತ್ತಿದೆ. ದೇಶ, ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದ್ದು ಬಡವರು, ರೈತರು, ಕಾರ್ಮಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜನವಿರೋಧಿ ನೀತಿಗಳನ್ನು ಜಾರಿಗೊಳಿಸುವ ಮೂಲಕ ಮಾರಕವಾಗಿವೆ. ಅಲ್ಲದೆ ಧರ್ಮ ಧರ್ಮಗಳ ನಡುವೆ ವಿಷಬೀಜ ಭಿತ್ತಿ ಜನರು ನೆಮ್ಮದಿಯಿಂದ ಬದುಕಲಾರದ ವಾತಾವರಣ ನಿರ್ಮಾಣ ಮಾಡಲಾಗಿದೆ. ಈ ಎಲ್ಲಾ ಕಾರಣಗಳಿಂದ ಮುಂದಿನ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಬರುವ ಸಂಪೂರ್ಣ ವಿಶ್ವಾಸವಿದೆ ಎಂದರು.
ಕಾಂಗ್ರೆಸ್ ಪಕ್ಷ ಸದಾ ಇರಲಿದೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿ, ಭದ್ರಾವತಿ ಕ್ಷೇತ್ರ ತನ್ನದೇ ಇತಿಹಾಸ ಹೊಂದಿದ ಪುಣ್ಯ ಭೂಮಿ. ಇಂತಹ ಭೂಮಿಯಲ್ಲಿ ಸಂಗಮೇಶ್ವರ್ ಎಲ್ಲಾ ಧರ್ಮದ, ಜಾತಿಯ ಜನರ ಪ್ರೀತಿ ಸಂಪಾದಿಸಿರುವುದು ಹೆಮ್ಮೆಯ ವಿಚಾರ. ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸುವ ಉದ್ದೇಶದಿಂದ ಕಾರ್ಯಕ್ರಮಕ್ಕೆ ಬಂದಿಲ್ಲ. ಇಲ್ಲಿನ ಜನರೊಂದಿಗೆ ಕಾಂಗ್ರೆಸ್ ಪಕ್ಷ ಸದಾ ಇರುತ್ತದೆ ಎಂದು ಭರವಸೆ ನೀಡಲು ಬಂದಿದ್ದೇನೆ. ಈ ನೆಲಕ್ಕೆ ಮತ್ತೆ ವೈಭವ ತಂದು ಕೊಡಬೇಕಾದರೆ ಮತದಾರರು ಕಾಂಗ್ರೆಸ್ ಬೆಂಬಲಿಸಬೇಕು ಎಂದರು.
ಬಿಜೆಪಿಯವರಿಂದ ಜಗತ್ತಿನೆದುರು ದೇಶದ ಮರ್ಯಾದೆ ಹರಾಜು: ಸಿದ್ದರಾಮಯ್ಯ
ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ನನ್ನ 30 ವರ್ಷಗಳ ರಾಜಕಾರಣದಲ್ಲಿ ಕ್ಷೇತ್ರದ ಮತದಾರರು ನನಗೆ ನೀಡುತ್ತಿರುವ ಬೆಂಬಲ ಅಭೂತಪೂರ್ವವಾಗಿದೆ. ನನ್ನ ಸ್ವಂತ ಬುದ್ಧಿವಂತಿಕೆ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರ ಸಹಕಾರದೊಂದಿಗೆ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸಿದ್ದೇನೆ. ಶೇ.70ರಷ್ಟುಅಭಿವೃದ್ಧಿ ಕೆಲಸಗಳ ಮಾಡಿರುವ ತೃಪ್ತಿ ಹೊಂದಿದ್ದೇನೆ. ಮುಂದಿನ ದಿನಗಳಲ್ಲೂ ನನ್ನನ್ನು ಮತದಾರರು ಬೆಂಬಲಿಸುತ್ತಾರೆಂಬ ವಿಶ್ವಾಸವಿದೆ ಎಂದರು.