ಚುನಾವಣಾ ರಾಜಕೀಯದಿಂದ ಮಾಜಿ ಸಿಎಂ ವೀರಪ್ಪ ಮೊಯ್ಲಿ ನಿವೃತ್ತಿ
ನನಗೆ ಲೋಕಸಭಾ ಅಭ್ಯರ್ಥಿ ಸ್ಥಾನದಿಂದ ಈಗ ಬಿಡುಗಡೆ ಭಾಗ್ಯ ಸಿಕ್ಕಿದೆ. ಹೈಕಮಾಂಡ್ ತೀರ್ಮಾನದಂತೆ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಲಿದ್ದೇನೆ. ನಾನು ಸಾಯುವವರೆಗೂ ಕಾಂಗ್ರೆಸ್ ಪಕ್ಷದಲ್ಲಿಯೇ ಇರುತ್ತೇನೆ ಎಂದರು. ಹಿಂದೆ ಜೆಡಿಎಸ್ ನಂಬಿ ಕಾಂಗ್ರೆಸ್ ಕೆಟ್ಟಿತು. ಈಗ ಜೆಡಿಎಸ್ ನಂಬಿ ಬಿಜೆಪಿ ಕೆಡಲಿದೆ: ವೀರಪ್ಪ ಮೊಯ್ಲಿ
ಚಿಕ್ಕಬಳ್ಳಾಪುರ(ಏ.09): ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.
ಸೋಮವಾರ ನಗರದ ತಮ್ಮ ಗೃಹ ಕಚೇರಿಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ಜತೆ ಸುದ್ದಿಗೋಷ್ಠಿ ನಡೆಸಿದ ಅವರು, ರಕ್ಷಾರಾಮಯ್ಯ ಅವರಿಗೆ ಸಂಪೂರ್ಣ ಬೆಂಬಲ ಕೊಡುವುದಾಗಿ ಹೇಳಿದರು. ನಾನು ಇನ್ನು ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ, ರಕ್ಷಾರಾಮಯ್ಯ ಪರವಾಗಿ ಚುನಾವಣಾ ಪ್ರಚಾರ ಮಾಡುತ್ತೇನೆ ಎಂದು ಹೇಳಿದರು.
ಲೋಕಸಭೆ ಚುನಾವಣೆ 2024: ಗನ್ ಇಟ್ಕೊಂಡ ವ್ಯಕ್ತಿ ಸಿದ್ದರಾಮಯ್ಯಗೆ ಹಾರ ಹಾಕಿದ..!
ನನಗೆ ಲೋಕಸಭಾ ಅಭ್ಯರ್ಥಿ ಸ್ಥಾನದಿಂದ ಈಗ ಬಿಡುಗಡೆ ಭಾಗ್ಯ ಸಿಕ್ಕಿದೆ. ಹೈಕಮಾಂಡ್ ತೀರ್ಮಾನದಂತೆ ನೂರಕ್ಕೆ ನೂರರಷ್ಟು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಲಿದ್ದೇನೆ. ನಾನು ಸಾಯುವವರೆಗೂ ಕಾಂಗ್ರೆಸ್ ಪಕ್ಷದಲ್ಲಿಯೇ ಇರುತ್ತೇನೆ ಎಂದರು. ಹಿಂದೆ ಜೆಡಿಎಸ್ ನಂಬಿ ಕಾಂಗ್ರೆಸ್ ಕೆಟ್ಟಿತು. ಈಗ ಜೆಡಿಎಸ್ ನಂಬಿ ಬಿಜೆಪಿ ಕೆಡಲಿದೆ ಎಂದರು.