ಕಾಂಗ್ರೆಸ್‌ಗೆ ಅವರ ಪಕ್ಷದವರನ್ನೇ ಉಳಿಸಿಕೊಳ್ಳಲು ಆಗ್ತಿಲ್ಲ: ಅಶ್ವತ್ಥನಾರಾಯಣ
ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ನಿಷ್ಕ್ರೀಯವಾಗಿದೆ. ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಬಂದಿದೆ. ಕಾಂಗ್ರೆಸ್ ಮುಳುಗುತ್ತಿರುವ ಪಕ್ಷ. ಮುಳುಗುತ್ತಿರುವ ಪಕ್ಷಕ್ಕೆ ಯಾರೂ ಹೋಗಲ್ಲ. ಕಾಂಗ್ರೆಸ್ ಮತ್ತು ಸರ್ಕಾರ ವಿಷಯಾಂತರ ಮಾಡಲು ಪ್ರಯತ್ನಿಸುತ್ತಿದೆ. ಯಾರೂ ನಮ್ಮ ಪಕ್ಷ ಬಿಟ್ಟು ಹೋಗಲ್ಲ: ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು(ಆ.20): ಕಾಂಗ್ರೆಸ್ ಮುಳುಗುತ್ತಿರುವ ಪಕ್ಷ. ಕಾಂಗ್ರೆಸ್‌ಗೆ ಅವರ ಪಕ್ಷದವರನ್ನೇ ಉಳಸಿಕೊಳ್ಳಲು ಆಗುತ್ತಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ವ್ಯಂಗ್ಯವಾಡಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡುವಾಗ ಆಪರೇಷನ್ ಹಸ್ತದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನ ಹಲವು ಸಚಿವರು ಹಾಗೂ ಶಾಸಕರು ಅವರ ಸರ್ಕಾರದ ವಿರುದ್ಧವೇ ಮಾತನಾಡಿದ್ದಾರೆ. ಮೂರು ತಿಂಗಳಲ್ಲೇ ಅವರ
ಸರ್ಕಾರದಲ್ಲೇ ಹಲವು ಸಮಸ್ಯೆಗಳಿವೆ. ಇಂಥವರು ಆಪರೇಷನ್ ಹಸ್ತ ಮಾಡುತ್ತಾರೆ ಎಂದರೆ, ಇವರ ಯಾವ ನಾಟಕವೂ ವರ್ಕೌಟ್ ಆಗಲ್ಲ. ಇವರ ರಾಜಕೀಯ ತಂತ್ರಗಳು ವರ್ಕೌಟ್ ಆಗಲ್ಲ. ನನಗೆ ಗೊತ್ತಿರುವ ಪ್ರಕಾರ ಬಿಜೆಪಿಯಿಂದ ಯಾರೂ ಕಾಂಗ್ರೆಸ್‌ಗೆ ಹೋಗುವುದಿಲ್ಲ ಎಂದು ಹೇಳಿದರು.
60 ದಿನಗಳಲ್ಲಿ ಕಾಂಗ್ರೆಸ್ ಭ್ರಷ್ಟಾಚಾರ ಬಯಲು: ಅಶ್ವತ್ಥನಾರಾಯಣಗೌಡ
ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ನಿಷ್ಕ್ರೀಯವಾಗಿದೆ. ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಬಂದಿದೆ. ಕಾಂಗ್ರೆಸ್ ಮುಳುಗುತ್ತಿರುವ ಪಕ್ಷ. ಮುಳುಗುತ್ತಿರುವ ಪಕ್ಷಕ್ಕೆ ಯಾರೂ ಹೋಗಲ್ಲ. ಕಾಂಗ್ರೆಸ್ ಮತ್ತು ಸರ್ಕಾರ ವಿಷಯಾಂತರ ಮಾಡಲು ಪ್ರಯತ್ನಿಸುತ್ತಿದೆ. ಯಾರೂ ನಮ್ಮ ಪಕ್ಷ ಬಿಟ್ಟು ಹೋಗಲ್ಲ. ಅವರ ಪಕ್ಷದಲ್ಲಿ ಗೆದ್ದಿರುವ 135 ಶಾಸಕರನ್ನೇ ನೋಡಿಕೊಳ್ಳಲು ಅವರಿಗೆ ಆಗುತ್ತಿಲ್ಲ. ಅವರ ಪಕ್ಷದವರನ್ನೇ ಸಮರ್ಥಿಸಿಕೊಳ್ಳಲು ಆಗುತ್ತಿಲ್ಲ. ಇಂತಹವರು ಆಪರೇಷನ್ ಹಸ್ತ ಮಾಡುತ್ತಾರಾ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಸರ್ಕಾರವನ್ನು ರಾಜ್ಯದ ಜನ ಕ್ಷಮಿಸುವುದಿಲ್ಲ. ಅವರ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳನ್ನೂ ಬಿಜೆಪಿ ಗೆಲ್ಲಲಿದೆ. ಕಾಂಗ್ರೆಸ್ ಸರ್ಕಸ್, ದೊಂಬರಾಟ ಏನೂ ವರ್ಕ್ ಆಗಲ್ಲ ಎಂದು ಕಾಂಗ್ರೆಸ್‌ಗೆ ಟಾಂಗ್ ನೀಡಿದರು.