ಸಿದ್ದರಾಮಯ್ಯ ಸರ್ಕಾರ ಲಂಚ ಕೇಳುವ ಲಜ್ಜೆಗೆಟ್ಟ ಸರ್ಕಾರ: ಮಾಜಿ ಕಾರಜೋಳ

ಬಿಜೆಪಿ ಸರ್ಕಾರದ ಅವಧಿಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಬಂದ್ ಮಾಡಿ ಲಂಚ ತಿನ್ನುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಲಂಚ ಕೇಳುವ ಲಜ್ಜೆಗೆಟ್ಟ ಸರ್ಕಾರವಾಗಿದೆ. ಜನರ ಅಸಮಾಧಾನವನ್ನು ಬೇರೆಡೆಗೆ ಸೆಳೆಯಲು ಗಿಮಿಕ್ ಮಾಡುತ್ತಿದ್ದಾರೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಡಿಸಿಎಂ ಗೋವಿಂದ ಕಾರಜೋಳ 

Former DCM Govind Karjol Slams CM Siddaramaiah Government grg

ವಿಜಯಪುರ(ಡಿ.25):  ಬಿಜೆಪಿ ಸರ್ಕಾರದ ಅವಧಿಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಬಂದ್ ಮಾಡಿದೆ. ಸಿದ್ದರಾಮಯ್ಯ ಸರ್ಕಾರ ಲಂಚ ಕೇಳುವ ಲಜ್ಜೆಗೆಟ್ಟ ಸರ್ಕಾರವಾಗಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದರು.

ವಿಜಯಪುರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಬಂದ್ ಮಾಡಿ ಲಂಚ ತಿನ್ನುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಲಂಚ ಕೇಳುವ ಲಜ್ಜೆಗೆಟ್ಟ ಸರ್ಕಾರವಾಗಿದೆ. ಜನರ ಅಸಮಾಧಾನವನ್ನು ಬೇರೆಡೆಗೆ ಸೆಳೆಯಲು ಗಿಮಿಕ್ ಮಾಡುತ್ತಿದ್ದಾರೆ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು.

ಹವಾಮಾನ ಮುನ್ಸೂಚನೆ: ವಿಜಯಪುರದಲ್ಲಿ 10 ಡಿಗ್ರಿ ಸೆಲ್ಸಿಯಸ್‌ಗಿಳಿದ ತಾಪಮಾನ, ಬೆಂಗಳೂರು ಎಷ್ಟಿದೆ ಗೊತ್ತಾ?

ದೇಶಕ್ಕೆ ಸಂವಿಧಾನವಿದೆ. ಶಿಕ್ಷಣ, ಆರೋಗ್ಯ ಹಾಗೂ ಜನರ ಕಲ್ಯಾಣದ ಬಗ್ಗೆ ಸಂವಿಧಾನವನ್ನು ಪಾಲಿಸಬೇಕಾಗುತ್ತದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯ ಶೂನ್ಯವಾಗಿವೆ. ಆಡಳಿತ ವೈಪಲ್ಯವನ್ನು ಡೈವರ್ಟ್ ಮಾಡಲು ಕಾಲಕಾಲಕ್ಕೆ ಇಂತಹ ವಿಷಯಗಳನ್ನು ಮುನ್ನೆಲೆಗೆ ತರುತ್ತಾರೆ ಎಂದು ಕಿಡಿಕಾರಿದರು.

ಜಾತಿ ಜನಗಣತಿಗೆ ಲಿಂಗಾಯತ ಸಮಾಜ ಹಾಗೂ ಸ್ವಾಮೀಜಿಗಳ ವಿರೋಧ ಮಾಡಿದ್ದಾರೆ. ಶ್ರೀಶೈಲ ಶ್ರೀಗಳು ಯಾವುದಕ್ಕೆ ವಿರೋಧ ಮಾಡಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಆ ಕುರಿತು ಹೆಚ್ಚಿನ ಮಾಹಿತಿ ಶಾಮನೂರು ಶಿವಶಂಕರಪ್ಪ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಮಾತ್ರ ಗೊತ್ತು ಎಂದರು.

ನೂತನ ಪದಾಧಿಕಾರಿಗಳ ನೇಮಕ ಅಸಮಾಧಾನ ವಿಚಾರ ಸತ್ಯಕ್ಕೆ ದೂರವಾದದ್ದು. ಯಾರಿಗೆ ಅವಕಾಶ ಸಿಕ್ಕಿಲ್ಲ, ಅವರಿಗೆಲ್ಲಾ ಅಸಮಾದಾನ ಆಗಬಾರದು ಎಂದು ವಿನಂತಿ ಮಾಡುವೆ. ಎಲ್ಲರೂ ಸೇರಿ ಪಕ್ಷವನ್ನು ಸಂಘಟಿಸಿ ಮುಂದಿನ ಲೋಕಸಭೆ ಚುನಾವಣೆ ಎದುರಿಸಬೇಕು. ಲೋಕಸಭಾ ಕಡಿಮೆ ಸ್ಥಾನ ಬಂದರೆ ವಿಜಯೇಂದ್ರ ಕೆಳಗಿಳಿಸುವ ವಿಚಾರ ಕೇವಲ ಊಹಾಪೋಹ. ಈಗ ಹೊಸ ತಂಡ ಕಟ್ಟಲಾಗಿದೆ. ಹೊಸಬರನ್ನು ಮುಂದೆ ತರುವ ಕೆಲಸ ಹೈಕಮಾಂಡ್ ಮಾಡಿದೆ ಎಂದರು.

ಟಿಪ್ಪು ಬಳಿಕ 2ನೇ ಅವತಾರವೇ ಸಿದ್ದರಾಮಯ್ಯ: ಶಾಸಕ ಬಸನಗೌಡ ಯತ್ನಾಳ

ವಿಜಯಪುರದ ಲೋಕಸಭೆ ಟಿಕೆಟ್ ಆಕಾಂಕ್ಷಿಯಲ್ಲ:

ನಾನು ಲೋಕಸಭೆ ಟಿಕೆಟ್ ಆಕಾಂಕ್ಷಿಯಲ್ಲ. ರಾಜ್ಯ-ರಾಷ್ಟ್ರ ನಾಯಕರೊಂದಿಗೆ ಸೇರಿ ರಾಜ್ಯದ ೨೮ ಕ್ಷೇತ್ರದಲ್ಲಿಯೂ ನಮ್ಮ ಅಭ್ಯರ್ಥಿಗಳು ಗೆಲ್ಲಲು ಎಲ್ಲ ಪ್ರಯತ್ನ ಮಾಡುತ್ತೇನೆ. ನಾನು ಲೋಕಸಭೆ ಸ್ಪರ್ಧೆ ಮಾಡಬೇಕು ಎನ್ನುವ ಕೂಗು ಪಕ್ಷದಲ್ಲಿ ಇಲ್ಲ. ಗಾಳಿ ಸುದ್ದಿಗಳನ್ನು ಮಾಧ್ಯಮ ಮಿತ್ರರು ನಂಬಬಾರದು ಎಂದು ಮನವಿ ಮಾಡಿದರು.

ಆರ್.ಎಸ್.ಎಸ್ ವಿರುದ್ಧ ಕಾಂಗ್ರೆಸ್ ನಾಯಕ ಹರಿಪ್ರಸಾದ ಆರೋಪ ಕುರಿತು ಪ್ರತಿಕ್ರಿಯೆ ನೀಡಿದ ಕಾರಜೋಳ ಅವರು, ಕಾಂಗ್ರೆಸ್ ನಾಯಕ ಹರಿಪ್ರಸಾದ ಬಗ್ಗೆ ಹಗುರವಾಗಿ ಮಾತನಾಡಲು ಇಷ್ಟಪಡಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಸ್ವಾತಂತ್ರ್ಯ ಯೋಧರ ಬಗ್ಗೆ ತಿಳಿದುಕೊಂಡು ಹರಿಪ್ರಸಾದ ಮಾತನಾಡಲಿ. ಅಲ್ಲದೇ ದೇಶ ಇತಿಹಾಸ ಬಗ್ಗೆ ತಿಳಿದುಕೊಂಡು ಮಾತನಾಡುವುದು ಒಳ್ಳೆಯದು ಎಂದರು.

Latest Videos
Follow Us:
Download App:
  • android
  • ios