ಈಶ್ವರಪ್ಪನವರು ಇಂತಹ ಆರೋಪ ಮಾಡುವುದು ಹೊಸದಲ್ಲ. ಬಿಜೆಪಿಯವರು ಹಿಂದುತ್ವ ಆಧಾರದ ಮೇಲೆ ಚುನಾವಣೆ ಮಾಡುತ್ತಾರೆ. ಕಾಂಗ್ರೆಸ್ ಪಕ್ಷ ಎಲ್ಲ ಜನರನ್ನೂ ಒಟ್ಟಿಗೆ ತೆಗೆದುಕೊಂಡು ಕಾರ್ಯ ಮಾಡುತ್ತದೆ. ಕೆ.ಎಸ್‌.ಈಶ್ವರಪ್ಪನವರು ಹಿಂದುತ್ವವನ್ನು ಪ್ರತಿಪಾದನೆ ಮಾಡುತ್ತಾರೆ: ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ 

ಬೆಳಗಾವಿ(ಅ.03): ಆಡಳಿತ ಪಕ್ಷದಲ್ಲೇ ಇದ್ದು ಓರ್ವ ಮಂತ್ರಿಯಾಗಿ ಇಂತಹ ಹೇಳಿಕೆ ನೀಡುತ್ತಿದ್ದರು. ಸ್ವಪಕ್ಷದ ಸಿಎಂ ಮೇಲೆ ಆಪಾದನೆ ಮಾಡುತ್ತಿದ್ದರು. ಸದ್ಯ ವಿರೋಧ ಪಕ್ಷದಲ್ಲಿದ್ದಾರೆ. ಇದೇನು ಹೊಸದೇನಲ್ಲ ಎನ್ನುವ ಮೂಲಕ ಮಾಜಿ ಸಚಿವ ಈಶ್ವರಪ್ಪ ಅವರಿಗೆ ಅಥಣಿ ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ ತಿರುಗೇಟು ನೀಡಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಿವಮೊಗ್ಗದಲ್ಲಿ ಕಲ್ಲು ತೂರಾಟ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ಕುಮ್ಮಕ್ಕು ಎಂಬ ಈಶ್ವರಪ್ಪ ಹೇಳಿಕೆ ವಿಚಾರವಾಗಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪನವರು ಇಂತಹ ಆರೋಪ ಮಾಡುವುದು ಹೊಸದಲ್ಲ. ಬಿಜೆಪಿಯವರು ಹಿಂದುತ್ವ ಆಧಾರದ ಮೇಲೆ ಚುನಾವಣೆ ಮಾಡುತ್ತಾರೆ. ಕಾಂಗ್ರೆಸ್ ಪಕ್ಷ ಎಲ್ಲ ಜನರನ್ನೂ ಒಟ್ಟಿಗೆ ತೆಗೆದುಕೊಂಡು ಕಾರ್ಯ ಮಾಡುತ್ತದೆ. ಕೆ.ಎಸ್‌.ಈಶ್ವರಪ್ಪನವರು ಹಿಂದುತ್ವವನ್ನು ಪ್ರತಿಪಾದನೆ ಮಾಡುತ್ತಾರೆ ಎಂದು ಹೇಳಿದರು.

ಬಿಜೆಪಿ- ಜೆಡಿಎಸ್‌ ಮೈತ್ರಿ: ಯಡಿಯೂರಪ್ಪ ಜೈಲಿಗೆ ಹೋಗಲು ಕುಮಾರಸ್ವಾಮಿ ಕಾರಣ, ಲಕ್ಷ್ಮಣ ಸವದಿ

ಶಾಮನೂರು ಶಿವಶಂಕರಪ್ಪ ಲಿಂಗಾಯತರನ್ನು ಕಾಂಗ್ರೆಸ್ ಕಡೆಗಣಿಸಿದೆ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬುವುದು ಗೊತ್ತಿಲ್ಲ ಎಂದು ತಿಳಿಸಿದರು.