ನಮ್ಮ ಪಕ್ಷದ ಹಿರಿಯ ಮುಖಂಡರು ಮತ್ತೆ ತಮ್ಮ ಸ್ವಂತ ಮನೆಗೆ ಬಂದಿದ್ದಾರೆ. ಕಾಂಗ್ರೆಸ್‌ನಲ್ಲಿ ಅವರ ಶಕ್ತಿ ಬಳಸಿಕೊಳ್ಳುವ ಕೆಲಸ ಮಾಡಲಿಲ್ಲ. ಹನುಮಂತಪ್ಪ ಅವರ ದೇಹ ಕಾಂಗ್ರೆಸ್‌ನಲ್ಲಿತ್ತು, ಮನಸ್ಸು ಜೆಡಿಎಸ್‌ನಲ್ಲಿ ಇತ್ತು. ಕಾಂಗ್ರೆಸ್‌ ನಡವಳಿಕೆಯಿಂದ ಬೇಸತ್ತು ಜೆಡಿಎಸ್‌ಗೆ ಬಂದಿದ್ದಾರೆ. ಅವರಿಗೆ ಜೆಡಿಎಸ್‌ನಲ್ಲಿ ರಾಜ್ಯಮಟ್ಟದಲ್ಲಿ ಸ್ಥಾನಮಾನ ನೀಡಲಾಗಿದೆ: ಕುಮಾರಸ್ವಾಮಿ

ಬೆಂಗಳೂರು(ಏ.27): ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್‌ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಮ್ಮುಖದಲ್ಲಿ ಮಾಜಿ ಸಚಿವ ಆಲ್ಕೋಡ್‌ ಹನುಮಂತಪ್ಪ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದು, ಪಕ್ಷದ ಶಾಲು ಹೊದಿಸಿ ಬರಮಾಡಿಕೊಳ್ಳಲಾಯಿತು. ಮಂಗಳವಾರ ಆಲ್ಕೋಡ್‌ ಹನುಮಂತಪ್ಪ ಪಕ್ಷಕ್ಕೆ ಬರುತ್ತಿದ್ದಂತೆ ಜೆಡಿಎಸ್‌ನ ನೂತನ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಈ ವೇಳೆ ಮಾತನಾಡಿದ ಕುಮಾರಸ್ವಾಮಿ, ನಮ್ಮ ಪಕ್ಷದ ಹಿರಿಯ ಮುಖಂಡರು ಮತ್ತೆ ತಮ್ಮ ಸ್ವಂತ ಮನೆಗೆ ಬಂದಿದ್ದಾರೆ. ಕಾಂಗ್ರೆಸ್‌ನಲ್ಲಿ ಅವರ ಶಕ್ತಿ ಬಳಸಿಕೊಳ್ಳುವ ಕೆಲಸ ಮಾಡಲಿಲ್ಲ. ಹನುಮಂತಪ್ಪ ಅವರ ದೇಹ ಕಾಂಗ್ರೆಸ್‌ನಲ್ಲಿತ್ತು, ಮನಸ್ಸು ಜೆಡಿಎಸ್‌ನಲ್ಲಿ ಇತ್ತು. ಕಾಂಗ್ರೆಸ್‌ ನಡವಳಿಕೆಯಿಂದ ಬೇಸತ್ತು ಜೆಡಿಎಸ್‌ಗೆ ಬಂದಿದ್ದಾರೆ. ಅವರಿಗೆ ಜೆಡಿಎಸ್‌ನಲ್ಲಿ ರಾಜ್ಯಮಟ್ಟದಲ್ಲಿ ಸ್ಥಾನಮಾನ ನೀಡಲಾಗಿದೆ. ಇವರೊಂದಿಗೆ ಉತ್ತರ ಕರ್ನಾಟಕದ ಭಾಗದ ಹಲವು ಜನ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಹನುಮಂತಪ್ಪ ಅವರ ಅನುಭವ ಜೆಡಿಎಸ್‌ಗೆ ಉಪಯೋಗವಾಗಲಿದೆ ಎಂದು ಹೇಳಿದರು.

ಕಾಂಗ್ರೆಸ್‌- ಜೆಡಿಎಸ್‌ ಒಳ ಒಪ್ಪಂದದಿಂದ ಬಿಜೆಪಿ ಮಣಿಸಲು ಅಸಾಧ್ಯ: ಎಸ್‌.ಟಿ.ಸೋಮಶೇಖರ್‌

ಬುಧವಾರ ತುಮಕೂರಿನಲ್ಲಿಯೂ ಸಹ ಪಕ್ಷ ಸೇರ್ಪಡೆ ಕಾರ್ಯಕ್ರಮ ಇದೆ. ಅಲ್ಲಿ 11 ಕ್ಷೇತ್ರದಲ್ಲಿ ಜೆಡಿಎಸ್‌ ಗೆಲ್ಲುವ ನಂಬಿಕೆ ಇದೆ. ಈ ಬಾರಿ ಜೆಡಿಎಸ್‌ ಪಕ್ಷವು ಕಾಂಗ್ರೆಸ್‌, ಬಿಜೆಪಿಗಿಂತ ಹೆಚ್ಚು ಸ್ಥಾನ ಗೆಲ್ಲಲಿದೆ. 123 ಕ್ಷೇತ್ರಗಳ ಗುರಿಯನ್ನು ನಾವು ಮುಟ್ಟುತ್ತೇವೆ. ರಾಷ್ಟ್ರೀಯ ಪಕ್ಷಗಳಿಗೆ ಹಣಬಲ ಇದೆ. ಇಂದು ನಮಗೂ ಹಣಬಲ ಇದ್ದರೆ 140 ಸ್ಥಾನ ಗೆಲ್ಲುತ್ತೇವೆ ಎಂದು ಘೋಷಣೆ ಮಾಡುತ್ತಿದ್ದೆ. ಈಗ ನನಗೆ ನಂಬಿಕೆ ಇದೆ, 123 ಸ್ಥಾನ ಗೆಲ್ಲುತ್ತೇವೆ ಎಂದರು.