ಬಿಜೆಪೆ ತೊರೆದು ಮತ್ತೆ ಕಾಂಗ್ರೆಸ್‌ಗೆ ಡಾ.ಸುಧಾಕರ್ ಸೇರ್ತಾರಾ?
ಡಾ.ಕೆ ಸುಧಾಕರ್ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡ ನಂತರ ಇದೀಗ ಲೋಕಸಭಾ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ರನ್ನು ಭೇಟಿಯಾದ ಬಳಿಕ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಚುರುಕುಗೊಳಿಸಿದ್ದಾರೆ.
ಚಿಕ್ಕಬಳ್ಳಾಪುರ(ಫೆ.23): ಪ್ರಧಾನಿ ಮೋದಿ ಅವರ ನಾಯಕತ್ವ ಹಾಗೂ ಬಿಜೆಪಿ ರಾಷ್ಟ್ರೀಯತೆ ತತ್ವ, ಸಿದ್ಧಾಂತಗಳನ್ನು ನಂಬಿ ನಾನು ಬಿಜೆಪಿ ಸೇರಿದ್ದೇನೆ. ಹಾಗಾಗಿ ಬಿಜೆಪಿ ತೊರೆಯುವ ಯೋಚನೆ ಇಲ್ಲ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಮೂಲಕ ತಾವು ಕಾಂಗ್ರೆಸ್ ಸೇರುವ ಅಂತೆ ಕಂತೆಗಳಿಗೆ ತೆರೆ ಎಳೆದಿದ್ದಾರೆ.
ಮಾಜಿ ಸಚಿವ ಡಾ.ಕೆ ಸುಧಾಕರ್ ಕಾಂಗ್ರೆಸ್‌ಗೆ ವಾಪಸ್ ಆಗಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿರುವ ಕುರಿತು ಡಾ.ಸುಧಾಕರ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, ಈಗ ಬಿಜೆಪಿ ತೊರೆಯುವ ಯೋಚನೆಯಾಗಲಿ, ಉದ್ದೇಶವಾಗಲಿ ಅಥವಾ ಅವಶ್ಯಕತೆಯಾಗಲಿ ನನಗಿಲ್ಲ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದಿಂದ ಬಯಲುಸೀಮೆಗೆ ವಂಚನೆ: ಮಾಜಿ ಸಚಿವ ಡಾ.ಕೆ.ಸುಧಾಕರ್
ಡಾ.ಕೆ ಸುಧಾಕರ್ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡ ನಂತರ ಇದೀಗ ಲೋಕಸಭಾ ಅಖಾಡಕ್ಕಿಳಿಯಲು ಸಜ್ಜಾಗಿದ್ದಾರೆ. ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ರನ್ನು ಭೇಟಿಯಾದ ಬಳಿಕ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಚುರುಕುಗೊಳಿಸಿದ್ದಾರೆ. ಇದರ ಮಧ್ಯೆ ಅವರು ಕಾಂಗ್ರೆಸ್‌ಗೆ ವಾಪಸ್ ಆಗುತ್ತಾರೆನ್ನುವ ಸುದ್ದಿಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ನೀಡಿದ್ದಾರೆ.