Asianet Suvarna News Asianet Suvarna News

ಬಿಜೆಪಿಯಲ್ಲಿ ಪಕ್ಷ ಕಟ್ಟುವವರೇ ಇಲ್ಲ, ರಾಷ್ಟ್ರೀಯ ಪಕ್ಷಕ್ಕೆ ಈ ಸ್ಥಿತಿ ಬರಬಾರದಿತ್ತು: ಶೆಟ್ಟರ್‌

ನೂತನ ಸಂಸತ್‌ ಭವನ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿಯನ್ನು ಆಹ್ವಾನಿಸಬೇಕಿತ್ತು. ಆದರೆ, ಇದು ನಡೆಯದಿರುವುದು ದುರ್ದೈವದ ಸಂಗತಿ: ಜಗದೀಶ ಶೆಟ್ಟರ್‌ 

Former Minister Jagadish Shettar Talks Over BJP grg
Author
First Published May 29, 2023, 1:00 AM IST

ಹುಬ್ಬಳ್ಳಿ(ಮೇ.29): ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತು ಹೋಗಿದ್ದು, ಈಗ ಬಿಜೆಪಿಯಲ್ಲಿ ಪಕ್ಷ ಕಟ್ಟುವವರೇ ಇಲ್ಲದಂತಾಗಿದೆ. ಒಂದು ರಾಷ್ಟ್ರೀಯ ಪಕ್ಷಕ್ಕೆ ಇಂತಹ ಸ್ಥಿತಿ ಬರಬಾರದಿತ್ತು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಬಿಜೆಪಿ ಈ ಪರಿಸ್ಥಿತಿಗೆ ಬರಲು ಕಾರಣರಾದವರು ಈಗ ಎಲ್ಲಿದ್ದಾರೆ?. ನಾನು ಚುನಾವಣೆಯ ವೇಳೆ ಕೇಳಿದ್ದ ಪ್ರಶ್ನೆಗಳಿಗೆ ಈವರೆಗೂ ಉತ್ತರ ನೀಡಿಲ್ಲ. ನನ್ನ ವಿರುದ್ಧ ಏನೆಲ್ಲ ಮಾತನಾಡಿದವರು ಈಗ ತಮ್ಮ ಪಕ್ಷ ಈ ಸ್ಥಿತಿಗೆ ಬಂದಿದ್ದರೂ ಬರದೇ ನಾಪತ್ತೆಯಾಗಿದ್ದಾರೆ. ಬಿಜೆಪಿಗೆ ವಿರೋಧ ಪಕ್ಷದ ನಾಯಕರನ್ನು ಆರಿಸಲೂ ಯಾರಿಲ್ಲದಂತಾಗಿದೆ. ಒಂದು ರಾಷ್ಟ್ರೀಯ ಪಕ್ಷಕ್ಕೆ ಈ ಸ್ಥಿತಿ ಬರಬಾರದಿತ್ತು ಎಂದು ಪರೋಕ್ಷವಾಗಿ ಬಿ.ಎಲ್‌. ಸಂತೋಷ ವಿರುದ್ಧ ಕಿಡಿಕಾರಿದರು.

ರಾಮಲಿಂಗಾರೆಡ್ಡಿಗೆ ಒಂದು ಖಾತೆ ತಗೊಂಡ್ರೆ ಮತ್ತೊಂದು ಫ್ರೀ: ಆಪ್ತನಿಗೆ ಆಫರ್‌ ಕೊಟ್ಟ ಡಿ.ಕೆ.ಶಿವಕುಮಾರ್

ಕಾಂಗ್ರೆಸ್‌ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲು ಸ್ವಲ್ಪ ಸಮಯ ಬೇಕಾಗುತ್ತದೆ, ಇದು ಬಿಜೆಪಿಯವರಿಗೂ ಗೊತ್ತು. ಆದರೆ, ವಿರೋಧ ಪಕ್ಷ ಇದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವುದು ಹಾಸ್ಯಾಸ್ಪದ ಎಂದರು.

ರಾಷ್ಟ್ರಪತಿಗೆ ಆಹ್ವಾನ ನೀಡಬೇಕಿತ್ತು:

ಭಾನುವಾರ ನಡೆದ ನೂತನ ಸಂಸತ್‌ ಭವನ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿಯನ್ನು ಆಹ್ವಾನಿಸಬೇಕಿತ್ತು. ಆದರೆ, ಇದು ನಡೆಯದಿರುವುದು ದುರ್ದೈವದ ಸಂಗತಿ. ಈ ಹಿಂದೆ ನನ್ನ ಅಧಿಕಾರದ ಅವಧಿಯಲ್ಲಿ ಸುವರ್ಣಸೌಧ ಉದ್ಘಾಟನೆ ಮಾಡುವ ಅವಕಾಶ ಬಂದಿತ್ತು. ಆ ವೇಳೆ ನಾನು ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರಿಗೆ ಆಹ್ವಾನ ನೀಡಿದ್ದೆ. ರಾಷ್ಟ್ರಪತಿಗೆ ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡದಿರುವುದು ನೋವಿನ ಸಂಗತಿ ಎಂದರು.

Follow Us:
Download App:
  • android
  • ios