ಬಳ್ಳಾರಿ ಪಾದಯಾತ್ರೆ ನಡೆದ್ರೆ ಬಿಜೆಪಿ ಇಬ್ಭಾಗ: ಈಶ್ವರಪ್ಪ

ಬಿಜೆಪಿ ರಾಜ್ಯಾಧ್ಯಕ್ಷರನ್ನು ಬಿಟ್ಟು ಈ ರೀತಿಯ ಸಭೆಗಳು ನಡೆಯುತ್ತಿವೆ. ಹೀಗೆ ಸಭೆಗಳನ್ನು ನಡೆಸುತ್ತ ಹೋದರೆ ಬಿಜೆಪಿ ಇಬ್ಭಾಗವಾಗುವ ಸಾಧ್ಯತೆ ಇದೆ. ಈ ಪಾದಯಾತ್ರೆ ನಡೆದರೆ ರಾಜ್ಯದ ಎಲ್ಲಾ ತಾಲೂಕಿನಲ್ಲೂ ಪಕ್ಷ ಇಬ್ಭಾಗವಾಗುವ ಸಾಧ್ಯತೆಯಿದೆ ಎಂದು ತಿಳಿಸಿದ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ 
 

former minister ks eshwarappa talks over karnataka bjp  grg

ಶಿವಮೊಗ್ಗ(ಆ.13):  ಬಿಜೆಪಿಯ ಅಸಮಾಧಾನಿತ 12 ಹಿರಿಯ ಮುಖಂಡರು ಸಭೆ ನಡೆಸಿ ಪಾದಯಾತ್ರೆಗೆ ನಿರ್ಧರಿಸಿದ್ದು, ತಕ್ಷಣವೇ ಕೇಂದ್ರ ನಾಯಕರು ಮಧ್ಯ ಪ್ರವೇಶಿಸಬೇಕು. ಇಲ್ಲದಿದ್ದರೆ ಪಕ್ಷ ಇಬ್ಭಾಗವಾಗುವ ಅಪಾಯವಿದೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಆಗ್ರಹಿಸಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷರನ್ನು ಬಿಟ್ಟು ಈ ರೀತಿಯ ಸಭೆಗಳು ನಡೆಯುತ್ತಿವೆ. ಹೀಗೆ ಸಭೆಗಳನ್ನು ನಡೆಸುತ್ತ ಹೋದರೆ ಬಿಜೆಪಿ ಇಬ್ಭಾಗವಾಗುವ ಸಾಧ್ಯತೆ ಇದೆ. ಈ ಪಾದಯಾತ್ರೆ ನಡೆದರೆ ರಾಜ್ಯದ ಎಲ್ಲಾ ತಾಲೂಕಿನಲ್ಲೂ ಪಕ್ಷ ಇಬ್ಭಾಗವಾಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ಸಂಸದ ರಾಘವೇಂದ್ರ ಎಷ್ಟು ಪೆದ್ದ ಅಂದರೆ ಯಾರಿಗೆ ಅರ್ಜಿ ಕೊಡಬೇಕು ಎಂದು ಗೊತ್ತಿಲ್ಲ: ಸಚಿವ ಮಧು ಬಂಗಾರಪ್ಪ

ಸಭೆಯಲ್ಲಿ ಚರ್ಚಿಸಿರುವ ವಿಷಯದ ಬಗ್ಗೆ ಬಹಿರಂಗವಾಗಿ ಯಾರೂ ಏನೂ ಹೇಳುತ್ತಿಲ್ಲ. ಇವತ್ತು 12 ಜನರಿರಬಹುದು. ಪಕ್ಷದ ವರಿಷ್ಟರು ಇದನ್ನು ನಿರ್ಲಕ್ಷ್ಯ ಮಾಡಿದರೆ ರಾಜ್ಯದಲ್ಲಿ ಬಿಜೆಪಿ ಕುಂಠಿತವಾಗುತ್ತ ಹೋಗುತ್ತದೆ. ಕೂಡಲೇ ಕೇಂದ್ರದ ನಾಯಕರು ಈ ಬಗ್ಗೆ ಗಮನ ಹರಿಸಿ ಪಾದಯಾತ್ರೆಗೆ ಹೊರಟಿರುವ ಬಿಜೆಪಿ ನಾಯಕರನ್ನು ಕರೆದು, ಅವರ ನೋವುಗಳನ್ನು ಆಲಿಸಿ ಅಗತ್ಯ ಮುನ್ಸೂಚನೆ ನೀಡಬೇಕು ಎಂದು ಆಗ್ರಹಿಸಿದರು

Latest Videos
Follow Us:
Download App:
  • android
  • ios