ರಾಜ್ಯಸಭಾ ಚುನಾವಣೆ: ಬಿಜೆಪಿ 3ನೇ ಅಭ್ಯರ್ಥಿ ಗೆಲುವಿಗೆ ಸಿದ್ದರಾಮಯ್ಯ ಕಾರಣ, ಈಶ್ವರಪ್ಪ

*  ರಾಜ್ಯಸಭಾ ಚುನಾವಣೆ ವಿಜೇತ ಮೂವರಿಗೂ, ಸಿದ್ದರಾಮಯ್ಯರಿಗೂ ಅಭಿನಂದನೆ
*  ಕಾನೂನು ಮೀರಿ ಹಿಜಾಬ್‌ ಬೆಂಬಲಿಸಿದ ಸಿದ್ದರಾಮಯ್ಯ ಮಹಾಮೋಸಗಾರ ಹಾಗೂ ದೇಶದ್ರೋಹಿ
*  ಸಿದ್ದರಾಮಯ್ಯ ಯಾರಿಗೂ ಒಳ್ಳೆಯದನ್ನು ಮಾಡಿಲ್ಲ
 

Former Minister KS Eshwarappa Taunt to Siddaramaiah grg

ಶಿವಮೊಗ್ಗ(ಜೂ.12): ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲುವಿಗೆ ಸಿದ್ದರಾಮಯ್ಯ ಕಾರಣ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಟಾಂಗ್‌ ನೀಡಿದರು.ಶನಿವಾರ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯಸಭಾ ಚುನಾವಣೆಯಲ್ಲಿ ಪಕ್ಷದಿಂದ ಗೆದ್ದ 3 ಅಭ್ಯರ್ಥಿಗಳಿಗೆ ಅಭಿನಂದಿಸುವೆ. ಅದರಂತೆ ಪಕ್ಷದ 3ನೇ ಅಭ್ಯರ್ಥಿ ಗೆಲ್ಲಲು ಕಾರಣರಾಗಿರುವ ಸಿದ್ದರಾಮಯ್ಯ ಅವರಿಗೂ ಅಭಿನಂದಿಸುತ್ತೇನೆ ಎಂದು ವ್ಯಂಗ್ಯವಾಡಿದರು.

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ 3ನೇ ಅಭ್ಯರ್ಥಿ ಲೆಹರ್‌ ಸಿಂಗ್‌ ಗೆಲ್ಲಲು, ಕಾಂಗ್ರೆಸ್‌ ಪಕ್ಷದ ಮುಸ್ಲಿಂ ಅಭ್ಯರ್ಥಿ ಸೋಲಲು ಹಾಗೂ ಜೆಡಿಎಸ್‌ ಅಭ್ಯರ್ಥಿ ಸೋಲಲು ವಿಪಕ್ಷ ನಾಯಕ ಸಿದ್ದರಾಮಯ್ಯ ನೇರ ಕಾರಣ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯ ಘಟಕದ ಬೆಂಬಲ ಜೊತೆಗೆ ಮೋದಿ ಅವರ ರಾಷ್ಟ್ರಭಕ್ತಿ ಮತ್ತು ಸ್ಫೂರ್ತಿ ಬೆಂಬಲಕ್ಕೆ ನಿಂತಿದೆ. ಕಾಂಗ್ರೆಸ್‌ ಪಕ್ಷದ ಮುಸ್ಲಿಂ ಅಭ್ಯರ್ಥಿ ಮನ್ಸೂರ್‌ ಅವರ ಸೋಲಿಗೆ ಕಾರಣರಾಗಿರುವ ಸಿದ್ದರಾಮಯ್ಯ ಮುಸ್ಲಿಂ ಸಮುದಾಯಕ್ಕೆ ದ್ರೋಹ ಬಗೆದಿರುವುದನ್ನು ಅ ಸಮುದಾಯ ಅರ್ಥ ಮಾಡಿಕೊಳ್ಳಬೇಕು ಎಂದು ಕುಟುಕಿದರು.

ಪಠ್ಯ ವಿಚಾರದಲ್ಲಿ ವಿಪಕ್ಷಗಳಿಂದ ಸುಳ್ಳಿನ ಸರಮಾಲೆ: ಸಚಿವ ಕೋಟ

ಬಿಜೆಪಿ ಕೋಮುಶಕ್ತಿ ಎಂದು ಹೇಳುವುದನ್ನು ಕಾಂಗ್ರೆಸ್‌ ಸುಳ್ಳು ಮಾಡಿದೆ. ಮುಸ್ಲಿಂ ಅಭ್ಯರ್ಥಿ ಸೋಲಿಗೆ ಮಾತ್ರವಲ್ಲದೇ, ಜೆಡಿಎಸ್‌ ಅಭ್ಯರ್ಥಿ ಸೋಲಿಗೂ ಕಾರಣವಾಗಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಿಲುವಿನಿಂದ ಜಾತ್ಯತೀತ ಶಕ್ತಿಗೆ ಸೋಲುಂಟಾಗಿದೆ. ಪಕ್ಷದ ಸಂಘಟನಾತ್ಮಕ ಶಕ್ತಿಯಿಂದ ಪಕ್ಷದ 3ನೇ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಕಳೆದ ಬಾರಿ ಚುನಾವಣೆಯಲ್ಲಿ ಪೂರ್ಣ ಬಹುಮತ ಮತದಾರರು ನೀಡದೇ ಇದ್ದಿದ್ದರಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಮುಂಬರುವ ಚುನಾವಣೆಯಲ್ಲಿ ಪೂರ್ಣ ಬಹುಮತ ನೀಡಿದರೆ ರಾಜ್ಯ ಅಭಿವೃದ್ಧಿ ಪಥದತ್ತ ಸಾಗಲಿದೆ ಎಂದು ಹೇಳಿದರು.

ಸಿದ್ದರಾಮಯ್ಯ ಯಾರಿಗೂ ಒಳ್ಳೆಯದನ್ನು ಮಾಡಿಲ್ಲ. ಕುರುಬ ಸಮಾಜದ ನಾಯಕರಾದ ಎಚ್‌.ವಿಶ್ವನಾಥ್‌, ವೈ.ಟಿ.ಮೇಟಿ, ಎಚ್‌.ಎಂ.ರೇವಣ್ಣ, ಎಂಟಿಬಿ ನಾಗರಾಜ್‌, ಭೈರತಿ ಬಸವರಾಜ್‌ ಅವರನ್ನು ಕೈ ಬಿಟ್ಟರು. ಬಾದಾಮಿ ಕ್ಷೇತ್ರವನ್ನು ಬಿಟ್ಟುಕೊಟ್ಟಚಿಮ್ಮನೆ ಕಟ್ಟಿಅವರನ್ನೇ ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು.

ಬೆದರಿಕೆ ಸಂದೇಶ: ಆರ್‌ಎಸ್‌ಎಸ್‌ ಕಚೇರಿಗಳಿಗೆ ಪೊಲೀಸ್‌ ರಕ್ಷಣೆ: ಗೃಹ ಸಚಿವ ಜ್ಞಾನೇಂದ್ರ

ಪತ್ರಿಕಾಗೋಷ್ಠಿಯಲ್ಲಿ ಉಪ ಮೇಯರ್‌ ಶಂಕರ್‌ ಗನ್ನಿ, ಪಾಲಿಕೆ ಸದಸ್ಯರಾದ ಎಸ್‌.ಎನ್‌.ಚನ್ನಬಸಪ್ಪ, ಎಸ್‌.ಜ್ಞಾನೇಶ್ವರ್‌, ಧೀರರಾಜ್‌ ಹೊನ್ನವಿಲೆ, ಪ್ರಮುಖರಾದ ಕೆ.ವಿ.ಅಣ್ಣಪ್ಪ, ಸುಧೀಂದ್ರ ಕಟ್ಟಿ, ಬಾಲು ಉಪಸ್ಥಿತರಿದ್ದರು.

ಸಿದ್ದರಾಮಯ್ಯ ಯಾರ ಪರ ಇರುತ್ತಾರೆ ಎಂಬುದು ಗೊತ್ತಾಗುವುದಿಲ್ಲ. ವೀರಶೈವ ಮತ್ತು ಲಿಂಗಾಯತ ಸಮುದಾಯದವರನ್ನು ಒಡೆದರು. ಗೋ ಹತ್ಯೆ ನಿಷೇಧಕ್ಕೆ ವಿರೋಧಿಸಿದರು. ಕಾನೂನು ಮೀರಿ ಹಿಜಾಬ್‌ ಬೆಂಬಲಿಸಿದ ಅವರು ಮಹಾಮೋಸಗಾರ ಹಾಗೂ ದೇಶದ್ರೋಹಿ ಅಂತ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದ್ದಾರೆ. 

Latest Videos
Follow Us:
Download App:
  • android
  • ios