Asianet Suvarna News Asianet Suvarna News

ಕಾಂಗ್ರೆಸ್ ಆಡಳಿತದಲ್ಲಿ ರೈತರು ಭಿಕ್ಷೆ ಬೇಡುವ ದುಸ್ಥಿತಿಗೆ: ಶ್ರೀಮಂತ ಪಾಟೀಲ

ಮಳೆ ಕೊರತೆಯಿಂದ ಕಂಗಾಲಾಗಿರುವ ರೈತರಿಗೆ ದಿನಕ್ಕೆ ಒಂದು ಗಂಟೆಯೂ ಕೂಡ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಇದರ ಪರಿಣಾಮ ಕಷ್ಟಪಟ್ಟು ಗುಂಪು ಏತ ನೀರಾವರಿ ಯೋಜನೆಗಳ ಮೂಲಕ ಕೃಷ್ಣಾ ನದಿಯಿಂದ ನೀರು ಪೂರೈಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಕಾಗವಾಡ ಕ್ಷೇತ್ರದ ರೈತರು ಆತ್ಮಹತ್ಯೆ ಮಾಡಿಕೊಂಡರೂ ಕೂಡ ಆಶ್ಚರ್ಯ ಪಡಬೇಕಿಲ್ಲ: ಮಾಜಿ ಸಚಿವ ಶ್ರೀಮಂತ ಪಾಟೀಲ 

Former Minister Shrimant Patil slams Karnataka Congress Government grg
Author
First Published Oct 15, 2023, 8:30 AM IST

ಕಾಗವಾಡ(ಅ.15):  ಕಾಂಗ್ರೆಸ್ ಆಡಳಿತದ 4 ತಿಂಗಳ ಅವಧಿಯಲ್ಲಿ ರಾಜ್ಯದ ರೈತರು ಭಿಕ್ಷೆ ಬೇಡುವ ದುಸ್ಥಿತಿ ಬಂದಿದ್ದು, ರೈತರ ಉಳಿವಿಗಾಗಿ ಅ.16 ರಂದು ಬೆಳಗ್ಗೆ 10 ಗಂಟೆಗೆ ಕಾಗವಾಡ ತಹಸೀಲ್ದಾರ್‌ ಕಚೇರಿ ಆವರಣದಲ್ಲಿ ಸಾವಿರಾರು ರೈತರೊಂದಿಗೆ ಹೋರಾಟ ಮಾಡಿ ತಹಸೀಲ್ದಾರ್‌ರ ಮೂಲಕ ಮನವಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಮಾಜಿ ಸಚಿವ ಶ್ರೀಮಂತ ಪಾಟೀಲ ಹೇಳಿದರು.

ಅಥಣಿ ಶುಗರ್ಸ್‌ ಆವರಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆ ಕೊರತೆಯಿಂದ ಕಂಗಾಲಾಗಿರುವ ರೈತರಿಗೆ ದಿನಕ್ಕೆ ಒಂದು ಗಂಟೆಯೂ ಕೂಡ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಇದರ ಪರಿಣಾಮ ಕಷ್ಟಪಟ್ಟು ಗುಂಪು ಏತ ನೀರಾವರಿ ಯೋಜನೆಗಳ ಮೂಲಕ ಕೃಷ್ಣಾ ನದಿಯಿಂದ ನೀರು ಪೂರೈಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಕಾಗವಾಡ ಕ್ಷೇತ್ರದ ರೈತರು ಆತ್ಮಹತ್ಯೆ ಮಾಡಿಕೊಂಡರೂ ಕೂಡ ಆಶ್ಚರ್ಯ ಪಡಬೇಕಿಲ್ಲ. ಕಾಗವಾಡ ಕ್ಷೇತ್ರದ ರೈತರು ಈ ಸರ್ಲಾರದ ಈ ನಡೆಗೆ ಬೇಸತ್ತು ಉದ್ಯೋಗ ಅರಸಿ ಗುಳೆ ಹೊರಟಿದ್ದು, ಈ ಸಂಕಷ್ಟ ಸ್ಥಿತಿಯಿಂದ ಹೊರ ಬರಲು ಕನಿಷ್ಠ 7 ತಾಸು ನಿರಂತರ ವಿದ್ಯುತ್ ಪೂರೈಸಬೇಕು ಎಂದು ಆಗ್ರಹಿಸಿದರು.

ಪ್ರಧಾನಿಯೊಂದಿಗೆ ಮಾತನಾಡುವ ಶಕ್ತಿ ಕುಮಾರಸ್ವಾಮಿಗೆ ಮಾತ್ರ ಇರೋದು: ಜಿ.ಟಿ.ದೇವೆಗೌಡ

ಬರಗಾಲದ ಈ ಸ್ಥಿತಿಗೆ ಬೇಸತ್ತು ಕಾಗವಾಡ ಮತಕ್ಷೇತ್ರದ ಸಂಬರಗಿ ಗ್ರಾಮದ ರೈತನೋರ್ವ ಈಗಾಗಲೇ ಆತ್ಮಹತ್ಯೆಗೆ ಶರಣಾಗಿದ್ದು, ಇದೇ ರೀತಿ ಮುಂದುವರೆದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುವುದು ನಿಶ್ಚಿತ. ಕಾಗವಾಡ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನನ್ನ ಅಧಿಕಾರವಧಿಯಲ್ಲಿ ಅನುಷ್ಠಾನಗೊಂಡ ಕೇಂದ್ರದ ಜಲಜೀವನ ಸೇರಿದಂತೆ ಅನೇಕ ಯೋಜನೆಗಳ ಮೂಲಕ ನೂರಾರು ಜನಪರ ಮತ್ತು ಅಭಿವೃದ್ಧಿ ಪರ ಯೋಜನೆಗಳು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸ್ಥಗಿತಗೊಂಡ ಪರಿಣಾಮ ಕಾಗವಾಡ ಕ್ಷೇತ್ರದ ಅಭಿವೃದ್ಧಿಗೆ ಹಿನ್ನಡೆ ಉಂಟಾಗುತ್ತಿದೆ ಎಂದರು.

ರಾಜ್ಯ ಸರ್ಕಾರ ವಿದ್ಯುತ್‌ಗೆ ಹಣ ಕಟ್ಟದೆ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ: ಜಿ.ಟಿ.ದೇವೇಗೌಡ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂತಿಮ ಹಂತ ತಲುಪಿದ್ದ ಖಿಳೇಗಾಂವ ಬಸವೇಶ್ವರ ಯೋಜನೆಯ ಕಾರ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಂಪೂರ್ಣ ಸ್ಥಗಿತಗೊಂಡಿದ್ದು, ಇದರಿಂದ ಕಾಗವಾಡ ಕ್ಷೇತ್ರದ 70 ಸಾವಿರ ಎಕರೆ ಭೂಮಿ ನೀರಾವರಿ ಯಿಂದ ವಂಚಿತಗೊಂಡಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಧುರೀಣರಾದ ಮಹಾದೇವ ಕೋರೆ, ಈಶ್ವರ ಕುಂಬಾರೆ, ಉತ್ಕರ್ಷ ಪಾಟೀಲ, ಅಪ್ಪಣ್ಣ ಮಗದುಮ್, ರಾಕೇಶ ಪಾಟೀಲ, ರಾಜು ಚವ್ಹಾಣ, ಶಿವಾನಂದ ಮೆಣಸಿ, ವಿಠ್ಠಲ ಮಾಳಿ ಇದ್ದರು.
ಬರಗಾಲದ ಈ ಸ್ಥಿತಿಗೆ ಬೇಸತ್ತು ಕಾಗವಾಡ ಮತಕ್ಷೇತ್ರದ ಸಂಬರಗಿ ಗ್ರಾಮದ ರೈತನೋರ್ವ ಈಗಾಗಲೇ ಆತ್ಮಹತ್ಯೆಗೆ ಶರಣಾಗಿದ್ದು, ಇದೇ ರೀತಿ ಮುಂದುವರೆದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುವುದು ನಿಶ್ಚಿತ ಎಂದು ಮಾಜಿ ಸಚಿವ ಶ್ರೀಮಂತ ಪಾಟೀಲ ತಿಳಿಸಿದ್ದಾರೆ.  

Follow Us:
Download App:
  • android
  • ios