Chitradurga: ಖರ್ಗೆ ಗೆಲವು ಕನ್ನಡಿಗರ ಸ್ವಾಭಿಮಾನದ ಪ್ರಶ್ನೆ: ಮಾಜಿ ಸಚಿವ ಆಂಜನೇಯ

ಹಿರಿಯ ನಾಯಕ ಮಲ್ಲಿಕಾರ್ಜುನ್‌ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದ್ದು, ಕನ್ನಡಿಗರ ಸ್ವಾಭಿಮಾನದ ಪ್ರಶ್ನೆಯಾಗಿದೆ ಎಂದು ಮಾಜಿ ಸಚಿವ ಹೆಚ್‌.ಆಂಜನೇಯ ಹೇಳಿದ್ದಾರೆ.

Former Minster H Anjaneya Speaks About Congress Leader Mallikarjun Kharge In Chitradurga gvd

ಚಿತ್ರದುರ್ಗ (ಅ.16): ಹಿರಿಯ ನಾಯಕ ಮಲ್ಲಿಕಾರ್ಜುನ್‌ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಗೆಲುವು ಸಾಧಿಸುವುದು ಅನಿವಾರ್ಯವಾಗಿದ್ದು, ಕನ್ನಡಿಗರ ಸ್ವಾಭಿಮಾನದ ಪ್ರಶ್ನೆಯಾಗಿದೆ ಎಂದು ಮಾಜಿ ಸಚಿವ ಹೆಚ್‌.ಆಂಜನೇಯ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್‌.ನಿಜಲಿಂಗಪ್ಪ ಬಳಿಕ ಎಐಸಿಸಿ ಅಧ್ಯಕ್ಷರಾಗುವ ಸುವರ್ಣ ಅವಕಾಶ ಕನ್ನಡಿಗರ ಪಾಲಿಗೆ ಬಂದಿದ್ದು, ಇದನ್ನು ಕೈತಪ್ಪದಂತೆ ಕೆಪಿಸಿಸಿ ಸದಸ್ಯರು ಎಚ್ಚರಿಕೆ ವಹಿಸಬೇಕಿದೆ. ಹೈದ್ರಾಬಾದ್‌ ಕರ್ನಾಟಕದ ಅಭಿವೃದ್ಧಿಗೆ ಖರ್ಗೆ ಶ್ರಮಿಸಿದ್ದಾರೆ, 371 ಮೂಲಕ ವಿಶೇಷ ಸೌಲಭ್ಯ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. 

ಕಲಬುರಗಿಯಲ್ಲಿ ಬೃಹತ್‌ ಇಎಸ್‌ಐ ಆಸ್ಪತ್ರೆ ನಿರ್ಮಾಣ, ರಾಜ್ಯದ ಎಲ್ಲ ಭಾಗದಲ್ಲೂ ರೈತ, ಕಾರ್ಮಿಕರ ಹಿತದ ಪರ ಕೇಂದ್ರದ ಮೇಲೆ ಒತ್ತಡ ತಂದು ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಅವರ ಶ್ರಮವಿದೆ. ಇಂದಿರಾಗಾಂಧಿ, ರಾಜೀವ್‌ ಗಾಂಧಿ ಅವರೊಂದಿಗೆ ಉತ್ತಮ ಭಾಂದವ್ಯ ಹೊಂದಿದ್ದ ಖರ್ಗೆ, ಕಾಂಗ್ರೆಸ್‌ ಪಕ್ಷವನ್ನು ಬಲಿಷ್ಠಗೊಳಿಸುವಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದ್ದಾರೆ. ಅನುಭವಿ ಸಂಸದೀಯ ಪಟು, ಮುತ್ಸದ್ದಿ, ಹಿರಿಯ ನಾಯಕ ಖರ್ಗೆ ಅವರ ಪರವಾಗಿ ಕೆಪಿಸಿಸಿ ಸದಸ್ಯರು ಒಗ್ಗೂಡಿ .17ರಂದು ನಡೆಯಲಿರುವ ಚುನಾವಣೆಯಲ್ಲಿ ಮತ ಚಲಾಯಿಸುವ ಮೂಲಕ ದೇಶ ಹಾಗೂ ಪಕ್ಷದ ಹಿತ ಕಾಯಬೇಕು ಎಂದು ಆಂಜನೇಯ ಹೇಳಿಕೆಯಲ್ಲಿ ವಿನಂತಿಸಿದ್ದಾರೆ.

Chitradurga: ಕ್ರೀಡಾಪಟುಗಳಿಗೆ ಕೇಂದ್ರ, ರಾಜ್ಯ ಸರ್ಕಾರದಿಂದ ನೆರವು: ಶಾಸಕ ತಿಪ್ಪಾರೆಡ್ಡಿ

ಸಂತ್ರಸ್ತರಿಗೆ ಪರಿಹಾರಕ್ಕೆ ಆಗ್ರಹ: ತಾಲೂಕಿನಾದ್ಯಂತ ಸುರಿದ ಭಾರೀ ಮಳೆಗೆ ಸಾಕಷ್ಟುಜನ ಮನೆಗಳನ್ನು ಕಳೆದುಕೊಂಡು ಬೀದಿಪಾಲಾಗಿದ್ದಾರೆ. ಅವರೆಲ್ಲರಿಗೂ ಕೂಡಲೇ ಸರ್ಕಾರ ಕೂಡಲೇ ಪರಿಹಾರ ಒದಗಿಸಿಕೊಡಬೇಕು ಎಂದು ಮಾಜಿ ಸಚಿವ ಎಚ್‌. ಆಂಜನೇಯ ಆಗ್ರಹಿಸಿದರು. ತಾಲೂಕಿನ ಚಿತ್ರಹಳ್ಳಿ ಗ್ರಾಪಂ ವ್ಯಾಪ್ತಿಯ ಕೊಂಡಾಪುರ ಗ್ರಾಮಕ್ಕೆ ಭಾನುವಾರ ಭೇಟಿ ನೀಡಿ, ಮನೆ ಕುಸಿತದಿಂದ ಕಂಗಾಲಾಗಿದ್ದ ಸಂತ್ರಸ್ತರಾದ ಮಡಿವಾಳ ಓಂಕಾರಪ್ಪ, ಎಕೆ ಕಾಲೋನಿಯ ಉಮಕ್ಕ, ಸುಮಿತ್ರಮ್ಮ, ಕದ್ರಪ್ಪ, ಲಿಂಗರಾಜು, ಲಕ್ಷ್ಮೀದೇವಿ, ಕರಿಯಪ್ಪ ಹಾಗೂ ಪ್ರೇಮಕ್ಕ ಎಂಬುವವರಿಗೆ ಸಾಂತ್ವನ ಹೇಳಿ ಮಾತನಾಡಿದರು. 

Chitradurga Floods: ಅಬ್ಬರಿಸಿದ ಮಳೆ; ಅಜ್ಜಯ್ಯನಗುಡಿ ಕೆರೆ ಕೋಡಿ

ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಅಕ್ಷರಶಃ ಮನೆಗಳು ಕೊಚ್ಚಿ ಹೋಗಿವೆ. ತಾಲೂಕಿನ ಹಲವು ಗ್ರಾಮಗಳಲ್ಲೂ ಇದೇ ಪರಿಸ್ಥಿತಿ ಉಂಟಾಗಿದೆ. ಜನರು ಮನೆ ಕಳೆದುಕೊಂಡು ಬೀದಿ ಪಾಲಾಗಿದ್ದಾರೆ. ಇಷ್ಟಾದರು ಕೂಡ ಇಲ್ಲಿಯವರೆಗೆ ಯಾವ ಜನಪ್ರತಿನಿಧಿ ಹಾಗೂ ಅಧಿಕಾರಿ ಕೂಡ ಗ್ರಾಮಗಳಿಗೆ ಭೇಟಿ ನೀಡಿಲ್ಲ. ಕೂಡಲೇ ಜಿಲ್ಲಾಡಳಿತ ಇತ್ತ ಗಮನ ಹರಿಸಿ ಸಂತ್ರಸ್ತರಿಗೆ ಮನೆ ಕಟ್ಟಿಸಿಕೊಡುವ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು. ಇದಕ್ಕೂ ಮುನ್ನ ತಾಲೂಕಿನ ಚಿತ್ರಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಅವರು, ಇತ್ತೀಚೆಗೆ ಯುಪಿಎಸ್‌ ವಿದ್ಯುತ್‌ ಶಾಕ್‌ನಿಂದ ಮೃತಪಟ್ಟಶೃತಿ ಎಂಬುವವರ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಚಿತ್ರಹಳ್ಳಿ ಗ್ರಾಪಂ ಅಧ್ಯಕ್ಷ ಕಾಟಲಿಂಗಪ್ಪ, ಉಪಾಧ್ಯಕ್ಷೆ ನಿಂಗಮ್ಮ, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios