ಪುಲಿಕೇಶಿನಗರದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಲು ಸಜ್ಜಾಗಿದ್ದಾರೆ. ಈ ಹಿಂದೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ನಂತರ ಬಿಎಸ್‌ಪಿ ಸೇರಿ ಪರಾಭವಗೊಂಡಿದ್ದರು.
ಬೆಂಗಳೂರು (ಜೂ.18): ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರ(Pulikeshinagar Assembly Constituency)ದ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ(Akhanda Srinivasamurthy) ಅವರು ಜೆಡಿಎಸ್ ಪಕ್ಷ(JDS party) ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ.
ಅಪಾರ ಬೆಂಬಲಿಗರೊಂದಿಗೆ ಜೆಡಿಎಸ್ ಸೇರ್ಪಡೆ?
ಭಾನುವಾರ ನಗರದ ಟ್ಯಾನರಿ ರಸ್ತೆಯ ಪಿಳ್ಳಣ್ಣ ಗಾರ್ಡನ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ(HD Kumaraswamy) ಅವರ ಸಮ್ಮುಖದಲ್ಲಿ ಅಖಂಡ ಶ್ರೀನಿವಾಸ್ ಮೂರ್ತಿ ಅವರು ತಮ್ಮ ಬೆಂಬಲಗರೊಂದಿಗೆ ಜೆಡಿಎಸ್‌ಗೆ ಸೇರ್ಪಡೆಯಾಗಲಿದ್ದಾರೆ.
ನೆಲಮಂಗಲ ಕ್ಷೇತ್ರದ ಟಿಕೆಟ್ ಆಕಾಂಕ್ಷಿ
ಕೆಲ ದಿನಗಳ ಹಿಂದೆಯಷ್ಟೇ ಎಚ್.ಡಿ.ಕುಮಾರಸ್ವಾಮಿ ಅವರು ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಜೆಡಿಎಸ್ ಸೇರ್ಪಡೆಗೆ ಅಖಂಡ ಉತ್ಸುಕರಾಗಿರುವ ಬಗ್ಗೆ ತಿಳಿಸಿದ್ದರು. ಇದರ ಬೆನ್ನಲ್ಲೇ ಅಖಂಡ ಶ್ರೀನಿವಾಸಮೂರ್ತಿ ಅವರು ಜೆಡಿಎಸ್‌ಗೆ ಸೇರ್ಪಡೆಗೆ ಸಮಯ ನಿಗದಿಯಾಗಿದೆ. ಶ್ರೀನಿವಾಸಮೂರ್ತಿ ಅವರು ಪುಲಿಕೇಶಿನಗರ ಅಥವಾ ನೆಲಮಂಗಲ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಜೆಡಿಎಸ್‌ಗೆ ಮರು ಸೇರ್ಪಡೆ
ಜೆಡಿಎಸ್ ವರಿಷ್ಠರ ತೀರ್ಮಾನದಂತೆ ಅಂತಿಮವಾಗಿ ಕ್ಷೇತ್ರ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಈ ಹಿಂದೆ ಅಖಂಡ ಶ್ರೀನಿವಾಸಮೂರ್ತಿ ಅವರು ಜೆಡಿಎಸ್‌ನಿಂದ ಸ್ಪರ್ಧಿಸಿ ಶಾಸಕರಾಗಿದ್ದರು. ಬಳಿಕ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಸಿಗದೆ ಬಿಎಸ್‌ಪಿ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು.


