ಎಸ್‌.ಆರ್‌.ವಿಶ್ವನಾಥ್‌ ಬಿಡಿಎ ಅಧ್ಯಕ್ಷರನ್ನಾಗಿ ನೇಮಕ| 2018ರ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿದ್ದ ಜೀವರಾಜ್‌| ಯಡಿಯೂರಪ್ಪಗೆ ಪರಮಾಪ್ತರಾಗಿರುವ ಜೀವರಾಜ್‌| 

ಬೆಂಗಳೂರು(ಡಿ.18): ಮಾಜಿ ಶಾಸಕ ಡಿ.ಎನ್‌.ಜೀವರಾಜ್‌ ಅವರನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿಕೊಳ್ಳುವ ಸಾಧ್ಯತೆ ಇದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರನ್ನು ಇತ್ತೀಚೆಗೆ ಬಿಡಿಎ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಆ ಸ್ಥಾನವು ತೆರವಾಗಿದೆ. ಹೀಗಾಗಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ಡಿ.ಎನ್‌.ಜೀವರಾಜ್‌ ಅವರನ್ನು ನೇಮಕ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. 

ಪಕ್ಷಕ್ಕೆ ಮುಜುಗರ ತರುವ ಹೇಳಿಕೆ: ಬಿಜೆಪಿ ನಾಯಕನಿಂದಲೇ ಯತ್ನಾಳ್‌ಗೆ ಖಡಕ್‌ ಎಚ್ಚರಿಕೆ..!

2018ರ ವಿಧಾನಸಭಾ ಚುನಾವಣೆಯಲ್ಲಿ ಸೋಲನುಭವಿಸಿರುವ ಜೀವರಾಜ್‌ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪರಮಾಪ್ತರಾಗಿರುವ ಕಾರಣ ಮತ್ತೆ ಅಧಿಕಾರ ನೀಡುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.